Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:9 - ಕನ್ನಡ ಸತ್ಯವೇದವು C.L. Bible (BSI)

9 ಆಗ ಸಮುವೇಲನು ಹಾಲುಕುಡಿಯುವ ಒಂದು ಕುರಿಮರಿಯನ್ನು ತಂದು ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿಸಿ, ಇಸ್ರಯೇಲರ ಪರವಾಗಿ ಪ್ರಾರ್ಥನೆಮಾಡಿದನು. ಸರ್ವೇಶ್ವರ ಸದುತ್ತರವನ್ನು ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು. ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸಮುವೇಲನು ಕುರಿಮರಿಯೊಂದನ್ನು ತಂದು ಯೆಹೋವನಿಗೆ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಸಮುವೇಲನು ಇಸ್ರೇಲರಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಸಮುವೇಲನ ಪ್ರಾರ್ಥನೆಗೆ ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಸಮುಯೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು, ಯೆಹೋವ ದೇವರಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು, ಇಸ್ರಾಯೇಲರಿಗೋಸ್ಕರ ಯೆಹೋವ ದೇವರಿಗೆ ಮೊರೆಯಿಟ್ಟನು. ಯೆಹೋವ ದೇವರು ಅವನಿಗೆ ಉತ್ತರವನ್ನು ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:9
16 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ಪ್ರಭುವಿನ ಯಾಜಕರು, ಮೋಶೆ ಮತ್ತು ಆರೋನನು I ಸಮುವೇಲನು ಸಹ ಆತನ ಶರಣರಲಿ ಒಬ್ಬನು I ಪ್ರಾರ್ಥಿಸಲು ಇವರು, ಪ್ರಭುವು ಸದುತ್ತರಿಸಿದನು II


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಅಲ್ಲಿ ಅವನ ಸ್ವಂತ ಮನೆ ಇದ್ದುದರಿಂದ ಅಲ್ಲಿಯೇ ಸರ್ವೇಶ್ವರನಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಇಸ್ರಯೇಲರನ್ನು ಪಾಲಿಸುತ್ತಿದ್ದನು.


ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ?’ ಎಂದನು. ಆಗ ಸರ್ವೇಶ್ವರ, “ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗು. ಸರ್ವೇಶ್ವರನಿಗೆ ಬಲಿಯರ್ಪಣೆ ಮಾಡಲು ಬಂದಿದ್ದೇನೆ ಎಂದು ಹೇಳಿ ಜೆಸ್ಸೆಯನನ್ನು ಅದಕ್ಕೆ ಆಮಂತ್ರಿಸು.


ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿವಸಗಳಾದ ನಂತರ ನಾನು ದಹನಬಲಿಗಳನ್ನೂ ಶಾಂತಿಸಮಾಧಾನಬಲಿಗಳನ್ನೂ ಸಮರ್ಪಿಸುವುದಕ್ಕಾಗಿ ಅಲ್ಲಿಗೆ ಬಂದು ನೀನು ಮಾಡಬೇಕಾದುದನ್ನು ನಿನಗೆ ತಿಳಿಸುವೆನು; ಅಲ್ಲಿಯವರೆಗೆ ಕಾದುಕೊಂಡಿರು,” ಎಂದು ಹೇಳಿದನು.


“ಈ ದಿನ ನಮ್ಮ ಊರಿನವರು ಗುಡ್ಡದ ಮೇಲೆ ಬಲಿಯನ್ನರ್ಪಿಸುವುದರಿಂದ ಅವರು ಈಗಲೇ ಇಲ್ಲಿಗೆ ಬಂದರು; ಬೇಗನೆ ಹೋಗಿ;


ಊರಿನ ಜನರು ಬೆಳಿಗ್ಗೆ ಎದ್ದು ಬಾಳನ ಬಲಿಪೀಠ ಕೆಡವಲಾಗಿರುವುದನ್ನೂ ಅದರ ಸಮೀಪದಲ್ಲಿದ್ದ ವಿಗ್ರಹಸ್ತಂಭ ಕಡಿಯಲಾಗಿರುವುದನ್ನೂ ಹೊಸದಾಗಿ ಕಟ್ಟಿದ ಬಲಿಪೀಠದ ಮೆಲೆ ಎರಡನೆಯ ಹೋರಿ ಬಲಿಯಾದದ್ದನ್ನೂ ಕಂಡು,


ಈ ಗುಡ್ಡದ ಶಿಖರದಲ್ಲಿ ಸರ್ವೇಶ್ವರನಿಗಾಗಿ ನೇಮಕವಾದ ರೀತಿಯಿಂದ ಒಂದು ಬಲಿಪೀಠವನ್ನು ಕಟ್ಟಿಸು. ನೀನು ಕಡಿದುಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆ ಹೋರಿಯನ್ನು ದಹನ ಬಲಿಯಾಗಿ ಸಮರ್ಪಿಸು,” ಎಂದು ಹೇಳಿದರು.


“ಕರುವಾಗಲಿ, ಕುರಿಮರಿಯಾಗಲಿ, ಆಡುಮರಿಯಾಗಲಿ ಹುಟ್ಟಿ ಏಳು ದಿವಸ ಆದ ಬಳಿಕ ಅದನ್ನು ಸರ್ವೇಶ್ವರನಿಗೆ ಹೋಮವಾಗಿ ಸಮರ್ಪಿಸಿದರೆ ಅಂಗೀಕೃತವಾಗುವುದು.


ನಾನು ಅವರನ್ನು ಬೇಡಿಕೊಳ್ಳುತ್ತಾ, ‘ಸರ್ವೇಶ್ವರಾ, ದೇವರೇ, ನೀವು ನಿಮ್ಮ ಮಹಿಮೆಯಿಂದ ರಕ್ಷಿಸಿ, ನಿಮ್ಮ ಭುಜಬಲ ಪ್ರಯೋಗಿಸಿ ಈಜಿಪ್ಟಿನಿಂದ ಬಿಡುಗಡೆಮಾಡಿದ ನಿಮ್ಮ ಸ್ವಕೀಯ ಜನರನ್ನು ನಾಶಮಾಡಬೇಡಿ.


ನನ್ನ ಹೃನ್ಮನಗಳಿಗೆ ಸರಿಯಾದುದನ್ನೇ ಮಾಡುವ ಒಬ್ಬ ಶ್ರದ್ಧೆಯುಳ್ಳ ಯಾಜಕನನ್ನು ಎಬ್ಬಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.


ನಾನು ಸರ್ವೇಶ್ವರನಿಗೆ ಮೊರೆಯಿಡುತ್ತೇನೆ; ಈಗ ಗೋದಿಯ ಸುಗ್ಗಿಕಾಲವಾಗಿದ್ದರೂ ಗುಡುಗನ್ನೂ ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತಮ್ಮ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬುದನ್ನು ಅವರು ತೋರಿಸಿಕೊಡುವರು,” ಎಂದು ಅವರಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು