Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 5:12 - ಕನ್ನಡ ಸತ್ಯವೇದವು C.L. Bible (BSI)

12 ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟ ಗಗನಕ್ಕೇರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಹಳ ಜನರು ಸತ್ತರು; ಸಾಯದೆ ಉಳಿದ ಜನರಿಗೆ ಗಡ್ಡೆರೋಗವು ಬಂದಿತು. ಅವರ ಗೋಳಾಟವು ಆಕಾಶಮಂಡಲವನ್ನು ಮುಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಉಳಿದವರು ಸತ್ತು ಹೋಗದೆ ಗಡ್ಡೆರೋಗದಿಂದ ಬಾಧಿತರಾದರು, ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 5:12
9 ತಿಳಿವುಗಳ ಹೋಲಿಕೆ  

ಆ ರಾತ್ರಿ ಫರೋಹನೂ ಅವನ ಪರಿವಾರದವರೂ ಈಜಿಪ್ಟಿನವರೆಲ್ಲರೂ ಎದ್ದು ನೋಡಿದಾಗ ಶವವಿಲ್ಲದ ಮನೆ ಒಂದೂ ಇರಲಿಲ್ಲ. ಆದ್ದರಿಂದ ಆ ದೇಶದಲ್ಲೆಲ್ಲಾ ದೊಡ್ಡ ಗೋಳಾಟ ಎದ್ದಿತು.


ಅದು ಹೇಗೆಂದರೆ: “ಸಿಂಹದ ಬಾಯಿಯಿಂದ ತಪ್ಪಿಸಿಕೊಂಡು ಓಡುತ್ತಿರುವವನು ಕರಡಿಯನ್ನು ಎದುರುಗೊಳ್ಳುವಂತೆ ಆಗುವುದು ಅಥವಾ ಅವನು ಅಲ್ಲಿಂದ ಮನೆಗೆ ಓಡಿಬಂದು ಗೋಡೆಯ ಮೇಲೆ ಕೈಯೂರಲು ಅವನಿಗೆ ಹಾವು ಕಚ್ಚಿದಂತೆ ಆಗುವುದು.


‘ಅಯ್ಯೋ, ಸೂರೆಹೋದೆವು, ತೀವ್ರ ನಾಶವಾದೆವು!’ ಎಂಬ ಕೂಗಾಟ ಕೇಳಿಬರುತ್ತಿದೆ ಹೊರೊನಯಿಮಿನಿಂದ.


‘ಕುರಿಗಾಹಿಗಳೇ, ಅರಚಿಗೋಳಾಡಿ ಮೇಷಪಾಲರೇ, ಬೂದಿಯಲ್ಲಿ ಬಿದ್ದು ಹೊರಳಾಡಿ. ನಿಮ್ಮನ್ನು ವಧಿಸುವ ಕಾಲ ಬಂದಿದೆ ನಾನು ನಿಮ್ಮನ್ನು ಭಂಗಪಡಿಸುವೆ. ನೀವು ಚೂರುಚೂರಾಗುವಿರಿ ಒಡೆದುಹೋದ ಅಂದವಾದ ಪಾತ್ರೆಯಂತೆ.


“ಜುದೇಯ ನಾಡು ದುಃಖಿಸುತ್ತಿದೆ ಅದರ ಪುರದ್ವಾರಗಳು ಬಹಳ ಕಪ್ಪಾಗಿವೆ. ಜೆರುಸಲೇಮಿನವರ ಗೋಳಾಟ ಕೇಳಿಸುತ್ತಿದೆ.


ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಇವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು.


ಸರ್ವೇಶ್ವರನ ಮಂಜೂಷ ಫಿಲಿಷ್ಟಿಯರ ದೇಶದಲ್ಲಿ ಏಳು ತಿಂಗಳಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು