Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:2 - ಕನ್ನಡ ಸತ್ಯವೇದವು C.L. Bible (BSI)

2 ಇವರು ಇಸ್ರಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು. ಇಸ್ರಯೇಲರು ಸೋತರು. ರಣರಂಗದಲ್ಲಿ ಸುಮಾರು ನಾಲ್ಕು ಸಾವಿರಮಂದಿ ಇಸ್ರಯೇಲರನ್ನು ಫಿಲಿಷ್ಟಿಯರು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇವರು ಇಸ್ರಾಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲರನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವರು ಇಸ್ರಾಯೇಲ್ಯರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲ್ಯರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲ್ಯರನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಫಿಲಿಷ್ಟಿಯರು ಇಸ್ರೇಲರ ಮೇಲೆ ಆಕ್ರಮಣಮಾಡಲು ಸಿದ್ಧರಾದರು. ಹೋರಾಟ ಆರಂಭವಾಯಿತು. ಫಿಲಿಷ್ಟಿಯರು ಇಸ್ರೇಲರನ್ನು ಸೋಲಿಸಿ ಇಸ್ರೇಲಿನ ಸೈನ್ಯದಲ್ಲಿ ನಾಲ್ಕು ಸಾವಿರ ಸೈನಿಕರನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಫಿಲಿಷ್ಟಿಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧಮಾಡಿದಾಗ, ಇಸ್ರಾಯೇಲರು ಫಿಲಿಷ್ಟಿಯರ ಮುಂದೆ ಸೋತರು. ಫಿಲಿಷ್ಟಿಯರು ಯುದ್ಧ ರಂಗದಲ್ಲಿ ಹೆಚ್ಚು ಕಡಿಮೆ ನಾಲ್ಕು ಸಾವಿರ ಜನರನ್ನು ಹತಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:2
13 ತಿಳಿವುಗಳ ಹೋಲಿಕೆ  

ನಮ್ಮ ನಡತೆಯನ್ನು ಪರೀಕ್ಷಿಸಿ ಪರಿಶೋಧಿಸೋಣ ಸರ್ವೇಶ್ವರನ ಕಡೆಗೆ ತಿರುಗಿಕೊಳ್ಳೋಣ;


ಇಸ್ರಯೇಲರೂ ಫಿಲಿಷ್ಟಿಯರೂ ಎದುರುಬದುರಾಗಿ ವ್ಯೂಹಕಟ್ಟುತ್ತಿದ್ದರು.


ಗೊಲ್ಯಾತನು ಅಲ್ಲೆ ನಿಂತು, ಇಸ್ರಯೇಲರ ಸೈನ್ಯದತ್ತ ಹೀಗೆಂದು ಗರ್ಜಿಸಿದನು: “ನೀವು ಸಜ್ಜಾಗಿ ಬಂದಿರುವುದು ಯುದ್ಧಮಾಡಲಿಕ್ಕೋ? ನಾನು ಫಿಲಿಷ್ಟಿಯನು. ನೀವು ಆ ಸೌಲನ ಗುಲಾಮರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿ.


ಆದುದರಿಂದಲೇ ಇಸ್ರಯೇಲರು ಶತ್ರುಗಳ ಮುಂದೆ ನಿಲ್ಲಲಾರದೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದುದನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ.


ಇಸ್ರಯೇಲರು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯ ಮಾಡಿಕೊಂಡರು. ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.


ಇಸ್ರಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರೊಡನೆ ಅವರ ಹಿರಿಯರು, “ಸರ್ವೇಶ್ವರ ಈ ದಿನ ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶಿಲೋವಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತರೋಣ; ಅವರು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ರಕ್ಷಿಸಲಿ,” ಎಂದು ಸಮಾಲೋಚಿಸಿದರು.


ಇಸ್ರಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.


ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು. ಶತ್ರುಗಳ ಮುಂದೆ ನಿಲ್ಲಲಾರಿರಿ.


ಆ ಮಲೆನಾಡಿನಲ್ಲಿ ವಾಸವಾಗಿದ್ದ ಅಮಾಲೇಕ್ಯರು ಹಾಗೂ ಕಾನಾನ್ಯರು ಇಳಿದುಬಂದು ಅವರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಬಂದು ಸಂಹರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು