Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:19 - ಕನ್ನಡ ಸತ್ಯವೇದವು C.L. Bible (BSI)

19 ಹೀಗೆ ಸಮುವೇಲನು ಎಷ್ಟು ಹೇಳಿದರೂ ಜನರು ಕೇಳದೆ ಹೋದರು. “ಅದಿರಲಿ; ನಮಗೆ ಅರಸನನ್ನು ಕೊಡು; ನಾವು ಇತರ ಜನಾಂಗಗಳಂತೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗೆ ಸಮುವೇಲನು ಎಷ್ಟು ಹೇಳಿದರೂ ಜನರು ಕೇಳದೆ - ಅದಿರಲಿ; ನಮಗೆ ಅರಸನನ್ನು ಕೊಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಸಮುವೇಲನ ಮಾತುಗಳಿಗೆ ಜನರು ಕಿವಿಗೊಡಲಿಲ್ಲ. ಅವರು, “ಇಲ್ಲ, ನಮ್ಮನ್ನಾಳಲು ಒಬ್ಬ ರಾಜನು ಇರಲೇ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೂ ಜನರು ಸಮುಯೇಲನ ಮಾತನ್ನು ಕೇಳಲೊಲ್ಲದೆ, ಅವರು, “ಹಾಗಲ್ಲ, ನಮ್ಮ ಮೇಲೆ ಅರಸನು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:19
9 ತಿಳಿವುಗಳ ಹೋಲಿಕೆ  

“ಸರ್ವೇಶ್ವರನ ಹೆಸರಿನಲ್ಲಿ ನೀನು ನಮಗೆ ನುಡಿದ ಮಾತನ್ನು ನಾವು ಕೇಳಲೊಲ್ಲೆವು.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ನಾನು ತಡಮಾಡದೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಓಗೊಡದೆ, ಈ ಕೃತ್ಯಗಳನ್ನೆಲ್ಲ ಮಾಡಿದ್ದೀರಿ.


ಆದುದರಿಂದ ಅವರಿಗೆ ಆಪತ್ತು ಬಂದೊದಗುವಂತೆ ಮಾಡುವೆನು. ಅವರು ಅಂಜುತ್ತಿದ್ದ ವಿಪತ್ತುಗಳನ್ನೇ ಅವರ ಮೇಲೆ ಬರಮಾಡುವೆನು. ಏಕೆಂದರೆ, ನಾನು ಕೂಗಿದಾಗ ಯಾರೂ ಉತ್ತರಿಸಲಿಲ್ಲ, ನಾನು ಹೇಳಿದಾಗ ಅವರು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು, ನನಗೆ ಇಷ್ಟವಲ್ಲದ್ದನ್ನೇ ಆಯ್ಕೆಮಾಡಿಕೊಂಡರು.”


“ಆದರೆ ಕೇಳಲಿಲ್ಲಾ ಜನತೆ ನನ್ನ ಮಾತುಗಳನು I ತೋರಲಿಲ್ಲ ಇಸ್ರಯೇಲರು ನನಗೆ ವಿಧೇಯತೆಯನು, II


“ನಿಮ್ಮ ದೇವರಾದ ಸರ್ವೇಶ್ವರ, ನಿಮಗೆ ಕೊಡುವ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿರುವಾಗ ‘ಸುತ್ತಲಿರುವ ಎಲ್ಲ ಜನಾಂಗಗಳಂತೆ ನಾವೂ ಒಬ್ಬ ಅರಸನನ್ನು ನೇಮಿಸಿಕೊಳ್ಳೋಣ’ ಎಂದು ಹೇಳಿಕೊಳ್ಳಬಹುದು.


ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಸರ್ವೆಶ್ವರ ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.


ಆದರೆ ಇಸ್ರಯೇಲರು ಅವರ ಮಾತನ್ನು ಕೇಳದೆ, ಮನಸ್ಸೆಯಿಂದ ಪ್ರೇರಿತರಾಗಿ, ತಮ್ಮ ಮುಂದೆಯೇ ಸರ್ವೇಶ್ವರನಿಂದ ಸಂಹೃತರಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


“ಎಂತಲೇ ಕೈಬಿಟ್ಟೆ ಅವರನು ಹಟಮಾರಿಗಳೆಂದು I ತಮಗಿಷ್ಟಬಂದಂತೆಯೆ ನಡೆದುಕೊಳ್ಳಲಿಯೆಂದು, II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು