Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:5 - ಕನ್ನಡ ಸತ್ಯವೇದವು C.L. Bible (BSI)

5 ಕಡೆಗೆ ಅವರು ಚೂಫ್ ನಾಡಿಗೆ ಬಂದರು. ಅಲ್ಲಿ ಅವನು ತನ್ನ ಆಳಿಗೆ, “ಹಿಂದಿರುಗಿ ಹೋಗೋಣ ನಡೆ; ನಮ್ಮ ತಂದೆ ಈ ಕತ್ತೆಗಳ ಚಿಂತೆಯನ್ನೇ ಬಿಟ್ಟು ನಮ್ಮ ಚಿಂತೆಯಲ್ಲಿ ಇರಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಡೆಗೆ ಅವರು ಚೂಫ್ ದೇಶಕ್ಕೆ ಬಂದಾಗ ಸೌಲನು ತನ್ನ ಆಳಿಗೆ, “ಹಿಂದಿರುಗಿ ಹೋಗೋಣ ನಡಿ; ನಮ್ಮ ತಂದೆಯು ಈಗ ಕತ್ತೆಗಳ ಚಿಂತೆ ಬಿಟ್ಟು ನಮ್ಮ ಚಿಂತೆಯಲ್ಲಿರಬಹುದು” ಅಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಡೆಗೆ ಅವರು ಚೂಫ್‍ದೇಶಕ್ಕೆ ಬಂದಾಗ ಅವನು ತನ್ನ ಆಳಿಗೆ - ಹಿಂದಿರುಗಿ ಹೋಗೋಣ ನಡಿ; ನಮ್ಮ ತಂದೆಯು ಈಗ ಕತ್ತೆಗಳ ಚಿಂತೆ ಬಿಟ್ಟು ನಮ್ಮ ಚಿಂತೆಯಲ್ಲಿದ್ದಾನು ಅನ್ನಲು ಆ ಆಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೊನೆಗೆ, ಸೌಲನು ಮತ್ತು ಅವನ ಸೇವಕನು ಚೂಫ್ ಎಂಬ ಹೆಸರಿನ ಪಟ್ಟಣಕ್ಕೆ ಬಂದರು. ಸೌಲನು ಸೇವಕನಿಗೆ, “ನಾವು ಮರಳಿ ಹೋಗೋಣ. ನಮ್ಮ ತಂದೆಯು ಕತ್ತೆಗಳ ಬಗ್ಗೆ ಯೋಚಿಸುವುದನ್ನು ಬಿಟ್ಟು ನಮ್ಮ ಬಗ್ಗೆ ಚಿಂತಿಸಲಾರಂಭಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಚೂಫ್ ಎಂಬ ದೇಶಕ್ಕೆ ಬಂದಾಗ, ಸೌಲನು ತನ್ನ ಸಂಗಡ ಇದ್ದ ಸೇವಕನಿಗೆ, “ನನ್ನ ತಂದೆಯು ಕತ್ತೆಗಳ ಮೇಲೆ ಇರುವ ಚಿಂತೆಯನ್ನು ಬಿಟ್ಟು, ನಮಗೋಸ್ಕರ ಚಿಂತೆ ಪಡದ ಹಾಗೆ ನಾವು ಹಿಂದಕ್ಕೆ ಹೋಗೋಣ ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:5
7 ತಿಳಿವುಗಳ ಹೋಲಿಕೆ  

ಈ ದಿನ ನೀನು ನನ್ನನ್ನು ಬಿಟ್ಟುಹೋದನಂತರ, ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಖೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ವ್ಯಕ್ತಿಗಳನ್ನು ಕಾಣುವೆ; ಅವರು, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆ ಕತ್ತೆಗಳ ಚಿಂತೆಬಿಟ್ಟು ನನ್ನ ಮಗನೆಲ್ಲಿ ಹೋದನೋ ಎಂದು ನಿನಗಾಗಿ ಹಂಬಲಿಸುತ್ತಾ ಇರುತ್ತಾರೆ’ ಎಂದು ಹೇಳುವರು.


ಎಫ್ರಯಿಮ್ ಬೆಟ್ಟದ ಪ್ರದೇಶದಲ್ಲಿ ರಾಮಾ ಒಂದು ಊರು. ಆ ಊರಲ್ಲಿ ‘ಎಲ್ಕಾನ’ ಎಂಬ ಒಬ್ಬ ಮನುಷ್ಯನಿದ್ದ. ಇವನು ಯೆರೋಹಾಮನ ಮಗ, ಎಲೀಹುವಿನ ಮೊಮ್ಮಗ ಹಾಗು ತೋಹುವಿನ ಮರಿಮಗ. ಈ ತೋಹು ಎಂಬುವನು ಎಫ್ರಯಿಮ್ಯನಾದ ಚೂಫನ ಮಗ.


“ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ.


ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.


ಉಡುಗೆತೊಡುಗೆಗಳ ಚಿಂತೆ ನಿಮಗೇಕೆ? ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ.


“ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ?


ಆದುದರಿಂದ ನಾಳೆಯ ಚಿಂತೆ ನಿಮಗೆ ಬೇಡ. ನಾಳೆಯ ಚಿಂತೆ ನಾಳೆಗೇ ಇರಲಿ. ಇಂದಿನ ಪಾಡೇ ಇಂದಿಗೆ ಸಾಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು