Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:16 - ಕನ್ನಡ ಸತ್ಯವೇದವು C.L. Bible (BSI)

16 ಅವರು ಅಲ್ಲಿಗೆ ಹೋದಾಗ ಆ ದಾಳಿಕಾರರು ತಮಗೆ ಫಿಲಿಷ್ಟಿಯ ಹಾಗು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ್ದ ದೊಡ್ಡಕೊಳ್ಳೆಯ ನಿಮಿತ್ತ ಸಂತೋಷಿಸಿ, ತಿಂದು, ಕುಡಿದು, ಕುಣಿದಾಡುತ್ತಾ ಅಲ್ಲಿನ ಬಯಲಿನಲ್ಲಿ ವ್ಯಾಪಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ಅಲ್ಲಿಗೆ ಹೋದಾಗ ಆ ಗುಂಪಿನವರು ತಮಗೆ ಫಿಲಿಷ್ಟಿಯ ಮತ್ತು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ ದೊಡ್ಡ ಕೊಳ್ಳೆಯ ನಿಮಿತ್ತವಾಗಿ ಸಂತೋಷಿಸಿ, ಉಂಡು ಕುಡಿದು, ಕುಣಿದಾಡುತ್ತಾ ಅಲ್ಲಿನ ಬೈಲಿನಲ್ಲಿ ವ್ಯಾಪಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ಅಲ್ಲಿಗೆ ಹೋದಾಗ ಆ ಗುಂಪಿನವರು ತಮಗೆ ಫಿಲಿಷ್ಟಿಯ ಯೆಹೂದ ಪ್ರಾಂತಗಳಲ್ಲಿ ದೊರಕಿದ ದೊಡ್ಡ ಕೊಳ್ಳೆಯ ನಿವಿುತ್ತವಾಗಿ ಸಂತೋಷಿಸಿ ಉಂಡು ಕುಡಿದು ಕುಣಿದಾಡುತ್ತಾ ಅಲ್ಲಿನ ಬೈಲಿನಲ್ಲಿ ವ್ಯಾಪಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಈಜಿಪ್ಟಿನವನು ದಾವೀದನನ್ನು ಅಮಾಲೇಕ್ಯರ ಬಳಿಗೆ ಕರೆದುಕೊಂಡು ಹೋದನು. ಅವರು ತಿನ್ನುತ್ತಾ ಕುಡಿಯುತ್ತಾ ಸುತ್ತುವರಿದು ನೆಲದ ಮೇಲೆ ಬಿದ್ದಿದ್ದರು. ಫಿಲಿಷ್ಟಿಯರ ಮತ್ತು ಯೆಹೂದ್ಯರ ದೇಶದಿಂದ ಸೂರೆಮಾಡಿದ ವಸ್ತುಗಳಿಂದ ಸಂಭ್ರಮವನ್ನು ಆಚರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವನು ದಾವೀದನನ್ನು ಕರೆದುಕೊಂಡು ಅಲ್ಲಿಗೆ ಹೋದಾಗ, ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶದಲ್ಲಿಯೂ, ಯೆಹೂದ ದೇಶದಲ್ಲಿಯೂ ವ್ಯಾಪಿಸಿಕೊಂಡು, ಸಮಸ್ತ ಕೊಳ್ಳೆ ತೆಗೆದುಕೊಂಡು ಬಂದುದರಿಂದ, ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:16
22 ತಿಳಿವುಗಳ ಹೋಲಿಕೆ  

ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಆದರೆ ನೀವು ಹರ್ಷಾನಂದಗೊಂಡಿರಿ. ದನಕರುಗಳನ್ನು ಕೊಯ್ದಿರಿ, ಮಾಂಸವನ್ನು ಭುಜಿಸಿ ಮದ್ಯಪಾನ ಮಾಡಿದಿರಿ. “ಇಂದೇ ತಿಂದು ಕುಡಿಯೋಣ, ನಾಳೆ ಬರುತ್ತದೆ ಮರಣ,” ಎಂದು ಹೇಳಿಕೊಂಡಿರಿ.


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದಕೂಡಲೆ ಅವನನ್ನು ಹೊಡೆದು ಕೊಂದುಹಾಕಿ; ಹೆದರಬೇಡಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೆ? ಧೈರ್ಯದಿಂದಿರಿ, ಶೂರರಾಗಿರಿ,” ಎಂದು ಹೇಳಿದ್ದನು.


ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ನಾವು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು,” ಎಂದು ಉತ್ತರಕೊಟ್ಟನು.


ಅಂತೆಯೇ ಮರುದಿನ ಬೆಳಿಗ್ಗೆ ಜನರು ಎದ್ದು ದಹನಬಲಿಗಳನ್ನೂ ಸಮಾಧಾನಬಲಿಗಳನ್ನೂ ಸಮರ್ಪಿಸಿದರು. ಬಳಿಕ ತಿನ್ನಲೂ ಕುಡಿಯಲೂ ಕುಳಿತುಕೊಂಡರು. ಆಮೇಲೆ ಎದ್ದು ಕುಣಿದಾಡಿದರು.


“ನೀವು ಬಹಳ ಆಸ್ತಿಯುಳ್ಳವರಾಗಿ ದನಕರು, ಬೆಳ್ಳಿಬಂಗಾರ, ಕಂಚು ಕಬ್ಬಿಣ, ವಸ್ತ್ರ ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ. ನೀವು ಶತ್ರುಗಳಿಂದ ಪಡೆದ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲುಕೊಡಿ,” ಎಂದನು.


ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯಾ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ನನ್ನ ಯಜಮಾನನ ಕೈಗೆ ಒಪ್ಪಿಸುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣಮಾಡಿದರೆ ನಿನ್ನನ್ನು, ಆ ಗುಂಪಿನವರ ಬಳಿಗೆ ಕರೆದುಕೊಂಡು ಹೋಗುವೆನು,” ಎಂದನು.


ಜನರಿಗಾನಂದ ಅನಿರೀಕ್ಷಿತ ಆಸ್ತಿಯಲಿ I ನನಗಾದರೋ ಪರಮಾನಂದ ನಿನ್ನ ನುಡಿಯಲಿ II


ವೃದ್ಧಿಗೊಳಿಸಿರುವೆ ನೀನು ಆ ದೇಶವನು ಅಧಿಕರಿಸಿರುವೆ ಅದರ ತೋಷವನು ಸುಗ್ಗಿಕಾಲದಲಿ ಹಿಗ್ಗುವವರಂತೆ ಕೊಳ್ಳೆ ಹಂಚಿಕೊಳ್ಳುವವರಂತೆ ಹರ್ಷಿಸುವರವರು ನಿನ್ನ ಮುಂದೆ.


ಗಿದ್ಯೋನನು ಕಾಡುಗೊಲ್ಲರ ಪ್ರದೇಶ ಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳಿದುಕೊಂಡಿದ್ದ ಆ ಪಾಳೆಯದ ಮೇಲೆ ದಾಳಿಮಾಡಿದನು.


ಅಲ್ಲಿ ಅವರು, ಅಳಿದುಳಿದಿದ್ದ ಅಮಾಲೇಕ್ಯರನ್ನು ಸಂಹರಿಸಿ ತಾವೇ ಅಲ್ಲಿ ನೆಲೆಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು