Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:12 - ಕನ್ನಡ ಸತ್ಯವೇದವು C.L. Bible (BSI)

12 ಅದೇ ದಿನ ಒಬ್ಬ ಬೆನ್ಯಾಮೀನ್ಯನು ರಣರಂಗದಿಂದ ತಪ್ಪಿಸಿಕೊಂಡು, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದೇ ದಿನ ಒಬ್ಬ ಬೆನ್ಯಾಮೀನನು ರಣರಂಗದಿಂದ ತಪ್ಪಿಸಿಕೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಶೀಲೋವಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದೇ ದಿವಸ ಒಬ್ಬ ಬೆನ್ಯಾಮೀನ್ಯನು ರಣರಂಗದಿಂದ ತಪ್ಪಿಸಿಕೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ದಿನದಂದು ಬೆನ್ಯಾಮೀನ್ ಕುಲದ ಒಬ್ಬನು ದುಃಖದಿಂದ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಧೂಳನ್ನು ಹಾಕಿಕೊಂಡು, ರಣರಂಗದಿಂದ ತಪ್ಪಿಸಿಕೊಂಡು ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದೇ ದಿವಸದಲ್ಲಿ ಬೆನ್ಯಾಮೀನನಾದ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಯುದ್ಧರಂಗದಿಂದ ಶೀಲೋವಿಗೆ ಓಡಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:12
9 ತಿಳಿವುಗಳ ಹೋಲಿಕೆ  

ಆಗ ಯೆಹೋಶುವನು ಮತ್ತು ಇಸ್ರಯೇಲರ ಹಿರಿಯರು ದುಃಖ ತಾಳಲಾರದೆ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡು ಸಾಯಂಕಾಲದವರೆಗೆ ಸರ್ವೇಶ್ವರನ ಮಂಜೂಷದ ಮುಂದೆ ಅಧೋಮುಖರಾಗಿ ಬಿದ್ದಿದ್ದರು.


ದೂರದಿಂದ ನೋಡಿದಾಗ ಆತನ ಗುರುತುಹಚ್ಚಲು ಕೂಡ ಅವರಿಂದಾ ಆಗಲಿಲ್ಲ. ಎಂದೇ ಅವರು ಗಟ್ಟಿಯಾಗಿ ಅತ್ತರು. ದುಃಖ ತಾಳಲಾರದೆ ತಂತಮ್ಮ ಮೇಲಂಗಿಯನ್ನು ಸೀಳಿಕೊಂಡರು.


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನ, ಇಸ್ರಯೇಲರು ಉಪವಾಸವಾಗಿದ್ದು ಗೋಣೀ ತಟ್ಟನ್ನು ಕಟ್ಟಿಕೊಂಡು, ತಲೆಯ ಮೇಲೆ ಮಣ್ಣುಸುರಿದುಕೊಂಡು, ನೆರೆದುಬಂದರು.


ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ, ಅರ್ಕೀಯನಾದ ಹೂಷೈ ಎಂಬವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು ಅರಸನ ಬಳಿಗೆ ಬಂದನು.


ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ವ್ಯಕ್ತಿ ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು. ಅವನು ಸಂತಾಪದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.


ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು, ನಿಲುವಂಗಿಯನ್ನು ಹರಿದುಕೊಂಡು, ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.”


ತಪ್ಪಿಸಿಕೊಂಡವನು ನಿನ್ನ ಬಳಿಗೆ ಬಂದೇ ಬರುವನು. ನಡೆದ ಸಂಗತಿಯನ್ನು ನೀನು ಕಿವಿಯಾರೆ ಕೇಳುವಂತೆ ನಿನಗೆ ತಿಳಿಸುವನು.


ತಮ್ಮ ತಮ್ಮ ಹಡಗುಗಳಿಂದಿಳಿದು, ನೆಲದ ಮೇಲೆ ನಿಂತು. ತಲೆಗೆ ದೂಳೆರಚಿಕೊಂಡು, ಬೂದಿಯಲ್ಲಿ ಹೊರಳಾಡಿಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು