Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:13 - ಕನ್ನಡ ಸತ್ಯವೇದವು C.L. Bible (BSI)

13 ಫಿಲಿಷ್ಟಿಯರು ಸೋತುಹೋದುದರಿಂದ ಮತ್ತೆ ಇಸ್ರಯೇಲರ ಪ್ರಾಂತ್ಯದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಸರ್ವೇಶ್ವರನ ಹಸ್ತ ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರುಗಿ ಇಸ್ರಾಯೇಲ್ಯರ ಪ್ರಾಂತ್ಯದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರಿಗಿ ಇಸ್ರಾಯೇಲ್ಯರ ಪ್ರಾಂತದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಫಿಲಿಷ್ಟಿಯರು ಸೋತುಹೋದರು. ಅವರು ಮತ್ತೆ ಇಸ್ರೇಲರ ಭೂಮಿಯಲ್ಲಿ ಹೆಜ್ಜೆ ಇಡಲಿಲ್ಲ. ಸಮುವೇಲನ ಜೀವಿತದ ಉಳಿದ ಭಾಗದಲ್ಲಿ ಯೆಹೋವನು ಫಿಲಿಷ್ಟಿಯರಿಗೆ ವಿರುದ್ಧವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಫಿಲಿಷ್ಟಿಯರು ಸೋತುಹೋದುದರಿಂದ ಇಸ್ರಾಯೇಲಿನ ಮೇರೆಯಲ್ಲಿ ಬರಲೇ ಇಲ್ಲ. ಇದಲ್ಲದೆ ಸಮುಯೇಲನು ಇದ್ದ ದಿವಸಗಳೆಲ್ಲಾ ಯೆಹೋವ ದೇವರ ಕೈ ಫಿಲಿಷ್ಟಿಯರಿಗೆ ವಿರೋಧವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:13
12 ತಿಳಿವುಗಳ ಹೋಲಿಕೆ  

ಇಸ್ರಯೇಲರು ಮತ್ತೊಮ್ಮೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದುದರಿಂದ ಅವರನ್ನು ನಾಲ್ವತ್ತು ವರ್ಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಲಾಯಿತು.


ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇ ಬಾರದು. ಅವನು ಹುಟ್ಟಿನಿಂದ ದೇವರಿಗೆ ಪ್ರತಿಷ್ಠಿತನಾಗುವನು. ಅವನು ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವುದಕ್ಕೆ ಪ್ರಾರಂಭಿಸುವನು,” ಎಂದನು.


ಮಂಜೂಷವು ಅಲ್ಲಿ ಹೋದ ಮೇಲೆ ಸರ್ವೇಶ್ವರನ ಹಸ್ತ ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲ ಎದ್ದಿತು. ಸರ್ವೇಶ್ವರ ಆ ಊರಿನ ಚಿಕ್ಕವರಲ್ಲೂ ದೊಡ್ಡವರಲ್ಲೂ ಗಡ್ಡೆಗಳನ್ನು ಬರಮಾಡಿದರು.


ಮಿದ್ಯಾನ್ಯರು ಇಸ್ರಯೇಲರ ಮುಂದೆ ಬಹಳವಾಗಿ ತಗ್ಗಿಹೋದರು. ಅವರು ಮರಳಿ ತಲೆಯೆತ್ತಲಾಗಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಾಲ್ವತ್ತು ವರ್ಷಗಳ ಕಾಲಪರ್ಯಂತ ದೇಶದಲ್ಲಿ ಶಾಂತಿಸಮಾಧಾನವಿತ್ತು.


ಆಗ ಸರ್ವೇಶ್ವರ ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.


ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ, ಅವರನ್ನು ಸೋಲಿಸಿದನು. ಅವರ ರಾಜಧಾನಿಯನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು