Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಸಮುವೇಲನು ಅವರಿಗೆ - ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರಿಗಿಕೊಂಡಿರುವದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ; ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:3
40 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು; ಅವರೊಬ್ಬರಿಗೇ ಸೇವೆ ಸಲ್ಲಿಸು,’ ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ,” ಎಂದರು.


ಸರ್ವೇಶ್ವರ ಹೇಳುವ ಮಾರ್ಗದಲ್ಲೇ ನೀವು ನಡೆದು, ಅವರಲ್ಲಿಯೇ ಭಯಭಕ್ತಿ ಯಳ್ಳವರಾಗಿ, ಅವರ ಆಜ್ಞೆಗಳನ್ನೇ ಅನುಸರಿಸಿ, ಅವರಿಗೇ ವಿಧೇಯರಾಗಿ, ಅವರ ಸೇವೇಮಾಡುತ್ತಾ ಅವರನ್ನೇ ಹೊಂದಿಕೊಂಡಿರಬೇಕು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


ನಿನ್ನ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರು; ಅವರಿಗೇ ಸೇವೆಮಾಡು; ಅವರ ಹೆಸರು ಹೇಳಿ ಪ್ರಮಾಣಮಾಡು.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


“ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯಾಚೆಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದುಬಿಡಿ.


ಆಗ ಯೆಹೋಶುವ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೊರೆದುಬಿಟ್ಟು ಇಸ್ರಯೇಲಿನ ದೇವರಾದ ಸರ್ವೇಶ್ವರನ ಕಡೆಗೆ ನಿಮ್ಮ ಹೃನ್ಮನಗಳನ್ನು ತಿರುಗಿಸಿಕೊಳ್ಳಿ,” ಎಂದನು.


ದೇವರು ಆತ್ಮಸ್ವರೂಪಿ, ಅವರನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು,” ಎಂದು ಹೇಳಿದರು.


ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ನಿಮ್ಮ ಅನುಗ್ರಹದಿಂದ ತಮ್ಮ ಪಿತೃಗಳಿಗೆ ದೊರಕಿದ ನಾಡಿನ ಕಡೆಗೂ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ‘ನಾವು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿಕೊಂಡು ಪೂರ್ಣಮನಸ್ಸಿನಿಂದ ಹಾಗು ಪೂರ್ಣಪ್ರಾಣದಿಂದ, ನಿಮ್ಮನ್ನು ಪ್ರಾರ್ಥಿಸಿದರೆ,


“ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು.”


‘ಬರಿಯ ಮಾತಿನ ಮನ್ನಣೆಯನ್ನೀಯುತ ಹೃದಯವನು ದೂರವಿರಿಸುತ ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ


ಇಸ್ರಯೇಲರು ಇನ್ನೊಮ್ಮೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಸರ್ವೇಶ್ವರನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಮತ್ತು ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಸರ್ವೇಶ್ವರನನ್ನಾದರೋ ಬಿಟ್ಟೇಬಿಟ್ಟರು.


ಆದುದರಿಂದ ನೀವು ಪೂರ್ಣಮನಸ್ಸಿನಿಂದ, ಪೂರ್ಣಪ್ರಾಣದಿಂದ ನಿಮ್ಮ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸಿರಿ. ಏಳಿ, ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನ ಮಂಜೂಷವನ್ನೂ ದೇವಾರಾಧನೆಗೆ ಬೇಕಾದ ಸಾಮಗ್ರಿಗಳನ್ನೂ ಸರ್ವೇಶ್ವರನ ಹೆಸರಿಗಾಗಿ ಕಟ್ಟಲಾಗುವ ಮಂದಿರದಲ್ಲಿ ಇಡಿ,” ಎಂದು ಹೇಳಿದನು.


ಆಗ ಯಕೋಬನು ತನ್ನ ಮನೆಯವರಿಗೂ ಹಾಗು ತನ್ನ ಸಂಗಡ ಇದ್ದ ಎಲ್ಲರಿಗೂ, “ನಿಮ್ಮಲ್ಲಿ ಇರುವ ಅನ್ಯ ದೇವರುಗಳನ್ನು ತೊರೆದುಬಿಡಿ; ನಿಮ್ಮನ್ನೇ ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿ; ನಾವು ಬೇತೇಲಿಗೆ ಹೊರಟುಹೋಗೋಣ.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಆಲೋಚನೆ ಮಾಡುವುದು ಮನುಷ್ಯನ ಇಚ್ಛೆ; ಅದನ್ನು ಸಫಲವಾಗಿಸುವುದು ಸರ್ವೇಶ್ವರನ ಇಚ್ಛೆ.


ಆದರೂ ನೀವು ನಾಡಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದುಹಾಕಿದ್ದೀರಿ. ಸರ್ವೇಶ್ವರನ ಭಕ್ತಿ ನಿಮ್ಮಲ್ಲಿ ಬೇರೂರಿದೆ, ನಿಮ್ಮಲ್ಲಿ ಸುಶೀಲತೆ ಉಂಟೆಂದು ತಿಳಿದುಬಂದಿದೆ,” ಎಂಬುದಾಗಿ ಹೇಳಿದನು.


ಆಗ ಇಸ್ರಯೇಲರ ಸಂಕಟದ ನಿಮಿತ್ತ ಸರ್ವೇಶ್ವರ ಬಹಳವಾಗಿ ನೊಂದುಕೊಂಡರು.


ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.


ಆದರೂ ಪಿತೃಗಳ ದೇವರಾದ ನಿಮ್ಮನ್ನು ಅರಸುವ ಮನಸ್ಸಿನಿಂದ ಬಂದಿರುವವರಿಗೆಲ್ಲಾ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.


ಅವರು ಸರ್ವೇಶ್ವರನನ್ನು ಬಿಟ್ಟು ‘ಬಾಳ್ ಅಷ್ಟೋರೆತ್’ ಎಂಬ ದೇವತೆಗಳನ್ನು ಪೂಜಿಸತೊಡಗಿದರು.


ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.


ಗಿಲ್ಯಾದಿನ ಅರ್ಧಭಾಗ ಓಗನ ರಾಜಧಾನಿಗಳಾಗಿದ್ದ ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ನಗರಗಳು ಮನಸ್ಸೆಯ ಮಗ ಮಾಕೀರನ ಗೋತ್ರದ ಅರ್ಧಜನರಿಗೆ ಸಿಕ್ಕಿದವು.


ಇದಲ್ಲದೆ, ಅವರು ನಿನಗೆ, ‘ಸೊಲೊಮೋನನೂ ಅವನ ಮನೆಯವರೂ ನನ್ನನ್ನು ಬಿಟ್ಟು ಸಿದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ಕೆಮೋಷ್, ಅಮ್ಮೋನಿಯರ ದೇವತೆಯಾದ ಮಿಲ್ಕೋಮ್ ಇವುಗಳನ್ನು ಆರಾಧಿಸುತ್ತಿದ್ದಾರೆ. ಅವರ ತಂದೆ ದಾವೀದನು ನನ್ನ ನಿಯಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆಹೋದದ್ದೂ ಇದಕ್ಕೆ ಕಾರಣ.


ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ಬಹುಶಃ, ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನಾದರು ಕೇಳಿ ತಮ್ಮ ದುರ್ಮಾರ್ಗಗಳನ್ನು ಬಿಟ್ಟು ಹಿಂದಿರುಗಬಹುದು. ಹಿಂದಿರುಗಿದರೆ, ಅವರ ಪಾಪಾಪರಾಧಗಳನ್ನು ಕ್ಷಮಿಸಿಬಿಡುವೆನು.”


“ಆದಕಾರಣ ನೀನು ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿರಿ; ನಿಮ್ಮ ಎಲ್ಲಾ ಅಸಹ್ಯವಸ್ತುಗಳ ಕಡೆಗೆ ಬೆನ್ನುಮಾಡಿರಿ.


“ಅಲ್ಲಿಂದಾದರೂ ನೀವು ಪೂರ್ಣಹೃದಯದಿಂದ, ಪೂರ್ಣಮನಸ್ಸಿನಿಂದ ನಿಮ್ಮ ದೇವರಾದ ಸರ್ವೇಶ್ವರನನ್ನು ಅರಸಿದರೆ ಅವರು ನಿಮಗೆ ಸಿಗುವರು.


ಈ ಇಸ್ರಯೇಲರು ಬಾಳ್ ದೇವತೆಯ ಪ್ರತಿಮೆಗಳನ್ನು ಪೂಜಿಸಿ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು.


ನಿಮ್ಮ ದೇವರಾಗಿರುವ ಸರ್ವೇಶ್ವರನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ಆಗ ನಿಮ್ಮನ್ನು ಯಾವ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸುವೆನು,” ಎಂದು ಹೇಳಿ ಅವರೊಡನೆ ಒಡಂಬಡಿಕೆ ಮಾಡಿಕೊಂಡರು.


ಇದಲ್ಲದೆ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನು ಬೇತೇಲಿನಲ್ಲಿ ಏರ್ಪಡಿಸಿದ ಪೂಜಾಸ್ಥಳವನ್ನೂ ಅದರಲ್ಲಿದ್ದ ಬಲಿಪೀಠವನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು.


ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರ ಮನಸ್ಸು ಇನ್ನೂ ತಮ್ಮ ಪಿತೃಗಳ ದೇವರ ಮೇಲೆ ನಾಟಿರಲಿಲ್ಲ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಸ್ರಯೇಲಿನ ಜನರೇ, ನೀವು ಹಿಂದಿರುಗುವಿರಾದರೆ ನನ್ನ ಬಳಿಗೆ ಬನ್ನಿ. ಅಸಹ್ಯವಾದ ನಿಮ್ಮ ಮೂರ್ತಿ ಪೂಜಾವಸ್ತುಗಳನ್ನು ನನ್ನ ಕಣ್ಣೆದುರಿನಿಂದ ತೆಗೆದುಬಿಡಿ. ಆಗ ನೀವು ಅತ್ತಿತ್ತ ತೂರಾಡಲಾರಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು