1 ಸಮುಯೇಲ 9:20 - ಕನ್ನಡ ಸತ್ಯವೇದವು C.L. Bible (BSI)20 ಮೂರು ದಿವಸಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗಾಗಿ ಚಿಂತೆ ಮಾಡಬೇಡ; ಅವು ಈಗಾಗಲೇ ಸಿಕ್ಕಿವೆ. ಮತ್ತು ಇಸ್ರಯೇಲರ ಆಶೋತ್ತರವೆಲ್ಲ ನಿನಗೂ ನಿನ್ನ ಕುಟುಂಬದವರಿಗೂ ಸಲ್ಲುವವಲ್ಲವೇ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮೂರು ದಿನಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಇಸ್ರಾಯೇಲರ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು, ನಿನ್ನ ಮತ್ತು ನಿನ್ನ ತಂದೆಯ ಕುಟುಂಬದವರಿಗೂ ಸಲ್ಲುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮೂರು ದಿವಸಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಮತ್ತು ಇಸ್ರಾಯೇಲ್ಯರ ಶ್ರೇಷ್ಠವಸ್ತುಗಳೆಲ್ಲಾ ನಿನಗೂ ನಿನ್ನ ಕುಟುಂಬದವರಿಗೂ ಸಲ್ಲುವವಲ್ಲವೋ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಮೂರು ದಿನಗಳ ಹಿಂದೆ ಕಳೆದು ಹೋದ ನಿನ್ನ ಕತ್ತೆಗಳಿಗಾಗಿ ಚಿಂತಿಸಬೇಡ. ಅವುಗಳೆಲ್ಲ ಸಿಕ್ಕಿವೆ. ಈಗ ಇಸ್ರೇಲರಿಗೆಲ್ಲ ನೀನು ಬೇಕಾಗಿರುವೆ. ಅವರಿಗೆ ನೀನು ಮತ್ತು ನಿನ್ನ ತಂದೆಯ ಕುಟುಂಬದ ಜನರೆಲ್ಲ ಬೇಕಾಗಿದ್ದಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇಂದಿಗೆ ಮೂರನೆಯ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳಿಗಾಗಿ ಚಿಂತೆ ಮಾಡಬೇಡ. ಏಕೆಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು? ಅದು ನಿನ್ನ ಮೇಲೆಯೇ ಅಲ್ಲವೋ,” ಎಂದನು. ಅಧ್ಯಾಯವನ್ನು ನೋಡಿ |