1 ಸಮುಯೇಲ 30:21 - ಕನ್ನಡ ಸತ್ಯವೇದವು C.L. Bible (BSI)21 ಅನಂತರ ದಾವೀದನು ಮೊದಲು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋದನು. ಅವನನ್ನೂ ಅವನೊಂದಿಗಿದ್ದ ಜನರನ್ನೂ ಎದುರುಗೊಳ್ಳಲು ಆ ಜನರು ಬಂದರು. ದಾವೀದನು ಅವರನ್ನು ಸಂಧಿಸಿ ಕ್ಷೇಮಸಮಾಚಾರವನ್ನು ವಿಚಾರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅನಂತರ ದಾವೀದನು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ, ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಸಂಧಿಸಿ, ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅನಂತರ ದಾವೀದನು ಮೊದಲು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಇಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಎದುರುಗೊಳ್ಳಬಂದರು. ದಾವೀದನು ಅವರನ್ನು ಸಂಧಿಸಿ ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದಾವೀದನು ತನ್ನ ಇನ್ನೂರು ಮಂದಿ ಉಳಿದುಕೊಂಡಿದ್ದ ಬೆಸೋರ್ ಹಳ್ಳಕ್ಕೆ ಬಂದನು. ತಮ್ಮ ಅತಿಯಾದ ಆಯಾಸದಿಂದಲೂ ಬಲಹೀನತೆಯಿಂದಲೂ ದಾವೀದನನ್ನು ಹಿಂಬಾಲಿಸಲಾಗದ ಜನರೇ ಇವರು. ದಾವೀದನನ್ನು ಮತ್ತು ಅವನೊಡನೆ ಹೋಗಿದ್ದ ಸೈನಿಕರನ್ನು ಸಂಧಿಸಲು ಇವರು ಹೊರಗೆ ಬಂದರು. ದಾವೀದ ಮತ್ತು ಅವನ ಸೈನ್ಯವು ಸಮೀಪಿಸಿದಾಗ, ಬೆಸೋರ್ ಹಳ್ಳದಲ್ಲಿದ್ದ ಜನರು ಅವರನ್ನು ವಂದಿಸಿದರು. ದಾವೀದನು ಸಹ ಅವರನ್ನು ಸಂಧಿಸಿ ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ದಣಿದಿದ್ದರಿಂದ ದಾವೀದನ ಹಿಂದೆ ಬರಲಾರದೆ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ, ಅವರು ದಾವೀದನನ್ನೂ, ಅವನ ಸಂಗಡ ಇದ್ದ ಜನರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ, ಅವರ ಕ್ಷೇಮಸಮಾಚಾರವನ್ನು ಕೇಳಿದನು. ಅಧ್ಯಾಯವನ್ನು ನೋಡಿ |