2 ಅರಸುಗಳು 1:15 - ಕನ್ನಡ ಸತ್ಯವೇದವು C.L. Bible (BSI)15 ಆಗ ಸರ್ವೇಶ್ವರನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು; ಹೆದರಬೇಡ,” ಎಂದು ಹೇಳಿದನು. ಆದ್ದರಿಂದ ಎಲೀಯನು ಎದ್ದು ಇವನ ಜೊತೆಯಲ್ಲೇ ಅರಸನ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಯೆಹೋವನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಯೆಹೋವನ ದೂತನು ಎಲೀಯನಿಗೆ - ನೀನು ಇವನ ಸಂಗಡ ಹೋಗು; ಇವನಿಗೆ ಹೆದರಬೇಡ ಎಂದು ಹೇಳಿದ್ದರಿಂದ ಅವನು ಎದ್ದು ಇವನ ಜೊತೆಯಲ್ಲಿ ಅರಸನ ಬಳಿಗೆ ಹೋಗಿ ಅವನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನ ದೂತನು ಎಲೀಯನಿಗೆ, “ಸೇನಾಧಿಪತಿಯೊಡನೆ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದನು. ಎಲೀಯನು ರಾಜನಾದ ಅಹಜ್ಯನನ್ನು ನೋಡಲು ಆ ಸೇನಾಧಿಪತಿಯೊಡನೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಯೆಹೋವ ದೇವರ ದೂತನು ಎಲೀಯನಿಗೆ, “ಅವನ ಸಂಗಡ ಇಳಿದು ಹೋಗು, ಅವನಿಗೆ ಭಯಪಡಬೇಡ,” ಎಂದನು. ಆದ್ದರಿಂದ ಎಲೀಯನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋದನು. ಅಧ್ಯಾಯವನ್ನು ನೋಡಿ |