Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:17 - ಕನ್ನಡ ಸತ್ಯವೇದವು C.L. Bible (BSI)

17 ಸಮುವೇಲನು ಸೌಲನನ್ನು ಕಂಡಾಗ ಸರ್ವೇಶ್ವರ ಅವನಿಗೆ, “ನಾನು ತಿಳಿಸಿದ್ದ ವ್ಯಕ್ತಿ ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು,” ಎಂದು ಸೂಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು” ಎಂದು ಸೂಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ - ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು ಎಂದು ಸೂಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ನಿನಗೆ ಹೇಳಿದ ಮನುಷ್ಯ ಇವನೇ. ಇವನು ನನ್ನ ಜನರನ್ನು ಆಳುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸಮುಯೇಲನು ಸೌಲನನ್ನು ಕಂಡಾಗ ಯೆಹೋವ ದೇವರು, “ಇಗೋ, ನಾನು ನಿನಗೆ ಹೇಳಿದ ಮನುಷ್ಯನು ಇವನೇ. ಇವನೇ ನನ್ನ ಜನರನ್ನು ಆಳುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:17
10 ತಿಳಿವುಗಳ ಹೋಲಿಕೆ  

ಇಷ್ಟವಿಲ್ಲದೆ ಸಿಟ್ಟಿನಿಂದ ನಿನಗೆ ರಾಜನನ್ನು ಕೊಟ್ಟೆ. ಈಗ ಕಡುಕೋಪದಿಂದ ಆ ರಾಜರನ್ನು ತೆಗೆದುಬಿಡುತ್ತೇನೆ.


ತಮಗೆ ಅರಸನು ಬೇಕೆಂದು ಕೇಳಿಕೊಂಡಾಗ ದೇವರು ಬೆನ್ಯಾಮೀನ ಗೋತ್ರದ ಕೀಷನ ಮಗ ಸೌಲನನ್ನು ನೇಮಿಸಿದರು. ಇವನು ನಾಲ್ವತ್ತು ವರ್ಷ ಆಳಿದನು.


ಕೋಪಗೊಂಡು ಅವರನ್ನು ಶಪಿಸಿದೆ; ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕೀಳಿಸಿದೆ.


ಇದಲ್ಲದೆ, “ಸಬ್ಬತ್‍ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಜೆರುಸಲೇಮಿನ ಬಾಗಿಲುಗಳಲ್ಲಿ ಕತ್ತಲಾಗುವಾಗಲೇ ಕದಗಳನ್ನು ಮುಚ್ಚಿಸಬೇಕು; ಸಬ್ಬತ್‍ದಿನ ಗತಿಸುವುದಕ್ಕಿಂತ ಮುಂಚೆ ಅವುಗಳನ್ನು ತೆರೆಯಬಾರದು,” ಎಂದು ಆಜ್ಞಾಪಿಸಿದೆ. ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆ.


ತನ್ನ ಮಕ್ಕಳು ದೇವದೂಷಕರು ಎಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ತಿದ್ದಲಿಲ್ಲ. ಈ ಪಾಪದ ನಿಮಿತ್ತ ಅವನ ಕುಟುಂಬವನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.


ಊರಬಾಗಿಲಿಗೆ ಬಂದ ಸೌಲನು ಎದುರಿಗೆ ಬಂದ ಸಮುವೇಲನನ್ನು ನೋಡಿ, “ದಾರ್ಶನಿಕರ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ತಿಳಿಸುವಿರಾ?’ ಎಂದನು.


ಸರ್ವೇಶ್ವರನ ಈ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗ ಹನಮೇಲನು ಕಾರಾಗೃಹದ ಅಂಗಳದಲ್ಲಿ ಇದ್ದ ನನ್ನ ಬಳಿಗೆ ಬಂದು, ‘ಬೆನ್ಯಾಮೀನ್ ನಾಡಿನ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ. ಅದಕ್ಕೆ ನೀನೆ ಬಾಧ್ಯನು, ನಿನಗಾಗಿಯೇ ಕೊಂಡುಕೊ’ ಎಂದು ಕೇಳಿಕೊಂಡನು. ಕೂಡಲೆ ಇದು ಸರ್ವೇಶ್ವರನ ನುಡಿ ಎಂದು ನನಗೆ ಗೊತ್ತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು