Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:8 - ಕನ್ನಡ ಸತ್ಯವೇದವು C.L. Bible (BSI)

8 ಅಕಟಾ, ಪ್ರತಾಪವುಳ್ಳ ಈ ದೇವರುಗಳ ಕೈಯಿಂದ ನಮ್ಮನ್ನು ಬಿಡಿಸುವವರಾರು? ಈಜಿಪ್ಟರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಯ್ಯೋ! ಪರಾಕ್ರಮವುಳ್ಳ ಈ ದೇವರ ಕೈಯಿಂದ ನಮ್ಮನ್ನು ಬಿಡಿಸುವವರು ಯಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಯ್ಯೋ, ಪ್ರತಾಪವುಳ್ಳ ಈ ದೇವರುಗಳ ಕೈಯಿಂದ ನಮ್ಮನ್ನು ಬಿಡಿಸುವವರಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಯ್ಯೋ, ಮಹಾಶಕ್ತಿಶಾಲಿಗಳಾದ ಈ ದೇವರುಗಳಿಂದ ನಮ್ಮನ್ನು ರಕ್ಷಿಸುವವರು ಯಾರು! ಈಜಿಪ್ಟಿನವರಿಗೆ ಕಾಯಿಲೆಗಳನ್ನು ಬರಮಾಡಿದ ದೇವರುಗಳು ಇವರೇ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವರ‍್ಯಾರು? ಈಜಿಪ್ಟಿನವರನ್ನು ಮರುಭೂಮಿಯಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:8
8 ತಿಳಿವುಗಳ ಹೋಲಿಕೆ  

ಇಲ್ಲವಾದರೆ ಈ ಸಾರಿ ವಿಧಿಸುವ ಈ ಬಾಧೆಗಳು ನಿನ್ನ ಪ್ರಜಾಪರಿವಾರದವರಿಗೆ ಮಾತ್ರವಲ್ಲ ನಿನಗೂ ತಗಲುವುದು. ಇದರಿಂದ ಇಡೀ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ನಾನು ಈಜಿಪ್ಟಿನವರಿಗೆ ವಿರುದ್ಧ ಕೈಯೆತ್ತಿ ಅವರ ಮಧ್ಯೆಯಿಂದ ಇಸ್ರಯೇಲರನ್ನು ಹೊರತಂದಾಗ ನಾನು ಸರ್ವೇಶ್ವರನೆಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.


ತಾವು ಪ್ರವಾದನೆ ಮಾಡುವ ದಿನಗಳಲ್ಲಿ ಮಳೆ ಬಾರದಂತೆ ಆಕಾಶವನ್ನು ಮುಚ್ಚಿಬಿಡುವ ಸಾಮರ್ಥ್ಯ ಇವರಿಗಿದೆ. ಇದಲ್ಲದೆ, ಇವರಿಗೆ ಇಷ್ಟಬಂದಾಗಲೆಲ್ಲಾ ನೀರನ್ನು ರಕ್ತವನ್ನಾಗಿ ಪರಿವರ್ತಿಸುವ ಹಾಗು ಸಕಲ ವಿಧವಾದ ಉಪದ್ರವಗಳಿಂದ ಜಗತ್ತನ್ನು ಪೀಡಿಸುವ ಅಧಿಕಾರ ಇವರಿಗೆ ಇರುತ್ತದೆ.


“ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟರು. “ಅಯ್ಯೋ, ಹಿಂದೆ ಹೀಗಿರಲಿಲ್ಲ.


ಫಿಲಿಷ್ಟಿಯರೇ, ಧೈರ್ಯಗೊಳ್ಳಿ; ಶೂರರಾಗಿರಿ! ಇಲ್ಲವಾದರೆ ನಿಮಗೆ ಗುಲಾಮರಾಗಿದ್ದ ಹಿಬ್ರಿಯರಿಗೆ ನೀವೇ ಗುಲಾಮರಾದೀರಿ; ಆದಕಾರಣ ಶೌರ್ಯದಿಂದ ಯುದ್ಧಮಾಡಿ!” ಎಂದು ಹೇಳಿಕೊಂಡು ಯುದ್ಧಮಾಡಿದರು.


ಇದನ್ನು ಕೇಳಿ ನಡುಗುತ್ತಿರುವುವು ಜನಾಂಗಗಳು ಪ್ರಸವವೇದನೆ ಪಡುತ್ತಿರುವರು ಫಿಲಿಷ್ಟಿಯರು.


ಇದನ್ನು ನೋಡಿ ಆ ಅಷ್ಡೋದಿನ ಜನರು, “ಇಸ್ರಯೇಲ್ ದೇವರ ಮಂಜೂಷ ನಮ್ಮಲ್ಲಿರಬಾರದು; ಆತನ ಹಸ್ತ ನಮಗೂ ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ,” ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು