Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:6 - ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಪುನಃ, “ಸಮುವೇಲನೇ,” ಎಂದು ಕರೆದರು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ ಬಂದಿದ್ದೇನೆ; ನೀವು ನನ್ನನ್ನು ಕರೆದಿರಲ್ಲವೆ?” ಎಂದನು. ಅವನು, “ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ತಿರುಗಿ, “ಸಮುವೇಲನೇ” ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲಾ” ಅನ್ನಲು ಅವನು, “ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲಾ, ಹೋಗಿ ಮಲಗಿಕೋ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ತಿರಿಗಿ - ಸಮುವೇಲನೇ ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ - ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅನ್ನಲು ಅವನು - ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲಾ, ಹೋಗಿ ಮಲಗಿಕೋ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಂತರ ಯೆಹೋವನು, “ಸಮುವೇಲನೇ” ಎಂದು ಮತ್ತೆ ಕರೆದನು. ಸಮುವೇಲನು ಮತ್ತೆ ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಎಂದು ಹೇಳಿದನು. ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು, “ಸಮುಯೇಲನೇ,” ಎಂದು ಅವನನ್ನು ತಿರುಗಿ ಕರೆದರು. ಆಗ ಸಮುಯೇಲನು ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಇದ್ದೇನೆ; ನನ್ನನ್ನು ಕರೆದೆಯಲ್ಲಾ,” ಎಂದನು. ಅದಕ್ಕವನು, “ನನ್ನ ಮಗನೇ, ನಾನು ಕರೆಯಲಿಲ್ಲ; ನೀನು ಹೋಗಿ ಮಲಗಿಕೋ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:6
6 ತಿಳಿವುಗಳ ಹೋಲಿಕೆ  

ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಚಾದೋಕನ ಮಗ ಅಹೀಮಾಚನು ಪುನಃ ಯೋವಾಬನಿಗೆ, “ಆಗುವುದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡಿ,” ಎಂದು ಬೇಡಿಕೊಂಡನು. ಅದಕ್ಕೆ ಯೋವಾಬನು, “ಮಗೂ, ಏಕೆ ಹೋಗಬೇಕೆನ್ನುತ್ತಿ? ಅದಕ್ಕಾಗಿ ನಿನಗೆ ಬಹುಮಾನವೇನೂ ಸಿಕ್ಕುವುದಿಲ್ಲ,” ಎಂದನು.


ಆ ವ್ಯಕ್ತಿ ಏಲಿಗೆ, “ನಾನು ರಣರಂಗದಲ್ಲಿ ಇದ್ದವನು; ಈಹೊತ್ತೇ ಅಲ್ಲಿಂದ ಓಡಿಬಂದೆ,” ಎನ್ನಲು ಏಲಿ, “ಮಗು, ಏನು ಸುದ್ದಿ?” ಎಂದು ಕೇಳಿದನು.


ಅನಂತರ ಕಣ್ಣೆತ್ತಿ, ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿದನು. “ನೀವು ಹೇಳಿದ ನಿಮ್ಮ ಕಿರಿಯ ತಮ್ಮ ಇವನೇನೋ?” ಎಂದು ಕೇಳಿ ಅವನಿಗೆ, “ಮಗು, ದೇವರ ಪ್ರೀತಿ ನಿನ್ನ ಮೇಲಿರಲಿ!” ಎಂದು ಹೇಳಿದನು.


ಒಡನೆ ಏಲಿಯ ಬಳಿಗೆ ಹೋಗಿ, “ಇಗೋ ಬಂದಿದ್ದೇನೆ; ನೀವು ನನ್ನನ್ನು ಕರೆದಿರಲ್ಲವೆ?” ಎಂದನು. ಏಲಿ, “ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ,” ಎಂದನು. ಸಮುವೇಲನು ಹೋಗಿ ಮಲಗಿದನು.


ಈವರೆಗೂ ಸಮುವೇಲನಿಗೆ ಸರ್ವೇಶ್ವರನ ನೇರ ಅನುಭವ ಆಗಿರಲಿಲ್ಲ. ದೇವರ ವಾಣಿ ಅವನಿಗೆ ಕೇಳಿಸಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು