Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 31:2 - ಕನ್ನಡ ಸತ್ಯವೇದವು C.L. Bible (BSI)

2 ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಫಿಲಿಷ್ಟಿಯರು ಸೌಲ ಮತ್ತು ಅವನ ಮಕ್ಕಳೊಂದಿಗೆ ಭೀಕರವಾಗಿ ಹೋರಾಡಿದರು. ಸೌಲನ ಮಕ್ಕಳಾದ ಯೋನಾತಾನ, ಅಬೀನಾದಾಬ ಮತ್ತು ಮಲ್ಕೀಷೂವ ಎಂಬವರನ್ನು ಫಿಲಿಷ್ಟಿಯರು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಫಿಲಿಷ್ಟಿಯರು ಸೌಲನನ್ನೂ, ಅವನ ಪುತ್ರರನ್ನೂ ಬಿಡದೆ ಬೆನ್ನಟ್ಟಿ, ಸೌಲನ ಪುತ್ರರಾದ ಯೋನಾತಾನನನ್ನೂ, ಅಬೀನಾದಾಬನನ್ನೂ, ಮಲ್ಕೀಷೂವನನ್ನೂ ಕೊಂದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 31:2
14 ತಿಳಿವುಗಳ ಹೋಲಿಕೆ  

ಕೀಷನ ತಂದೆ ನೇರ. ಕೀಷ ಅರಸ ಸೌಲನ ತಂದೆ. ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಎಂಬವರು ಸೌಲನ ಮಕ್ಕಳು.


ಸೌಲನ ಗಂಡುಮಕ್ಕಳ ಹೆಸರು ಇವು: ಯೋನಾತಾನ್, ಇಷ್ವಿ ಹಾಗು ಮಲ್ಕೀಷೂವ; ಅವನ ಹೆಣ್ಣುಮಕ್ಕಳ ಹೆಸರು ಮೇರಬ್ ಹಾಗು ಮೀಕಲ್.


ನೇರನು ಕೀಷನ ತಂದೆ. ಕೀಷ ಸೌಲನ ತಂದೆ. ಸೌಲನಿಗೆ ನಾಲ್ವರು ಮಕ್ಕಳು: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಪ್ಬಾಳ್ ಎಂಬವರು.


ಇವನ ಇಬ್ಬರು ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿ, ಅವನಿಗೆ ಬೇಡಿಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಅವನು, “ನಾನು ಅಕಸ್ಮಾತ್ತಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಹೋದಾಗ ಸೌಲ ತಮ್ಮ ಭರ್ಜಿಯನ್ನೂರಿಕೊಂಡು ನಿಂತಿದ್ದರು. ರಥಿಕರೂ ರಾಹುತರೂ ಅವರನ್ನು ಹಿಂದಟ್ಟಿಬರುತ್ತಿರುವುದನ್ನೂ ಕಂಡೆ.


ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ; ನೀನು ಇಸ್ರಯೇಲರ ಅರಸನಾಗುವೆ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆ ಸೌಲ ತಿಳಿದುಕೊಂಡಿದ್ದಾರೆ.” ಎಂದು ಹೇಳಿ ದೇವರ ಹೆಸರಿನಲ್ಲಿ ಧೈರ್ಯತುಂಬಿದನು.


ಎಫ್ರಯಿಮ್ ಪರ್ವತಪ್ರಾಂತ್ಯದಲ್ಲಿ ಅಡಗಿಕೊಂಡಿದ್ದ ಇಸ್ರಯೇಲರಿಗೆ ಫಿಲಿಷ್ಟಿಯರು ಓಡಿಹೋದರೆಂಬ ಸಮಾಚಾರ ಮುಟ್ಟಿದಾಗ ಅವರೂ ಯುದ್ಧಕ್ಕೆ ಬಂದು ಅವರನ್ನು ಬೆನ್ನಟ್ಟಿದರು.


ಅವರೊಡನೆ ಅವನೂ ಅವನ ಮಗನಾದ ಯೋನಾತಾನನೂ ಬೆನ್ಯಾಮೀನ್ಯರ ಗೆಬದಲ್ಲಿ ಇಳಿದುಕೊಂಡರು. ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು.


ಅವನು ಅವರಲ್ಲಿ ಮೂರು ಸಾವಿರ ಜನರನ್ನು ಮಿಕ್ಮಾಷಿನಲ್ಲೂ ಬೇತೇಲಿನ ಗುಡ್ಡದಲ್ಲೂ ಇಟ್ಟುಕೊಂಡನು. ಉಳಿದ ಸಾವಿರ ಜನರನ್ನು ಬೆನ್ಯಾಮೀನ್ಯರ ಗೆಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಬೇರೆ ಇಸ್ರಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ನಿನ್ನ ಸಮೇತ ಇಸ್ರಯೇಲರನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಸರ್ವೇಶ್ವರ ಇಸ್ರಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು,” ಎಂದು ಹೇಳಿದನು.


ಆದರೆ ಫಿಲಿಷ್ಟಿಯರು ಅವರನ್ನು ಬೆನ್ನಟ್ಟಿ ಸೌಲನ ಮಕ್ಕಳಾದ ಯೋನಾತಾನ, ಅಬೀನಾದಾಬ, ಮಲ್ಕೀಷೂವರನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು