Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:18 - ಕನ್ನಡ ಸತ್ಯವೇದವು C.L. Bible (BSI)

18 ಮುದುಕನೂ ಸ್ಥೂಲಕಾಯನೂ ಆದ ಏಲಿ ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದ್ದೇ, ಪೀಠದಿಂದ ಹಿಂದಕ್ಕೆ, ಬಾಗಿಲಿನ ಕಡೆಗೆ ಬಿದ್ದು, ಕುತ್ತಿಗೆ ಮುರಿದು ಸತ್ತನು. ಏಲಿ ಇಸ್ರಯೇಲರನ್ನು ನಾಲ್ವತ್ತು ವರ್ಷ ಪಾಲಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮುದುಕನೂ, ಸ್ಥೂಲಕಾಯನೂ ಆದ ಏಲಿಯು ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದೊಡನೆಯೇ ಪೀಠದಿಂದ ಹಿಂದಕ್ಕೆ ಬಾಗಿಲಿನ ಕಡೆಗೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಅವನು ಇಸ್ರಾಯೇಲರನ್ನು ನಲ್ವತು ವರ್ಷ ಪಾಲಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮುದುಕನೂ ಸ್ಥೂಲಕಾಯನೂ ಆದ ಏಲಿಯು ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದೊಡನೆ ಪೀಠದಿಂದ ಹಿಂದಕ್ಕೆ ಬಾಗಲಿನ ಕಡೆಗೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಅವನು ಇಸ್ರಾಯೇಲ್ಯರನ್ನು ನಾಲ್ವತ್ತು ವರುಷ ಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನ ಪವಿತ್ರ ಪೆಟ್ಟಿಗೆಯ ವಿಚಾರವನ್ನು ಬೆನ್ಯಾಮೀನ್ಯನು ತಿಳಿಸಿದಾಗ, ಏಲಿಯು ಕುರ್ಚಿಯಿಂದ ಹಿಂದಕ್ಕೆ ಬಾಗಿಲಿನ ಸಮೀಪದಲ್ಲಿ ಬಿದ್ದನು; ಅವನ ಕುತ್ತಿಗೆಯು ಮುರಿದು ಬಿತ್ತು. ಏಲಿಯು ಮುದುಕನೂ ಬೊಜ್ಜುಳ್ಳವನೂ ಆಗಿದ್ದುದರಿಂದ ಸತ್ತನು. ಅವನು ಇಸ್ರೇಲರನ್ನು ನಲವತ್ತು ವರ್ಷ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ವೃದ್ಧನೂ ಸ್ಥೂಲಕಾಯನೂ ಆದ ಏಲಿಯು ದೇವರ ಮಂಜೂಷದ ಮಾತನ್ನು ಕೇಳಿದಾಗ, ಆಸನದ ಮೇಲಿಂದ ಬಾಗಿಲಿನ ಕಡೆಗೆ ಹಿಂದಕ್ಕೆ ಬಿದ್ದು, ಕುತ್ತಿಗೆ ಮುರಿದು ಮರಣಹೊಂದಿದನು. ಅವನು ನಾಲ್ವತ್ತು ವರುಷ ಇಸ್ರಾಯೇಲರಿಗೆ ನ್ಯಾಯತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:18
15 ತಿಳಿವುಗಳ ಹೋಲಿಕೆ  

ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದಭಿಮಾನ I ಎನ್ನ ಮೇಲೆರಗಿದೆ ನಿನ್ನ ಕಡುದ್ರೋಹಿಗಳ ದೂಷಣ II


“ನಿನ್ನ ದೇವನೆಲ್ಲಿ?” ಎಂದು ವಿರೋಧಿಗಳು ಸತತ ಹಂಗಿಸುವಾಗ I ನನ್ನೆಲುಬುಗಳು ಮುರಿದಂತಾಗುತ್ತದೆ ಆ ಜರೆಯ ಕೇಳಿದಾಗ II


“ಎಲ್ಲಿ? ನಿನ್ನ ದೇವನೆಲ್ಲಿ?” ಎಂದು ಜನ ಜರೆಯುತಿರಲು I ಕಂಬನಿಯೆ ನನಗನ್ನಪಾನವಾಗಿಹುದು ಹಗಲಿರುಳು II


ಪ್ರಿಯವಾದುದೆನಗೆ ನಿನ್ನ ನಿವಾಸದ ಮಂದಿರ I ಸುಪ್ರೀತವಾದುದು ನಿನ್ನ ಮಹಿಮೆಯ ಆಗರ II


ಶಿಲೋವಿಗೆ ಬಂದು, ನಡೆದದ್ದನ್ನು ತಿಳಿಸಿದನು. ಜನರೆಲ್ಲರು ಗೋಳಾಡತೊಡಗಿದರು. ‘ದೇವರ ಮಂಜೂಷ ಏನಾಯಿತೋ?’ ಎಂಬ ಚಿಂತೆಯಿಂದ ಮಂದಿರ ದ್ವಾರದ ಬಳಿ ಕುಳಿತು, ದಾರಿಯನ್ನೇ ನೋಡುತ್ತಿದ್ದ ಏಲಿ, ದುಃಖಧ್ವನಿಯನ್ನು ಕೇಳಿದನು.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ಅವನು ಏಲಿಗೆ, “ಇಸ್ರಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾ ಸಂಹಾರವಾಯಿತು. ನಿಮ್ಮ ಇಬ್ಬರು ಮಕ್ಕಳಾದ ಹೊಫ್ನಿ ಹಾಗು ಫೀನೆಹಾಸ ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು,” ಎಂದು ತಿಳಿಸಿದನು.


ಫೀನೆಹಾಸನ ಹೆಂಡತಿಯಾದ ಏಲಿಯ ಸೊಸೆ ದಿನತುಂಬಿದ ಗರ್ಭಿಣಿ. ದೇವರ ಮಂಜೂಷ ಶತ್ರುವಶವಾದದ್ದನ್ನು ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.


ಫಿಲಿಷ್ಟಿಯರ ಕಾಲದಲ್ಲಿ ಸಂಸೋನನು ಇಸ್ರಯೇಲರನ್ನು ಇಪ್ಪತ್ತು ವರ್ಷಗಳವರೆಗೆ ಪಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು