Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:26 - ಕನ್ನಡ ಸತ್ಯವೇದವು C.L. Bible (BSI)

26 ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, “ಏಳು, ನಿನ್ನನ್ನು ಸಾಗಕಳಿಸುತ್ತೇನೆ,” ಎಂದು ಎಬ್ಬಿಸಲು, ಅವನೆದ್ದನು. ತರುವಾಯ ಅವರು ಇಬ್ಬರೂ ಹೊರಟು ಊರಹೊರಗೆ ಬಂದಾಗ ಸಮುವೇಲನು ಸೌಲನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, “ಏಳು, ನಿನ್ನನ್ನು ಕಳುಹಿಸಿ ಕೊಡುತ್ತೇನೆ” ಎಂದು ಎಬ್ಬಿಸಲು ಅವನು ಎದ್ದನು. ತರುವಾಯ ಅವರಿಬ್ಬರೂ ಹೊರಟು ಊರ ಹೊರಗೆ ಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು - ಏಳು, ನಿನ್ನನ್ನು ಸಾಗಕಳುಹಿಸುತ್ತೇನೆ ಎಂದು ಎಬ್ಬಿಸಲು ಅವನೆದ್ದನು. ತರುವಾಯ ಅವರಿಬ್ಬರೂ ಹೊರಟು ಊರ ಹೊರಗೆ ಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಮಾರನೆಯ ದಿನ ಬೆಳಗಿನ ಜಾವ, ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು ಎಬ್ಬಿಸಿ, “ಎದ್ದೇಳು, ನಿನ್ನನ್ನು ಕಳುಹಿಸಿಕೊಡುತ್ತೇನೆ” ಎಂದು ಹೇಳಿದನು. ಸೌಲನು ಮೇಲೆದ್ದನು ಮತ್ತು ಸಮುವೇಲನೊಂದಿಗೆ ಮನೆಯಿಂದ ಹೊರಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ಉದಯಕಾಲದಲ್ಲಿ ಸೂರ್ಯೋದಯದಲ್ಲಿ ಎದ್ದಾಗ, ಸಮುಯೇಲನು ಸೌಲನನ್ನು ಮಾಳಿಗೆಗೆ ಕರೆದು, “ಏಳು, ನಾನು ನಿನ್ನನ್ನು ಕಳುಹಿಸುತ್ತೇನೆ,” ಎಂದನು. ಹಾಗೆಯೇ ಸೌಲನು ಎದ್ದನು, ಆಗ ಸೌಲನೂ, ಸಮುಯೇಲನೂ ಇಬ್ಬರೂ ಹೊರಗೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:26
6 ತಿಳಿವುಗಳ ಹೋಲಿಕೆ  

ಅವನು, “ಏಳು, ಹೋಗೋಣ,” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಬರಲಿಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ಸ್ವಸ್ಥಳಕ್ಕೆ ಹೋದನು.


ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ, ‘ಇಸ್ರಯೇಲರೇ, ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ. ನಿಮ್ಮ ಮಧ್ಯೆ ಶಾಪಕ್ಕೆ ಕಾರಣವಾದದ್ದು ಉಂಟು. ಅದನ್ನು ನೀವು ತೆಗೆದು ಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ಹೇಳಿದ್ದಾರೆ.


ಅವರು ಪಟ್ಟಣಗಳನ್ನು ಬಿಟ್ಟು ಸ್ವಲ್ಪದೂರ ಹೋಗುವಷ್ಟರಲ್ಲಿ, ಜೋಸೆಫನು ತನ್ನ ಗೃಹನಿರ್ವಾಹಕನಿಗೆ, ‘ನೀನೆದ್ದು ಆ ಜನರನ್ನು ಹಿಂದಟ್ಟಿ ಹೋಗಿ ಹಿಡಿ. ಅವರಿಗೆ, ‘ನೀವು ಉಪಕಾರಕ್ಕೆ ಪ್ರತಿಯಾಗಿ ಏಕೆ ಅಪಕಾರ ಮಾಡಿದಿರಿ?


ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.


ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೆಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು.


“ನಿನ್ನ ಸೇವಕನನ್ನು ಮುಂದೆ ಕಳುಹಿಸಿ, ನೀನು ಇಲ್ಲೇ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು