Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:12 - ಕನ್ನಡ ಸತ್ಯವೇದವು C.L. Bible (BSI)

12 ಕೂಡಲೆ ಆ ಹಸುಗಳು ಬೇತ್‍ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಅಂಬಾ ಎನ್ನುತ್ತಾ ನೆಟ್ಟಗೆ ಮುಂದೆ ಸಾಗಿದವು. ಎಡಕ್ಕಾಗಲಿ, ಬಲಕ್ಕಾಗಲಿ ತಿರುಗಲಿಲ್ಲ. ಫಿಲಿಷ್ಟಿಯ ರಾಜರುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೂಡಲೆ ಆ ಹಸುಗಳು ಬೇತ್ ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೂಡಲೆ ಆ ಹಸುಗಳು ಬೇತ್‍ಷೆಮೆಷಿನ ರಾಜಮಾರ್ಗವನ್ನು ಹಿಡಿದು ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್‍ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹಸುಗಳು ಬೇತ್‌ಷೆಮೆಷಿಗೆ ನೇರವಾಗಿ ಹೋದವು. ಅವು ದಾರಿಯಲ್ಲಿಯೇ ಹೋದವು. ಅವು ದಾರಿಯುದ್ದಕ್ಕೂ ಕೂಗುತ್ತಾ ನಡೆದವು. ಅವು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಲಿಲ್ಲ. ಫಿಲಿಷ್ಟಿಯರ ಅಧಿಪತಿಗಳು ಬೇತ್‌ಷೆಮೆಷಿನ ಗಡಿಯವರೆಗೂ ಹಸುಗಳನ್ನು ಹಿಂಬಾಲಿಸಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಹಸುಗಳು ಕೂಗುತ್ತಾ ಬೇತ್ ಷೆಮೆಷ್ ಕಡೆಗೆ ಹೋಗುವ ಮಾರ್ಗವನ್ನು ಹಿಡಿದು, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ ಹೆದ್ದಾರಿಯಲ್ಲಿ ಹೋದವು. ಫಿಲಿಷ್ಟಿಯರ ಅಧಿಪತಿಗಳು ಬೇತ್ ಷೆಮೆಷ್ ಊರಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:12
7 ತಿಳಿವುಗಳ ಹೋಲಿಕೆ  

ಅದಕ್ಕೆ ಇಸ್ರಯೇಲರು, “ನಾವು ರಾಜಮಾರ್ಗದಲ್ಲೇ ಹೋಗುತ್ತೇವೆ. ನಾವಾಗಲಿ, ನಮ್ಮ ಜಾನುವಾರುಗಳಾಗಲಿ ನಿಮ್ಮ ನೀರನ್ನು ಕುಡಿದರೆ ಅದಕ್ಕೆ ಬೆಲೆ ಕೊಡುತ್ತೇವೆ. ಬೇರೆ ಏನೂ ನಮಗೆ ಬೇಡ; ಕಾಲ್ನಡೆಯಾಗಿ ದಾಟಿಹೋಗುವುದಕ್ಕೆ ಮಾತ್ರ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು.


ಬಂಡಿ ಹೋಗುವ ದಾರಿಯನ್ನು ಗಮನಿಸಿರಿ. ಅದು ತಾನಾಗಿ ಸ್ವದೇಶದ ದಾರಿಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈಗ ಬಂದಿರುವ ಕೇಡನ್ನು ಕಳುಹಿಸಿದವನು ಆ ಸರ್ವೇಶ್ವರನೇ ಎಂದು ತಿಳಿಯಿರಿ. ಬಂಡಿ ಆ ಮಾರ್ಗವನ್ನು ಹಿಡಿಯದಿದ್ದರೆ ಆ ಸರ್ವೇಶ್ವರನ ಹಸ್ತ ನಮ್ಮನ್ನು ಮುಟ್ಟಲಿಲ್ಲ, ಈ ಕೇಡು ಆಕಸ್ಮಿಕವಾಗಿ ಬಂದಿದೆ ಎಂದು ತಿಳಿದುಕೊಳ್ಳಿ,” ಎಂದು ಹೇಳಿದರು.


ಸರ್ವೇಶ್ವರನ ಮಂಜೂಷವನ್ನು ಮತ್ತು ಚಿನ್ನದ ಇಲಿಗಳೂ ಗಡ್ಡೆಗಳೂ ಇದ್ದ ಚಿಕ್ಕಪೆಟ್ಟಿಗೆಯನ್ನು ಬಂಡಿಯಲ್ಲಿ ಇಟ್ಟರು.


ಬೇತ್ ಷೆಮೆಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಬೆಳೆಯನ್ನು ಕೊಯ್ಯುತ್ತಿದ್ದರು. ಕಣ್ಣೆತ್ತಿ ಸರ್ವೇಶ್ವರನ ಮಂಜೂಷವನ್ನು ನೋಡಿ ಬಹಳ ಸಂತೋಷಪಟ್ಟರು.


ಕಾಟ ತೀರಿತೆಂದು ತಿಳಿದುಕೊಂಡಾಗ ಫರೋಹನು ತನ್ನ ಹೃದಯವನ್ನು ಮೊಂಡಾಗಿಸಿಕೊಂಡನು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.


ಅಲ್ಲಿಂದ ಪಶ್ಚಿಮದಲ್ಲಿ ಇರುವ ಸೇಯಿರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು


ಬಿನ್ಹೂರ - ಎಫ್ರಯಿಮಿನ ಮಲೆನಾಡಿನ ಪ್ರದೇಶ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು