Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:2 - ಕನ್ನಡ ಸತ್ಯವೇದವು C.L. Bible (BSI)

2 ಮಂಜೂಷವು ಕಿರ್ಯತ್ಯಾರೀಮಿಗೆ ಬಂದು ಬಹಳ ದಿವಸಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದುಹೋದವು. ಈ ಕಾಲದಲ್ಲಿ ಎಲ್ಲ ಇಸ್ರಯೇಲರು ಸರ್ವೇಶ್ವರನಿಗಾಗಿ ಹಂಬಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮಂಜೂಷವು ಕಿರ್ಯಾತ್ಯಾರೀಮಿಗೆ ಬಂದು ಬಹಳ ದಿನಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದು ಹೋದವು. ಈ ಕಾಲದಲ್ಲಿ ಎಲ್ಲಾ ಇಸ್ರಾಯೇಲ್ಯರು ದುಃಖಿಸುತ್ತಾ ಯೆಹೋವನ ಕಡೆಗೆ ತಿರುಗಿಕೊಳ್ಳಲು ಹಂಬಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮಂಜೂಷವು ಕಿರ್ಯತ್ಯಾರೀವಿುಗೆ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷಗಳು ಕಳೆದುಹೋದವು; ಈ ಕಾಲದಲ್ಲಿ ಎಲ್ಲಾ ಇಸ್ರಾಯೇಲ್ಯರು ಯೆಹೋವನನ್ನೇ ಹಂಬಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಪೆಟ್ಟಿಗೆಯು ಕಿರ್ಯತ್ಯಾರೀಮಿನವರಲ್ಲಿ ಬಹುಕಾಲದವರೆಗೆ ಅಂದರೆ ಇಪ್ಪತ್ತು ವರ್ಷಗಳವರೆಗೆ ಇತ್ತು. ಇಸ್ರೇಲರು ಯೆಹೋವನ ಮಾರ್ಗವನ್ನು ಮತ್ತೆ ಅನುಸರಿಸಲು ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮಂಜೂಷವು ಕಿರ್ಯತ್ ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರ್ಷಗಳಾದವು. ಆಗ, ಇಸ್ರಾಯೇಲ್ ಮನೆತನದವರೆಲ್ಲರು ಯೆಹೋವ ದೇವರಿಗೋಸ್ಕರ ಹಂಬಲಿಸಿ ಗೋಳಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:2
13 ತಿಳಿವುಗಳ ಹೋಲಿಕೆ  

ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು.


ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.


ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.


ಸರ್ವೇಶ್ವರನ ದೂತನು ಹೇಳಿದ ಈ ಮಾತುಗಳನ್ನು ಕೇಳಿ ಇಸ್ರಯೇಲರೆಲ್ಲರು ಗಟ್ಟಿಯಾಗಿ ಅತ್ತರು.


ಹೇಗೆಂದರೆ - ಮೂರನೆಯ ದಿನದಂದು ಇಸ್ರಯೇಲರು ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.


ಆಗ ಕಿರ್ಯತ್ಯಾರೀಮಿನವರು ಬಂದು ಸರ್ವೇಶ್ವರನ ಮಂಜೂಷವನ್ನು ತೆಗೆದುಕೊಂಡು ಹೋದರು. ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿ ಅದನ್ನು ಇಟ್ಟು, ಅವನ ಮಗ ಎಲ್ಲಾಜಾರನನ್ನು ಅದರ ಸೇವೆಗಾಗಿ ಪ್ರತಿಷ್ಠಿಸಿದರು.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.


ಅನಂತರ ನಾವು ಹೋಗಿ ಅರಸ ಸೌಲ ನಿರ್ಲಕ್ಷಿಸಿದ್ದ ದೇವಮಂಜೂಷವನ್ನು ತೆಗೆದುಕೊಂಡು ಬರೋಣ,” ಎಂದು ಜನರೆಲ್ಲರಿಗೆ ಸಲಹೆ ಮಾಡಿದನು.


ಸರ್ವೇಶ್ವರನ ಹೆಸರಿನಲ್ಲಿ ಪ್ರವಾದನೆ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿ ಇದ್ದ. ಅವನು ಕಿರ್ಯತ್‍ಯಾರೀಮ್ ಊರಿಗೆ ಸೇರಿದ ಶಮಾಯನ ಮಗ ಊರೀಯ ಎಂಬುವನು. ಯೆರೆಮೀಯನು ನುಡಿದಂತೆಯೇ ಈ ನಗರಕ್ಕೂ ಈ ನಾಡಿಗೂ ಅಹಿತವಾದುದನ್ನೆ ನುಡಿಯುತ್ತಿದ್ದ.


ಹೀಗೆ ಅರಸ ದಾವೀದನು ಕಿರ್ಯತ್ಯಾರೀಮಿನಿಂದ ಜೆರುಸಲೇಮಿಗೆ ದೇವಮಂಜೂಷವನ್ನು ತರಲು ದೇಶದ ಎಲ್ಲಾ ಕಡೆಗಳಿಂದಲೂ, ದಕ್ಷಿಣದ ಈಜಿಪ್ಟ್ ಗಡಿಯಿಂದ ಉತ್ತರದ ಹಾಮಾತ್ ಕಣಿವೆಯವರೆಗಿನ ಜನರನ್ನು ಒಂದುಗೂಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು