Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:4 - ಕನ್ನಡ ಸತ್ಯವೇದವು C.L. Bible (BSI)

4 ಆಗ ಸರ್ವೇಶ್ವರಸ್ವಾಮಿ ಸಮುವೇಲನನ್ನು ಕರೆದರು. ಸಮುವೇಲನು, “ಇಗೋ ಬಂದೇ,” ಎಂದು ಉತ್ತರಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು “ಇಗೋ ಬಂದೆ” ಎಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು ಬಂದೆನೆಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಸಮುವೇಲನನ್ನು ಕರೆದನು. ಸಮುವೇಲನು, “ಇಗೋ, ಇಲ್ಲಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಹೋವ ದೇವರು ಸಮುಯೇಲನನ್ನು ಕರೆದರು. ಅದಕ್ಕವನು, “ಇಗೋ, ನಾನು ಇಲ್ಲಿದ್ದೇನೆ,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:4
10 ತಿಳಿವುಗಳ ಹೋಲಿಕೆ  

ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.


ಪ್ರಭುವಿನ ಯಾಜಕರು, ಮೋಶೆ ಮತ್ತು ಆರೋನನು I ಸಮುವೇಲನು ಸಹ ಆತನ ಶರಣರಲಿ ಒಬ್ಬನು I ಪ್ರಾರ್ಥಿಸಲು ಇವರು, ಪ್ರಭುವು ಸದುತ್ತರಿಸಿದನು II


ಅದನ್ನು ನೋಡಲು ಅವನು ಮುಂದಕ್ಕೆ ಬರುವುದನ್ನು, ಸರ್ವೇಶ್ವರ ಸ್ವಾಮಿ ಕಂಡರು. ಪೊದೆಯೊಳಗಿಂದ, “ಮೋಶೇ, ಮೋಶೇ,” ಎಂದು ದೇವರು ಕರೆದರು. ಅದಕ್ಕವನು, “ಇಗೋ, ಇದ್ದೇನೆ,” ಎಂದು ಉತ್ತರಕೊಟ್ಟನು.


ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, “ಅಬ್ರಹಾಮನೇ,” ಎಂದು ಕರೆದರು. ಅವನು “ಇಗೋ, ಸಿದ್ಧನಿದ್ದೇನೆ” ಎಂದನು.


ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.


ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು.


ಒಡನೆ ಏಲಿಯ ಬಳಿಗೆ ಹೋಗಿ, “ಇಗೋ ಬಂದಿದ್ದೇನೆ; ನೀವು ನನ್ನನ್ನು ಕರೆದಿರಲ್ಲವೆ?” ಎಂದನು. ಏಲಿ, “ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ,” ಎಂದನು. ಸಮುವೇಲನು ಹೋಗಿ ಮಲಗಿದನು.


ಆದರೆ ಸರ್ವೇಶ್ವರನ ದೂತನು ಆಕಾಶದಿಂದ, "ಅಬ್ರಹಾಮನೇ, ಹೇ ಅಬ್ರಹಾಮನೇ" ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆ” ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು