Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:13 - ಕನ್ನಡ ಸತ್ಯವೇದವು C.L. Bible (BSI)

13 ಅರಸನು ಮತ್ತೊಬ್ಬ ಪಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು, ಎಲೀಯನ ಮುಂದೆ ಮೊಣಕಾಲೂರಿ, “ದೈವಪುರುಷರೇ, ನನ್ನ ಮತ್ತು ನನ್ನ ಸೇವಕರಾದ ಈ ಐವತ್ತುಮಂದಿಯ ಪ್ರಾಣ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದ್ದಾಗಿರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅರಸನು ಮತ್ತೊಬ್ಬ ಪಂಚದಶಾಧಿಪತಿಯನ್ನು ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಅವನನ್ನು - ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಹಜ್ಯನು ಮೂರನೆಯ ಸೇನಾಧಿಪತಿಯನ್ನು ಐವತ್ತು ಜನರೊಂದಿಗೆ ಕಳುಹಿಸಿದನು. ಐವತ್ತು ಮಂದಿಯ ಮೂರನೆಯ ಸೇನಾಧಿಪತಿಯು ಎಲೀಯನ ಬಳಿಗೆ ಬಂದನು. ಸೇನಾಧಿಪತಿಯು ತನ್ನ ಮೊಣಕಾಲುಗಳ ಮೇಲೆ ಬಿದ್ದು ನಮಸ್ಕರಿಸಿದನು. ಸೇನಾಧಿಪತಿಯು ಎಲೀಯನನ್ನು ಬೇಡಿಕೊಳ್ಳುತ್ತಾ ಅವನಿಗೆ, “ದೇವ ಮನುಷ್ಯನೇ, ನನ್ನ ಮತ್ತು ಈ ಐವತ್ತು ಜನರ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತಿರುಗಿ ಅರಸನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವನನ್ನೂ, ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯವನು ಬಂದು ಎಲೀಯನ ಮುಂದೆ ತನ್ನ ಮೊಣಕಾಲೂರಿಕೊಂಡು ಅವನಿಗೆ, “ದೇವರ ಮನುಷ್ಯನೇ, ನೀನು ದಯಮಾಡು, ನನ್ನ ಪ್ರಾಣವೂ, ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಮೌಲ್ಯವುಳ್ಳದ್ದಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:13
17 ತಿಳಿವುಗಳ ಹೋಲಿಕೆ  

ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


ಆದ್ದರಿಂದ ದೇವರಿಗೆ ಶರಣರಾಗಿ ಬಾಳಿ, ಸೈತಾನನನ್ನು ಎದುರಿಸಿ ನಿಲ್ಲಿ. ಅವನು ನಿಮ್ಮಿಂದ ಪಲಾಯನಗೈಯುವನು.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕ ವ್ಯವಹಾರಗಳಲ್ಲೆಲ್ಲಾ ಸೇರಿಕೊಂಡಿದೆ. ಇದಲ್ಲದೆ, ನರಮಾನವರ ಎದೆಯಲ್ಲಿ ಕೆಟ್ಟತನ ತುಂಬಿದೆ; ಅವರು ಬದುಕಿರುವ ತನಕ ಮರುಳುತನ ಅವರ ಮನಸ್ಸನ್ನು ಸೆರೆಹಿಡಿದಿರುತ್ತದೆ. ಅನಂತರ ಸತ್ತವರನ್ನು ಸೇರಿಕೊಳ್ಳುತ್ತಾರೆ.


ಮೂರ್ಖನನ್ನು ಕಾಳಿನ ಸಂಗಡ ಒರಳಿಗೆ ಹಾಕಿ ಒನಕೆಯಿಂದ ಕುಟ್ಟಿದರೂ ಮೂರ್ಖತನ ತೊಲಗದು.


ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II


ಅವರ ಜೀವ ಆತನ ದೃಷ್ಟಿಯಲಿ ಅಮೂಲ್ಯ I ಜುಲುಮೆ ಶೋಷಣೆಗಳ ನೀಗಿಪುದು ಆತನ ಕಾರ್ಯ II


ಅರಸನು ಆ ಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರನು ಪ್ರಸನ್ನನಾಗುವಂತೆ ಬೇಡಿಕೊ; ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಅವರನ್ನು ನನ್ನ ಪರವಾಗಿ ಪ್ರಾರ್ಥಿಸು,” ಎಂದು ಕೇಳಿದನು. ಅಂತೆಯೇ ಆ ದೈವಭಕ್ತನು ಸರ್ವೇಶ್ವರನನ್ನು ಬೇಡಿಕೊಂಡನು; ಅರಸನ ಕೈ ವಾಸಿಯಾಗಿ ಮೊದಲಿನಂತೆ ಆಯಿತು.


ಆಗ ಸೌಲನು, “ನಾನು ಪಾಪಮಾಡಿದೆ, ದಾವೀದನೇ, ನನ್ನ ಪುತ್ರನೇ, ಹಿಂದಿರುಗಿ ಬಾ; ಈ ದಿನ ನನ್ನ ಜೀವ ನಿನ್ನ ದೃಷ್ಟಿಯಲ್ಲಿ ಬಲು ಬೆಲೆಯುಳ್ಳದೆಂದು ಮಾನ್ಯವಾಯಿತು. ಆದುದರಿಂದ ನಾನು ಇನ್ನು ಮುಂದೆ ನಿನಗೆ ಕೇಡು ಮಾಡುವುದಿಲ್ಲ. ಈವರೆಗೆ ನಾನು ಮಾಡಿದ್ದು ಹುಚ್ಚುತನ ಹಾಗೂ ದೊಡ್ಡ ತಪ್ಪು,” ಎಂದು ಹೇಳಿದನು.


ಆಗ ನಿನ್ನ ಪರಿವಾರದವರಾದ ಇವರೆಲ್ಲರು ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀವೂ ನಿಮ್ಮ ಅಧೀನದಲ್ಲಿರುವ ಜನರೆಲ್ಲರು ನಮ್ಮನ್ನು ಬಿಟ್ಟು ಹೋಗಿಬಿಡಿ - ಎಂದು ಬೇಡುವರು. ಇದಾದ ಮೇಲೆ ನಾನು ಹೊರಟುಹೋಗುವೆನು.’ ಈ ಮಾತುಗಳನ್ನು ಹೇಳಿ ಮೋಶೆ ಕೋಪದಿಂದ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ಅದಕ್ಕೆ ಎಲೀಯನು, “ನಾನು ದೈವಪುರುಷ ಹೌದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ,” ಎಂದನು. ಕೂಡಲೆ ದೇವರು ಆಕಾಶದಿಂದ ಕಳುಹಿಸಿದ ಬೆಂಕಿ ಬಂದು ಅವನನ್ನೂ ಅವನ ಐವತ್ತುಮಂದಿ ಸಿಪಾಯಿಗಳನ್ನೂ ಸುಟ್ಟುಬಿಟ್ಟಿತು.


ಆಕಾಶದಿಂದ ಬೆಂಕಿಬಿದ್ದು ನನಗೆ ಮುಂದೆ ಬಂದ ಆ ಇಬ್ಬರು ಪಂಚಾಶದಧಿಪತಿಗಳನ್ನೂ ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲವೆ? ನನ್ನ ಪ್ರಾಣವಾದರೂ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದೆಂದು ಮಾನ್ಯವಾಗಲಿ,” ಎಂದು ಬೇಡಿಕೊಂಡನು.


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು