Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:21 - ಕನ್ನಡ ಸತ್ಯವೇದವು C.L. Bible (BSI)

21 ಅದಕ್ಕೆ ಸೌಲನು, “ಇಸ್ರಯೇಲ್ ಕುಲಗಳಲ್ಲಿ ಅತ್ಯಲ್ಪವಾಗಿರುವ ಬೆನ್ಯಾಮೀನ್ ಕುಲಕ್ಕೆ ಸೇರಿದವನು ನಾನು; ಮಾತ್ರವಲ್ಲ, ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಏಕೆ ಹೇಳುತ್ತಿರುವಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕೆ ಸೌಲನು, “ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದಕ್ಕೆ ಸೌಲನು - ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅದಕ್ಕೆ ಸೌಲನು, “ನಾನು ಬೆನ್ಯಾಮೀನ್ ಕುಲದವನು. ಅದು ಇಸ್ರೇಲರಲ್ಲಿ ಒಂದು ಚಿಕ್ಕ ಕುಲ. ನನ್ನ ಕುಟುಂಬವು ಬೆನ್ಯಾಮೀನ್ ಕುಲದಲ್ಲಿ ತೀರ ಕನಿಷ್ಠವಾದುದು. ಇಸ್ರೇಲರಿಗೆ ನಾನು ಬೇಕಾಗಿದ್ದೇನೆ ಎಂದು ಏಕೆ ಹೇಳುತ್ತಿರುವೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಸೌಲನು ಅದಕ್ಕೆ, “ಆದರೆ ನಾನು ಇಸ್ರಾಯೇಲನ ಸಣ್ಣ ಗೋತ್ರವಾದ ಬೆನ್ಯಾಮೀನನು ನಾನಲ್ಲವೋ, ಬೆನ್ಯಾಮೀನನ ಗೋತ್ರದಲ್ಲಿ ನನ್ನ ವಂಶವು ಸಣ್ಣದಾದದ್ದಲ್ಲವೋ? ಇಂಥ ಸಂಗತಿಯನ್ನು ನನಗೇಕೆ ಹೇಳುತ್ತೀ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:21
13 ತಿಳಿವುಗಳ ಹೋಲಿಕೆ  

“ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಸರ್ವೇಶ್ವರ ನಿನಗೆ ಇಸ್ರಯೇಲರಲ್ಲಿ ರಾಜಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದೆ.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು.


ಮುನ್ನಡೆಯುತ್ತಿಹರಿದೋ ಕಿರಿಯ ಕುಲದ ಬೆನ್ಯಮೀನರು I ಗುಂಪಾಗಿ ಬರುತಿಹರು ಯೆಹೂದ್ಯ ಕುಲದ ಗುರುಹಿರಿಯರು I ಹಿಂಬಾಲಿಸುತಿಹರು ಜೆಬುಲೋನ್, ನಫ್ತಾಲಿ ಗೋತ್ರದವರು II


ಪೂರ್ವದಲ್ಲಿ ಎಫ್ರಯಿಮ್ ಮಾತನಾಡಿದಾಗ ಎಲ್ಲರೂ ನಡುಗುತ್ತಿದ್ದರು. ಅದು ಇಸ್ರಯೇಲಿನಲ್ಲಿ ಅಷ್ಟು ಉನ್ನತ ಸ್ಥಿತಿಗೆ ಏರಿತ್ತು. ಆದರೆ ಅದು ಬಾಳ್ ದೇವತೆಗೆ ಆರಾಧನೆ ಸಲ್ಲಿಸಿದ್ದರಿಂದ ಪಾಪಕಟ್ಟಿಕೊಂಡು ಪತನವಾಯಿತು.


ಅಂತೆಯೇ ಆ ಸೇವಕರು ದಾವೀದನಿಗೆ ತಿಳಿಯಪಡಿಸಿದರು. ಅದಕ್ಕೆ ದಾವೀದನು, “ಅರಸರ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿ ಎಂದು ನೆನೆಸುತ್ತೀರೋ? ನಾನೊಬ್ಬ ಬಡವ, ದೀನದಲಿತ,” ಎಂದುಬಿಟ್ಟನು.


ಅದಕ್ಕೆ ದಾವೀದನು, “ಅರಸರ ಅಳಿಯನಾಗಲು ನಾನು ಎಷ್ಟರವನು? ಇಸ್ರಯೇಲರಲ್ಲಿ ನನ್ನ ಕುಲವಾಗಲಿ, ಕುಟುಂಬವಾಗಲಿ ಎಷ್ಟರದು?” ಎಂದನು.


ಕೆಲವು ಮಂದಿ ಪುಂಡುಪೋಕರು, “ಇವನೇನೋ ನಮ್ಮನ್ನು ರಕ್ಷಿಸುವವನು!” ಎಂದು ತಾತ್ಸಾರಮಾಡಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರೆದುಕೊಂಡು ಹೋದನು. ಬಲಿಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ,


ಸೌಲನ ತಂದೆಯಾದ ಕೀಷನೂ ಅಬ್ನೇರನ ತಂದೆಯಾದ ನೇರನೂ ಅಬೀಯೇಲನ ಮಕ್ಕಳು.


ನಿನ್ನ ಶಕ್ತಿಸಾಮರ್ಥ್ಯವನು ಹೇ ದೇವಾ, ಪ್ರದರ್ಶಿಸು I ನಮ್ಮ ಪರ ಪ್ರಯೋಗಿಸಿದ ಬಲವನು ಮರಳಿ ತೋರ್ಪಡಿಸು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು