Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 31:10 - ಕನ್ನಡ ಸತ್ಯವೇದವು C.L. Bible (BSI)

10 ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು; ಅವನ ಶವವನ್ನು ಬೇತ್ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಷ್ಟೋರೆತಳ ದೇವಾಲಯದಲ್ಲಿ ಅವರು ಸೌಲನ ಆಯುಧಗಳನ್ನು ಇಟ್ಟರು. ಫಿಲಿಷ್ಟಿಯರು ಸೌಲನ ದೇಹವನ್ನು ಬೇತ್‌ಷೆಯಾನಿನ ಗೋಡೆಗೆ ನೇತುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸೌಲನ ಆಯುಧಗಳನ್ನು ಅಷ್ಟೋರೆತ್ ಮಂದಿರದಲ್ಲಿ ಇಟ್ಟು, ಅವನ ಶವವನ್ನು ಬೇತ್ ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 31:10
7 ತಿಳಿವುಗಳ ಹೋಲಿಕೆ  

ಅವರು ಸರ್ವೇಶ್ವರನನ್ನು ಬಿಟ್ಟು ‘ಬಾಳ್ ಅಷ್ಟೋರೆತ್’ ಎಂಬ ದೇವತೆಗಳನ್ನು ಪೂಜಿಸತೊಡಗಿದರು.


ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತ್ಯಗಳಲ್ಲಿ ಬೇತ್ ಷೆಯಾನ್, ಇಬ್ಲೆಯಾಮ್, ದೋರ್ ಎಂಬ ನಗರಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ನಗರಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.


ಅವನು, “ನೀವು ಏಲಾ ತಗ್ಗಿನಲ್ಲಿ ಕೊಂದುಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಬಟ್ಟೆಯಲ್ಲಿ ಸುತ್ತಿ ಏಫೋದಿನ ಹಿಂದೆ ಇಡಲಾಗಿದೆ; ಬೇಕಾದರೆ ಅದನ್ನು ತೆಗೆದುಕೊಳ್ಳಿ. ಅದರ ಹೊರತು ನನ್ನ ಬಳಿ ಬೇರೊಂದಿಲ್ಲ,” ಎಂದು ಉತ್ತರಕೊಟ್ಟನು. ದಾವೀದನು, “ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ, ಅದನ್ನೇ ಕೊಡು,” ಎಂದು ಹೇಳಿ ತೆಗೆದುಕೊಂಡನು.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.


ಮನಸ್ಸೆಕುಲದವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ, ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ನಿರ್ಧರಿಸಿಕೊಂಡರು.


ಆಗ ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು, ಅಲ್ಲಿ ಅವುಗಳನ್ನು ದಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು