Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:24 - ಕನ್ನಡ ಸತ್ಯವೇದವು C.L. Bible (BSI)

24 ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಸಮುವೇಲನು ಸೌಲನಿಗೆ, “ಇಗೋ, ಇದು ನಿನಗಾಗಿ ಪ್ರತ್ಯೇಕಿಸಿದ್ದು; ಇದನ್ನು ತಿನ್ನು. ಜನರನ್ನು ಬಲಿಭೋಜನಕ್ಕೆ ಕರೆದಾಗಿನಿಂದ ಇದು ನಿನಗಾಗಿಯೇ ಪ್ರತ್ಯೇಕವಾಗಿ ಇಡಲಾಗಿತ್ತು,” ಎಂದು ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಆಗ ಸಮುವೇಲನು, “ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು, ಯಾಕೆಂದರೆ ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು” ಎಂದು ಸೌಲನಿಗೆ ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟು ಅವನಿಗೆ - ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು. ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು ಎಂದು ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅಡಿಗೆಯವನು ತೊಡೆಯ ಮಾಂಸವನ್ನು ತೆಗೆದುಕೊಂಡು ಬಂದು ಸೌಲನ ಎದುರಿಗೆ ಮೇಜಿನ ಮೇಲಿಟ್ಟನು. ಸಮುವೇಲನು, “ನಾನು ನಿನಗಾಗಿ ಈ ಮಾಂಸವನ್ನು ಪ್ರತ್ಯೇಕವಾಗಿರಿಸಿದ್ದೇನೆ. ಇದನ್ನು ತಿನ್ನು, ಏಕೆಂದರೆ ಇದನ್ನು ಈ ವಿಶೇಷವಾದ ಸಂದರ್ಭದಲ್ಲಿ ನಿನಗೆ ಕೊಡುವುದಕ್ಕಾಗಿಯೇ ಪ್ರತ್ಯೇಕಿಸಲಾಗಿತ್ತು” ಎಂದು ಹೇಳಿದನು. ಆದ್ದರಿಂದ ಸೌಲನು ಸಮುವೇಲನ ಜೊತೆಯಲ್ಲಿ ಆ ದಿನ ಊಟಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಅಡಿಗೆಯವನು ಒಂದು ಮುಂದೊಡೆಯನ್ನೂ, ಅದರ ಸಂಗಡ ಇದ್ದುದ್ದನ್ನೂ ತಂದು ಅದನ್ನು ಸೌಲನ ಮುಂದೆ ಇಟ್ಟನು. ಆಗ ಸಮುಯೇಲನು ಸೌಲನಿಗೆ, “ನಿನಗಾಗಿ ಪ್ರತ್ಯೇಕಿಸಿದ್ದು ಇದೇ. ನಾನು ಜನರನ್ನು ಭೋಜನಕ್ಕೆ ಕರೆದಿದ್ದೇನೆಂದು ಹೇಳಿದ ಕಾಲದಿಂದ ಈವರೆಗೂ ನಿನಗೋಸ್ಕರ ಪ್ರತ್ಯೇಕವಾಗಿ ಇಟ್ಟಿದ್ದು ಇದೇ, ಇದನ್ನು ತಿನ್ನು,” ಎಂದನು. ಹಾಗೆಯೇ ಸೌಲನು ಆ ದಿವಸದಲ್ಲಿ ಸಮುಯೇಲನ ಸಂಗಡ ಊಟಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:24
6 ತಿಳಿವುಗಳ ಹೋಲಿಕೆ  

ಮಾಂಸಖಂಡಗಳನ್ನು, ತೊಡೆ ಮುಂದೊಡೆ ಮೊದಲಾದ ಒಳ್ಳೆಯ ಖಂಡಗಳನ್ನೆಲ್ಲಾ ಅದರಲ್ಲಿ ಒಟ್ಟಿಗೆ ಹಾಕು, ಉತ್ತಮವಾದ ಎಲುಬುಗಳನ್ನು ಅದರಲ್ಲಿ ತುಂಬಿಸು.


ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ಕಾಣಿಕೆಯಾಗಿ ಆರತಿ ಮಾಡಿಸಿದ ಎದೆಯ ಭಾಗವನ್ನು ಮತ್ತು ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ಅದರ ತೊಡೆಯನ್ನು ದೇವರದೆಂದು ಭಾವಿಸಬೇಕು.


ಪಟ್ಟಾಭಿಷೇಕಕ್ಕಾಗಿ ಸಮರ್ಪಿತವಾದ ಆ ಟಗರನ್ನೆಲ್ಲ, ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಕಾಳಿಜದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು, ಅವುಗಳ ಮೇಲಿರುವ ಕೊಬ್ಬನ್ನು,


ಅವುಗಳ ಮಾಂಸ ಹಾಗೂ ನೈವೇದ್ಯವಾಗಿ ಆರತಿಯೆತ್ತುವ ಎದೆ ಮತ್ತು ಬಲತೊಡೆ ನಿನಗೆ ಸಲ್ಲಬೇಕು.


“ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು,” ಎನ್ನಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು