Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:5 - ಕನ್ನಡ ಸತ್ಯವೇದವು C.L. Bible (BSI)

5 ಸಮುವೇಲನು ಪುನಃ ಅವರಿಗೆ, “ಇಸ್ರಯೇಲರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಸರ್ವೇಶ್ವರನನ್ನು ಪ್ರಾರ್ಥಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸಮುವೇಲನು ತಿರುಗಿ ಅವರಿಗೆ, “ಇಸ್ರಾಯೇಲ್ಯರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಮುವೇಲನು ತಿರಿಗಿ ಅವರಿಗೆ - ಇಸ್ರಾಯೇಲ್ಯರೆಲ್ಲರೂ ವಿುಚ್ಪೆಯಲ್ಲಿ ಕೂಡಿ ಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಮುವೇಲನು ಅವರಿಗೆ, “ಇಸ್ರೇಲರೆಲ್ಲರೂ ಮಿಚ್ಪೆಯಲ್ಲಿ ಒಟ್ಟುಗೂಡಬೇಕು. ನಾನು ನಿಮಗಾಗಿ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸಮುಯೇಲನು, “ನಾನು ನಿಮಗೋಸ್ಕರವಾಗಿ ಯೆಹೋವ ದೇವರನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲರನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:5
18 ತಿಳಿವುಗಳ ಹೋಲಿಕೆ  

ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಯೇಲರೆಲ್ಲರು ಏಕ ಮನಸ್ಸಿನಿಂದ ಹೊರಟು ಮಿಚ್ಫೆಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿದರು.


ಜನರನ್ನು ಒಟ್ಟುಗೂಡಿಸಿರಿ; ಸಭೆಯನ್ನು ಏರ್ಪಡಿಸಿರಿ; ವೃದ್ಧರನ್ನು, ಮಕ್ಕಳನ್ನು, ಮೊಲೆಗೂಸುಗಳನ್ನು ಕರೆತನ್ನಿರಿ. ವಧೂವರರು ತಮ್ಮ ಕಲ್ಯಾಣಗೃಹದಿಂದ ಹೊರಟುಬರಲಿ.


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನ, ಇಸ್ರಯೇಲರು ಉಪವಾಸವಾಗಿದ್ದು ಗೋಣೀ ತಟ್ಟನ್ನು ಕಟ್ಟಿಕೊಂಡು, ತಲೆಯ ಮೇಲೆ ಮಣ್ಣುಸುರಿದುಕೊಂಡು, ನೆರೆದುಬಂದರು.


ಅಳಿದು ಉಳಿದಿದ್ದ ಯೆಹೂದ ಸೇನಾಪತಿಗಳು, ಗೆದಲ್ಯನು ಬಾಬಿಲೋನಿನ ಅರಸನಿಂದ ರಾಜ್ಯಪಾಲನಾಗಿ ನೇಮಕವಾಗಿದ್ದಾನೆಂಬ ಸಮಾಚಾರವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಬಂದರು. ಅವರ ಹೆಸರುಗಳು ಇವು: ನೆತನ್ಯನ ಮಗ ಇಷ್ಮಾಯೇಲನು, ಕಾರೇಹನ ಮಗ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು.


ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ.


ಸಮುವೇಲನು ಇಸ್ರಯೇಲರನ್ನು ಮಿಚ್ಪೆಗೆ ಕರೆಯಿಸಿ ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿಸಿದನು.


ಅವನು ಇಸ್ರಯೇಲರ ನ್ಯಾಯಗಳನ್ನು ತೀರಿಸುವುದಕ್ಕಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಾಕ್ಕೆ ತಿರುಗಿ ಬರುತ್ತಿದ್ದನು.


ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಸರ್ವೇಶ್ವರ ಇಲ್ಲಿಯವರೆಗೆ ನಮಗೆ ಸಹಾಯ ಮಾಡಿದರು,” ಎಂದು ಹೇಳಿ ಅದಕ್ಕೆ, ‘ಎಬನೆಜೆರ್’ ಎಂದು ಹೆಸರಿಟ್ಟನು.


ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.


ಅಂತೆಯೇ ಲಾಬಾನನು, “ನಾವು ಒಬ್ಬರನ್ನೊಬ್ಬರು ಬಿಟ್ಟು ಅಗಲಿದಾಗಲು ಸರ್ವೇಶ್ವರ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರಲಿ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ‘ಮಿಚ್ಪಾ’ ಎಂದು ಹೆಸರಾಯಿತು.


ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಂಡರು. ಇಸ್ರಯೇಲರು ಕೂಡಿ ಮಿಚ್ಫೆಯಲ್ಲಿ ಪಾಳೆಯಮಾಡಿಕೊಂಡರು.


ಹಾಗೆಯೇ ಇಸ್ರಯೇಲರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಸರ್ವೇಶ್ವರಸ್ವಾಮಿಯೊಬ್ಬರಿಗೆ ಸೇವೆ ಸಲ್ಲಿಸತೊಡಗಿದರು.


‘ನ್ಯಾಯಸ್ಥಾಪನೆಗಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಡಿ’ ಎಂಬ ಮಾತಿಗೆ ಸಮುವೇಲನು ದುಃಖಪಟ್ಟನು. ಸರ್ವೇಶ್ವರನನ್ನು ಪ್ರಾರ್ಥಿಸಿದನು.


ನಾನು ಸರ್ವೇಶ್ವರನಿಗೆ ಮೊರೆಯಿಡುತ್ತೇನೆ; ಈಗ ಗೋದಿಯ ಸುಗ್ಗಿಕಾಲವಾಗಿದ್ದರೂ ಗುಡುಗನ್ನೂ ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತಮ್ಮ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬುದನ್ನು ಅವರು ತೋರಿಸಿಕೊಡುವರು,” ಎಂದು ಅವರಿಗೆ ಹೇಳಿದನು.


ಆಗ ಯೆರೆಮೀಯನು ಅಹೀಕಾಮನ ಮಗ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ಅವನೊಡನೆ ಹಾಗು ನಾಡಿನ ಉಳಿದ ಜನರ ನಡುವೆ ವಾಸಮಾಡಿದನು.


ಮಿಚ್ಫೆ, ಕೆಫೀರಾ, ಮೋಚಾ, ರೆಕೆಮ್, ಇರ್ಪೇಲ್, ತರಲಾ, ಚೇಲ,‌


“ಯಾಜಕರೇ, ಕೇಳಿ: ಇಸ್ರಯೇಲ್ ಮನೆತನದವರೇ, ಗಮನಿಸಿ. ರಾಜವಂಶದವರೇ ಕಿವಿಗೊಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು