Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 31:8 - ಕನ್ನಡ ಸತ್ಯವೇದವು C.L. Bible (BSI)

8 ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತು ಬಿದ್ದಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ, ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲುಕೊಳ್ಳುವದಕ್ಕೆ ಬಂದಾಗ ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವದನ್ನು ಕಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮಾರನೆಯ ದಿನ, ಸತ್ತದೇಹಗಳಿಂದ ವಸ್ತುಗಳನ್ನು ದೋಚಲು ಫಿಲಿಷ್ಟಿಯರು ಬಂದರು. ಸೌಲನು ಮತ್ತು ಅವನ ಮೂರು ಜನ ಮಕ್ಕಳು ಗಿಲ್ಬೋವ ಶಿಖರದಲ್ಲಿ ಸತ್ತಿರುವುದನ್ನು ಅವರು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮಾರನೆಯ ದಿವಸದಲ್ಲಿ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳಲು ಬಂದಾಗ, ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವ ಸೌಲನನ್ನೂ, ಅವನ ಮೂವರು ಪುತ್ರರನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 31:8
7 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವುದಕ್ಕಾಗಿ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧ, ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟನ್ನೂ ಸುಲಿದುಕೊಂಡರು. ಕೊಳ್ಳೆಯ ಮೊತ್ತ ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು.


ಕಾಳಗದ ಮರುದಿನ ಫಿಲಿಷ್ಟಿಯರು ಸತ್ತವರ ಒಡವೆವಸ್ತುಗಳನ್ನು ಸುಲಿಗೆಮಾಡಲು ಹೋದಾಗ, ಗಿಲ್ಬೋವ ಬೆಟ್ಟದಲ್ಲಿ ಸೌಲ ಹಾಗೂ ಅವನ ಮಕ್ಕಳು ಸತ್ತುಬಿದ್ದಿರುವುದನ್ನು ಕಂಡರು.


ಇಸ್ರಯೇಲ್ ಯೋಧರು ಸೋತರು; ಸೌಲನೂ ಅವನ ಮಕ್ಕಳೂ ಸತ್ತರು ಎಂಬ ಸಮಾಚಾರವನ್ನು ಕಣಿವೆಯ ಆಚೆಯಲ್ಲೂ ಜೋರ್ಡನಿನ ಆಚೆಯಲ್ಲೂ ವಾಸವಾಗಿದ್ದ ಇಸ್ರಯೇಲರು ಕೇಳಿ ತಮ್ಮ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.


ಸೌಲನ ತಲೆಯನ್ನು ಕಡಿದು, ಅವನ ಆಯುಧಗಳನ್ನು ತೆಗೆದುಕೊಂಡು, ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿದರು. ತಮ್ಮ ಎಲ್ಲಾ ಜನರಿಗೂ ದೇವಸ್ಥಾನಗಳಿಗೂ ವಿಜಯವಾರ್ತೆಯನ್ನು ಮುಟ್ಟಿಸಿದರು.


ಸಾರಬೇಡಿ ಈ ಸುದ್ದಿಯನು ‘ಗತ್’ ಊರಿನಲಿ ಘೋಷಿಸಬೇಡಿ ಅಷ್ಕೆಲೋನಿನ ಬೀದಿಗಳಲಿ. ಏಕೆನೆ, ಉಲ್ಲಾಸಿಸಿಯಾರು ಆ ಫಿಲಿಷ್ಟಿಯ ಮಹಿಳೆಯರು; ಜಯಘೋಷ ಮಾಡಿಯಾರು ಸುನ್ನತಿಯಿಲ್ಲದವರಾ ಸ್ತ್ರೀಯರು!


ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡಿದ್ದರು. ಸೌಲನು ಸಮಸ್ತ ಇಸ್ರಯೇಲರೊಡನೆ ಬಂದು ಗಿಲ್ಬೋವದಲ್ಲಿ ಇಳಿದುಕೊಂಡನು.


ಮಳೆಯಾಗಲಿ, ಮಂಜಾಗಲಿ ಬೀಳದಿರಲಿ ಆ ಗಿಲ್ಬೋವ ಗುಡ್ಡಗಳ ಮೇಲೆ ಅದರ ಮೇಲಿನ ಹೊಲಗಳು ಬೆಳೆಕೊಡದಿರಲಿ ನೈವೇದ್ಯಕೆ. ಏಕೆನೆ ಅಲ್ಲಿ ಬಿದ್ದಿವೆ ಯುದ್ಧವೀರರ ಕತ್ತಿಗುರಾಣಿ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆ ಸೌಲನ ಗುರಾಣಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು