1 ಸಮುಯೇಲ 3:9 - ಕನ್ನಡ ಸತ್ಯವೇದವು C.L. Bible (BSI)9 ಅವನು ಸಮುವೇಲನಿಗೆ, “ಹೋಗಿ ಮಲಗಿಕೋ; ಮತ್ತೆ ಅವರು ನಿನ್ನನ್ನು ಕರೆದರೆ, ‘ಸರ್ವೇಶ್ವರಾ, ಅಪ್ಪಣೆಯಾಗಲಿ; ತಮ್ಮ ದಾಸ ಕಾದಿದ್ದಾನೆ,’ ಎಂದು ಹೇಳು,” ಎಂದನು. ಸಮುವೇಲನು ಹಿಂದಿರುಗಿ ಹೋಗಿ ತನ್ನ ಸ್ಥಳದಲ್ಲೇ ಮಲಗಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಪುನಃ ಆತನು ನಿನ್ನನ್ನು ಕರೆದರೆ ಯೆಹೋವನೇ, ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದು ಹೇಳು ಅಂದನು. ಸಮುವೇಲನು ತಿರುಗಿ ಹೋಗಿ ತನ್ನ ಸ್ಥಳದಲ್ಲಿ ಮಲಗಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ತಿರಿಗಿ ಶಬ್ದವಾದರೆ ಯೆಹೋವನೇ, ಅಪ್ಪಣೆಯಾಗಲಿ, ನಿನ್ನ ದಾಸನು ಕಾದಿದ್ದಾನೆ ಎಂದು ಹೇಳು ಅಂದನು. ಸಮುವೇಲನು ತಿರಿಗಿ ಹೋಗಿ ತನ್ನ ಸ್ಥಳದಲ್ಲಿ ಮಲಗಿಕೊಳ್ಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಏಲಿಯು ಸಮುವೇಲನಿಗೆ, “ಹೋಗಿ ಮಲಗಿಕೋ. ನಿನ್ನನ್ನು ಮತ್ತೆ ಕರೆದರೆ, ‘ಅಪ್ಪಣೆಯಾಗಲಿ, ಯೆಹೋವನೇ ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ’ ಎಂದು ಉತ್ತರಿಸು” ಎಂಬುದಾಗಿ ಹೇಳಿದನು. ಸಮುವೇಲನು ತನ್ನ ಸ್ಥಳದಲ್ಲಿ ಮಲಗಲು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಏಲಿಯು ಸಮುಯೇಲನಿಗೆ, “ನೀನು ಹೋಗಿ ಮಲಗು; ಅವರು ನಿನ್ನನ್ನು ಕರೆದರೆ, ಆಗ ನೀನು, ‘ಯೆಹೋವ ದೇವರೇ, ಮಾತನಾಡಿ, ನಿಮ್ಮ ದಾಸನು ಕೇಳುತ್ತಾನೆ,’ ಎಂದು ಹೇಳು,” ಎಂದನು. ಹಾಗೆಯೇ ಸಮುಯೇಲನು ಹೋಗಿ ತನ್ನ ಸ್ಥಳದಲ್ಲಿ ಮಲಗಿದನು. ಅಧ್ಯಾಯವನ್ನು ನೋಡಿ |