Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:12 - ಕನ್ನಡ ಸತ್ಯವೇದವು C.L. Bible (BSI)

12 ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ ಕೆಲವರನ್ನು ಪಂಚಾಶದಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಾಯುಧ, ರಥಸಾಮಗ್ರಿಗಳನ್ನು ಮಾಡುವವರೂ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ, ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಕ್ಕೆ ಬೇಕಾದ ಆಯುಧ, ರಥಸಾಮಾಗ್ರಿಗಳನ್ನು ಮಾಡುವವರೂ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇವಿುಸುವನು. ಇನ್ನು ಕೆಲವರು ಅವನ ಭೂವಿುಯನ್ನು ಉಳುವವರೂ ಪೈರನ್ನು ಕೊಯ್ಯುವವರೂ ಯುದ್ಧಾಯುಧ, ರಥಸಾಹಿತ್ಯ ಇವುಗಳನ್ನು ಮಾಡುವವರೂ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ರಾಜನು ನಿಮ್ಮ ಮಕ್ಕಳನ್ನು ಯೋಧರನ್ನಾಗಿ ಮಾಡಿಕೊಳ್ಳುವನು. ಅವರಲ್ಲಿ ಕೆಲವರು ಒಂದು ಸಾವಿರ ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ಇನ್ನು ಕೆಲವರು ಐವತ್ತು ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. “ತನ್ನ ಭೂಮಿಯನ್ನು ಉಳಲು ಮತ್ತು ಪೈರನ್ನು ಕೊಯ್ಯಲು ರಾಜನು ನಿಮ್ಮ ಮಕ್ಕಳನ್ನು ತೆಗೆದುಕೊಳ್ಳುವನು; ಯುದ್ಧದ ಆಯುಧಗಳನ್ನು ತಯಾರಿಸಲೂ ತನ್ನ ರಥಕ್ಕೆ ಬೇಕಾದ ಸಾಮಾಗ್ರಿಗಳನ್ನು ತಯಾರಿಸಲೂ ಅವನು ಅವರನ್ನು ಬಳಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನು ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿಗಳಾಗಿಯೂ, ತನ್ನ ಭೂಮಿಯನ್ನು ಊಳುವವರಾಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ಹಾಗು ತನ್ನ ರಥಸಾಮಗ್ರಿಗಳನ್ನು ಮಾಡುವವರಾಗಿಯೂ ನೇಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:12
8 ತಿಳಿವುಗಳ ಹೋಲಿಕೆ  

ಸರ್ವ ಇಸ್ರಯೇಲರ ಮೇಲೆ ಸೊಲೊಮೋನನು ಹನ್ನೆರಡು ಜನ ಜಿಲ್ಲಾಧಿಕಾರಿಗಳನ್ನು ನೇಮಿಸಿದ್ದನು. ಅವರು ತಮ್ಮ ಜಿಲ್ಲೆಗಳಿಂದ ಅರಸನಿಗೂ ಅರಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪೂರೈಸುತ್ತಿದ್ದರು. ಪ್ರತಿಯೊಬ್ಬನೂ ವರ್ಷದಲ್ಲಿ ಒಂದೊಂದು ತಿಂಗಳು ಪೂರೈಸಬೇಕಾಗಿತ್ತು.


ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಕುಲಪುತ್ರರೇ ಕೇಳಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ಮಾಡುವುದೇಕೆ? ಜೆಸ್ಸೆಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಯೇ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುತ್ತಾನೆಯೆ?


ಯುದ್ಧಭೂಮಿಯಿಂದ ಬಂದಿದ್ದ ಆ ಸೈನ್ಯದ ಸಹಸ್ರಾಧಿಪತಿಗಳನ್ನು ಹಾಗು ಶತಾಧಿಪತಿಗಳನ್ನು ಕಂಡು ಮೋಶೆ ಕೋಪಗೊಂಡನು.


ಇದಲ್ಲದೆ ಅವನು ನಿಮ್ಮ ಹೆಣ್ಣು ಮಕ್ಕಳನ್ನು ಪರಿಮಳದ್ರವ್ಯ ಮಾಡುವುದಕ್ಕೂ, ಅಡಿಗೆ ಮಾಡುವುದಕ್ಕೂ, ರೊಟ್ಟಿ ಸುಡುವುದಕ್ಕೂ ನೇಮಿಸಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು