Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:6 - ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೈನ್ಯದಲ್ಲಿದ್ದ ಎಲ್ಲರೂ ದುಃಖತಪ್ತರಾಗಿದ್ದರು ಮತ್ತು ಕೋಪಗೊಂಡಿದ್ದರು; ಯಾಕೆಂದರೆ ಅವರ ಗಂಡು ಮತ್ತು ಹೆಣ್ಣುಮಕ್ಕಳೆಲ್ಲ ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದರು. ದಾವೀದನನ್ನು ಕಲ್ಲುಗಳಿಂದ ಕೊಲ್ಲಬೇಕೆಂದು ಅವರು ಮಾತಾಡಿಕೊಳ್ಳುತ್ತಿದ್ದರು. ದಾವೀದನು ಇದರಿಂದ ತಳಮಳಗೊಂಡರೂ ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಜನರೆಲ್ಲರೂ ಪ್ರತಿಯೊಬ್ಬನು ತನ್ನ ಪುತ್ರಪುತ್ರಿಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು, ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ, ಅವನು ಬಹಳ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದನು. ಆದರೂ ದಾವೀದನು ಯೆಹೋವ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:6
51 ತಿಳಿವುಗಳ ಹೋಲಿಕೆ  

ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ನರಮಾನವರು ಏನು ಮಾಡಿಯಾರೆನಗೆ II


ಎನ್ನ ಮನಕೆ ಶಾಂತಿ ದೇವನಿಂದಲೆ I ನನಗೆ ನಂಬಿಕೆ ನಿರೀಕ್ಷೆ ಆತನಿಂದಲೆ II


ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ I ಪ್ರಾರ್ಥನೆ ಮಾಡಿದೆ ಆ ನನ್ನ ದೇವನಲಿ I ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ II


ನಿವಾರಿಸೆನ್ನ ಮನಕ್ಲೇಶವನು I ಪರಿಹರಿಸೆನ್ನ ದುಃಖದುಗುಡವನು II


ಆದ್ದರಿಂದ, “ಸರ್ವೇಶ್ವರ ನನಗೆ ಸಹಾಯಕ, ನಾನು ಭಯಪಡೆನು; ಮಾನವನು ನನಗೇನು ಮಾಡಬಲ್ಲನು?” ಎಂದು ನಾವು ಧೈರ್ಯದಿಂದ ಹೇಳಲು ಸಾಧ್ಯ.


ಆತನ ವಿಶ್ವಾಸ ಮತ್ತು ಭರವಸೆ ಎಷ್ಟರಮಟ್ಟಿಗೆ ಇತ್ತೆಂದರೆ, ಈ ದೈವವಾಗ್ದಾನವು ನೆರವೇರುವ ನಿರೀಕ್ಷೆ ಇಲ್ಲದಿದ್ದರೂ ಆತನು ದೇವರನ್ನು ನಂಬಿದನು. ಆದುದರಿಂದಲೇ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಅಸಂಖ್ಯಾತ ಆಗುವುದು,” ಎಂಬ ಹೇಳಿಕೆಯಂತೆ ಆತನು ಅನೇಕ ಜನಾಂಗಗಳಿಗೆ ಮೂಲಪಿತನಾದನು.


ನಾ ನುಡಿದೆನಾದರೂ ‘ಬಹಳ ಸಂಕಟದಲ್ಲಿರುವೆ’ನೆಂದು I ನಾನುಸುರಿದೆನಾದರೂ ‘ಯಾರನು ನಂಬಲಾಗ’ದೆಂದು I ನನ್ನಲ್ಲಿ ಅಳಿಯದೆ ಉಳಿಯಿತಾ ವಿಶ್ವಾಸವು ಎಂದೆಂದು II


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಆಗ ಮೋಶೆ ಸರ್ವೇಶ್ವರನಿಗೆ ಮೊರೆಯಿಟ್ಟನು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವಂತಿದ್ದಾರೆ” ಎಂದು ಪ್ರಾರ್ಥಿಸಿದನು.


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ನಾವು ಇಕ್ಕಟ್ಟುಬಿಕ್ಕಟ್ಟುಗಳಿಗೆ ಒಳಗಾಗಿದ್ದರೂ ನಜ್ಜುಗುಜ್ಜಾಗಲಿಲ್ಲ; ಸಂಶಯ ಸಂದೇಹಗಳಿಗೊಳಗಾದರೂ ನಿರಾಶೆಗೊಳ್ಳಲಿಲ್ಲ.


ಹನ್ನಳು ಬಹು ದುಃಖದಿಂದ ಕಣ್ಣೀರಿಡುತ್ತಾ ಸರ್ವೇಶ್ವರನಲ್ಲಿ ಹೀಗೆಂದು ಪ್ರಾರ್ಥಿಸಿದಳು:


ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟುಹೋದರು.


ಆದರೆ ಜನಸಂದಣಿ ಅವರಿಗೆ ಕಿವಿಗೊಡಲೊಲ್ಲದೆ ಕಲ್ಲೆಸೆದು ಅವರನ್ನು ಕೊಲ್ಲಬೇಕೆಂದಿದ್ದರು. ಆಗ ಸರ್ವೇಶ್ವರನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಹೊಳೆದು ಇಸ್ರಯೇಲರೆಲ್ಲರಿಗೂ ಕಾಣಿಸಿಕೊಂಡಿತು.


ನಾವು ಮಕೆದೋನಿಯವನ್ನು ತಲುಪಿದ ಮೇಲೂ ದೇಹಕ್ಕೆ ಕಿಂಚಿತ್ತಾದರೂ ವಿಶ್ರಾಂತಿ ಸಿಗಲಿಲ್ಲ. ಎಲ್ಲಾ ಕಡೆಗಳಿಂದಲೂ ನಮಗೆ ತೊಂದರೆ ತಾಪತ್ರಯಗಳು ಬಂದುವು. ಹೊರಗೆ ಕಲಹ, ಒಳಗೆ ತಳಮಳ;


ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ಇಗೋ, ದೇವರು ಕೊಲ್ಲುವನೆನ್ನನು ಅದಕ್ಕಾಗಿ ನಾನು ಕಾದಿರುವೆನು. ಆದರೂ ನನ್ನ ನಡತೆ ಸರಿಯೆಂಬುದನು ಆತನ ಮುಂದೆಯೆ ರುಜುವಾತುಪಡಿಸುವೆನು.


ನಾವು ಕಷ್ಟಸಂಕಟಗಳನ್ನು ಸಹಿಸಬೇಕಾಗುವುದು ಸಹ ನಿಮ್ಮ ಉಪಶಮನ ಹಾಗೂ ಸಾಂತ್ವನಕ್ಕಾಗಿಯೇ. ನಮ್ಮ ಕಷ್ಟಸಂಕಟಗಳು ನಿವಾರಣೆಯಾದರೆ ಅದೂ ನಿಮ್ಮ ಆದರಣೆಗಾಗಿಯೇ. ನಾವು ಪಡುವ ಯಾತನೆಯನ್ನು ನೀವು ಸಹನೆಯಿಂದ ಅನುಭವಿಸುವಂತೆ ಅದು ಹುರಿದುಂಬಿಸುತ್ತದೆ.


ದೇವರ ವಾಗ್ದಾನದಲ್ಲಿ ಆತನು ಸಂಶಯಪಡಲಿಲ್ಲ. ಅಪನಂಬಿಕೆಯಿಂದ ಚಂಚಲಚಿತ್ತನಾಗಲೂ ಇಲ್ಲ. ಬದಲಾಗಿ ಆತನ ವಿಶ್ವಾಸ ವೃದ್ಧಿಯಾಯಿತು. ಆತನು ದೇವರನ್ನು ಹೊಗಳಿ ಕೊಂಡಾಡಿದನು.


“ಹಾಗಾದರೆ, ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನು ಏನುಮಾಡಲಿ?” ಎಂದು ಪಿಲಾತನು ಮರುಪ್ರಶ್ನೆ ಹಾಕಿದನು. ಅವರೆಲ್ಲರು, “ಅವನನ್ನು ಶಿಲುಬೆಗೇರಿಸಿ,” ಎಂದು ಉತ್ತರಿಸಿದರು.


ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ.


ಎನ್ನ ಮನಕ್ಕೆ ಶಾಂತಿ ದೇವನಿಂದಲೆ I ನನ್ನ ಜೀವೋದ್ಧಾರ ಆತನಿಂದಲೆ II


ನಿನ್ನ ಜಲಪಾತಗಳ ಘನನಿನಾದ, ಮಡುವು ಮಡುವನು ಕರೆದಂತಿದೆ I ನಿನ್ನಲೆಗಳು, ಎಲ್ಲ ತರಂಗಗಳು ತಲೆಯ ಮೇಲೆ ಹಾದು ಹೋದಂತಿವೆ II


ದಾನ್ಯರು ಅವನಿಗೆ, “ನಮ್ಮಲ್ಲಿ ಕೆಲವರು ಸಿಟ್ಟಿನವರು. ಅವರು ನಿಮ್ಮ ಮೇಲೆ ಬಿದ್ದರೆ ನೀನೂ ನಿನ್ನ ಮನೆಯವರೂ ಪ್ರಾಣನಷ್ಟಪಡುವಿರಿ. ಆದುದರಿಂದ ಬಾಯಿಮುಚ್ಚಿಕೊಂಡು ಹೋಗಿ,” ಎಂದು ಹೇಳಿ ಮುಂದೆ ನಡೆದರು.


ಆಗ ಯಕೋಬನು ಬಹಳ ದಿಗಿಲುಗೊಂಡನು, ಕಳವಳಗೊಂಡನು; ತನ್ನ ಜನರನ್ನೂ ಕುರಿ, ದನ, ಒಂಟೆಗಳನ್ನೂ ಎರಡು ಪರಿವಾರಗಳಾಗಿ ವಿಂಗಡಿಸಿದನು.


ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ತಮ್ಮ ತಂದೆ ಮತ್ತು ಅವನ ಜನರೂ ಶೂರರಾಗಿದ್ದಾರೆಂದೂ, ಈಗಲಾದರೋ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷ ಉಳ್ಳವರಾಗಿದ್ದಾರೆಂದೂ ತಮಗೆ ಗೊತ್ತುಂಟಲ್ಲವೆ? ಇದಲ್ಲದೆ ತಮ್ಮ ತಂದೆ ಯುದ್ಧ ನಿಪುಣನು; ಜನರ ಮಧ್ಯದಲ್ಲಿ ರಾತ್ರಿ ಕಳೆಯುವುದಿಲ್ಲ.


ಗೇಹಜಿಯು ಆಕೆಯನ್ನು ದೂಡುವುದಕ್ಕಾಗಿ ಹತ್ತಿರ ಬಂದನು. ದೈವಪುರುಷನು, “ಬಿಡು, ತಡೆಯಬೇಡ; ಆಕೆಗೆ ಮನಸ್ಸಿನಲ್ಲಿ ತೀವ್ರ ದುಃಖವಿರುವ ಹಾಗೆ ತೋರುತ್ತದೆ. ಸರ್ವೇಶ್ವರ ಆಕೆಯ ದುಃಖವನ್ನು ನನಗೆ ತಿಳಿಸಲಿಲ್ಲ; ಮರೆಮಾಡಿದ್ದಾರೆ,” ಎಂದು ಹೇಳಿದನು.


ಆಗ ಸೌಲನ ಮಗ ಯೋನಾತಾನನು ಅಲ್ಲಿಗೆ ಹೋಗಿ,


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ಪ್ರಭುವಿಗಾಗಿ ಕಾದಿಹ ಜನರೆ, ನಿಮಗಿರಲಿ ಅಭಯ I ಧೈರ್ಯದಿಂದಿರಲಿ ನಿರುತ ನಿಮ್ಮೆಲ್ಲರ ಹೃದಯ II


ದುರುಳರ ಕೈಯಿಂದೆನ್ನನು ದೇವಾ, ಬಿಡಿಸಯ್ಯಾ I ಕ್ರೂರ ಕೇಡಿಗರ ವಂಶದಿಂದೆನ್ನನು ತಪ್ಪಿಸಯ್ಯಾ II


ಸ್ವಾಮಿ ದೇವಾ, ನೀನೇ ನನ್ನ ಭರವಸೆ I ಬಾಲ್ಯದಿಂದಲೂ ನೀನೇ ನನ್ನ ನಂಬಿಕೆ II


“ಸಂಕಟದಲಿ, ಸರ್ವೇಶ್ವರಾ, ನಾ ನಿನಗೆ ಮೊರೆಯಿಟ್ಟೆ ನೀನೆನ್ನ ಮೊರೆಗೆ ಕಿವಿಗೊಟ್ಟೆ. ಪಾತಾಳದಂತರಾಳದಿಂದ ನಿನ್ನ ನೆರವನ್ನು ಬೇಡಿದೆ ನೀನೆನ್ನ ಪ್ರಾರ್ಥನೆಯನ್ನಾಲಿಸಿದೆ.


ಇಸ್ರಯೇಲರು ಪುನಃ ಧೈರ್ಯ ತಂದುಕೊಂಡು ಮೊದಲನೆಯ ದಿನ ವ್ಯೂಹಕಟ್ಟಿದ ಸ್ಥಳದಲ್ಲೇ ಮತ್ತೆ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.


ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಏಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿ ಇದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಕೈಬಿಟ್ಟು ದೂರಹೋಗಿದ್ದಾರೆ; ಅವರು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲರು. ಆದುದರಿಂದ ನಾನು ಮಾಡಬೇಕಾದುದನ್ನು ನೀನು ತಿಳಿಸುವೆಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು,” ಎಂದನು.


ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು