Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 31:4 - ಕನ್ನಡ ಸತ್ಯವೇದವು C.L. Bible (BSI)

4 ಆದುದರಿಂದ ಸೌಲನು ಭಯಭೀತನಾಗಿ ತನ್ನ ಆಯುಧವಾಹಕನಿಗೆ, “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು ಅಪಕೀರ್ತಿಯನ್ನುಂಟುಮಾಡಬಹುದು,” ಎಂದು ಹೇಳಿದನು. ವಾಹಕನು ಹೆದರಿ, “ಒಲ್ಲೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದುದರಿಂದ ಸೌಲನು ಬಹು ಭೀತನಾಗಿ ತನ್ನ ಆಯುಧವಾಹಕನಿಗೆ “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು. ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು, ಅಪಕೀರ್ತಿಯನ್ನು ಉಂಟುಮಾಡಾರು” ಎಂದು ಹೇಳಲು ಅವನು ಹೆದರಿ, “ನಾನು ಕೊಲ್ಲಲಾರೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದದರಿಂದ ಸೌಲನು ಬಹುಭೀತನಾಗಿ ತನ್ನ ಆಯುಧವಾಹಕನಿಗೆ - ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು ಅಪಕೀರ್ತಿಯನ್ನುಂಟುಮಾಡಾರು ಎಂದು ಹೇಳಲು ಅವನು ಹೆದರಿ ಒಲ್ಲೆನು ಅಂದನು. ಆದದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೌಲನು ತನ್ನ ಅಯುಧವಾಹಕನಿಗೆ, “ನಿನ್ನ ಖಡ್ಗದಿಂದ ಇರಿದು ನನ್ನನ್ನು ಕೊಂದುಬಿಡು. ಆಗ, ಈ ಪರದೇಶೀಯರು ನನ್ನನ್ನು ಗಾಯಗೊಳಿಸುವುದಕ್ಕಾಗಲಿ ಅಪಹಾಸ್ಯ ಮಾಡುವುದಕ್ಕಾಗಲಿ ಸಾಧ್ಯವಾಗುವುದಿಲ್ಲ” ಎಂದನು. ಆದರೆ ಸೌಲನ ಆಯುಧವಾಹಕನು ನಿರಾಕರಿಸಿದನು. ಸೌಲನ ಸಹಾಯಕನು ಬಹಳ ಭಯಗೊಂಡಿದ್ದನು. ಆದ್ದರಿಂದ ಸೌಲನು ತನ್ನ ಸ್ವಂತ ಖಡ್ಗದಿಂದಲೇ ಇರಿದು ಆತ್ಮಹತ್ಯೆ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದಕಾರಣ ಅವನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ ನೀನು ನಿನ್ನ ಖಡ್ಗವನ್ನು ಹಿರಿದು, ನನ್ನನ್ನು ತಿವಿ,” ಎಂದನು. ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 31:4
19 ತಿಳಿವುಗಳ ಹೋಲಿಕೆ  

ಸಾರಬೇಡಿ ಈ ಸುದ್ದಿಯನು ‘ಗತ್’ ಊರಿನಲಿ ಘೋಷಿಸಬೇಡಿ ಅಷ್ಕೆಲೋನಿನ ಬೀದಿಗಳಲಿ. ಏಕೆನೆ, ಉಲ್ಲಾಸಿಸಿಯಾರು ಆ ಫಿಲಿಷ್ಟಿಯ ಮಹಿಳೆಯರು; ಜಯಘೋಷ ಮಾಡಿಯಾರು ಸುನ್ನತಿಯಿಲ್ಲದವರಾ ಸ್ತ್ರೀಯರು!


ಅವನು, “ನಾನು ಅಕಸ್ಮಾತ್ತಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಹೋದಾಗ ಸೌಲ ತಮ್ಮ ಭರ್ಜಿಯನ್ನೂರಿಕೊಂಡು ನಿಂತಿದ್ದರು. ರಥಿಕರೂ ರಾಹುತರೂ ಅವರನ್ನು ಹಿಂದಟ್ಟಿಬರುತ್ತಿರುವುದನ್ನೂ ಕಂಡೆ.


ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು,” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.


ಇವನ ಉಳಿದ ಚರಿತ್ರೆ, ಪರಾಕ್ರಮ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.


ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ದಾವೀದನು, “ಕೈಯೆತ್ತಿ ಸರ್ವೇಶ್ವರನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ನೀನು ಹಿಂಜರಿಯಲಿಲ್ಲ ಏಕೆ?” ಎಂದು ಹೇಳಿ


ನಿಮ್ಮ ಸೇವಕನಾದ ನನ್ನಿಂದ ಆ ಸಿಂಹಕ್ಕೂ ಕರಡಿಗೂ ಆದ ಗತಿಯೇ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು; ಏಕೆಂದರೆ ಜೀವಸ್ವರೂಪರಾದ ದೇವರ ಸೈನ್ಯವನ್ನು ನಿಂದಿಸುತ್ತಿದ್ದಾನೆ.


ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.


ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ವರಿಸಬೇಕೆಂದಿರುವೆಯಾ? ನಿನ್ನ ಬಂಧುಗಳಲ್ಲಿ ಅದೂ ನಮ್ಮ ಎಲ್ಲಾ ಜನರಲ್ಲಿ ನಿನಗೆ ಹೆಣ್ಣು ಸಿಕ್ಕುವುದಿಲ್ಲವೇ?” ಎಂದು ಪ್ರತಿಭಟಿಸಿದರು. ಅವನು, “ನನಗಾಗಿ ಆಕೆಯನ್ನೇ ತನ್ನಿ. ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ,” ಎಂದನು.


ಆಗ ಅವನು ತನ್ನ ಆಯುಧವಾಹಕ ಯುವಕನನ್ನು ಕರೆದು, ‘ದೇವರಲ್ಲಿ ನಂಬಿಕೆ ಇಲ್ಲದ ಈ ಫಿಲಿಷ್ಟಿಯರ ಹಸ್ತಗಳಿಂದ ನಾನು ಸಾಯಬಾರದು. ನಿನ್ನ ಖಡ್ಗವನ್ನು ಹಿಡಿದು ನನ್ನನ್ನು ಕೊಂದುಬಿಡು’, ಎಂದನು. ಆದರೆ ಆ ಯುವಕನು ಭಯಗೊಂಡು ಹಿಂಜರಿದನು. ಸೌಲನು ತನ್ನ ಖಡ್ಗವನ್ನೇ ಎತ್ತಿಟ್ಟು ಅದರ ಮೇಲೆ ಹಾರಿಬಿದ್ದು ಸತ್ತುಹೋದನು.


ಸೌಲನು ಸತ್ತದ್ದನ್ನು ಅವನ ಆಯುಧವಾಹಕನು ಕಂಡು ತಾನೂ ಕತ್ತಿಯ ಮೇಲೆ ಬಿದ್ದು ಅಲ್ಲಿಯೇ ಸತ್ತನು.


ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕಾಗಿ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.


ಪಟ್ಟಣ ಅವರ ವಶವಾದದ್ದನ್ನು ಜಿಮ್ರಿ ಕಂಡು, ಅರಮನೆಯ ಗರ್ಭಗೃಹವನ್ನು ಹೊಕ್ಕು ಅರಮನೆಗೆ ಬೆಂಕಿಹೊತ್ತಿಸಿ ಸುಟ್ಟುಕೊಂಡು ಸತ್ತನು.


ಇದಲ್ಲದೆ ದಾವೀದನು, “ಸರ್ವೇಶ್ವರನಾಣೆ, ಅವನು ಸರ್ವೇಶ್ವರನಿಂದಲೇ ಸಾಯುವನು; ಇಲ್ಲವೆ ಕಾಲತುಂಬಿ ಮರಣಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.


ಸೌಲನು ಸತ್ತನಂತರ ಸಂಭವಿಸಿದ ಘಟನೆಗಳು: ದಾವೀದನು ಅಮಾಲೇಕ್ಯರನ್ನು ಸದೆಬಡಿದು ಬಂದು ಚಿಕ್ಲಗಿನಲ್ಲಿ ಎರಡು ದಿವಸ ತಂಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು