Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:17 - ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರ ಎಲೀಯನ ಮುಖಾಂತರ ಮುಂತಿಳಿಸಿದಂತೆಯೇ ಅರಸನು ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ. ಅವನ ಸ್ಥಾನದಲ್ಲಿ ಅವನ ತಮ್ಮ ಯೋರಾಮನು, ಯೆಹೂದ್ಯರ ಅರಸ ಯೆಹೋಷಾಫಾಟನ ಮಗ ಯೆಹೋರಾಮನ ಅಳ್ವಿಕೆಯ ಎರಡನೆಯ ವರ್ಷದಲ್ಲಿ, ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದ್ದರಿಂದ ಅವನಿಗೆ ಬದಲಾಗಿ [ಅವನ ತಮ್ಮನಾದ] ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳಿಕೆಯ ಎರಡನೆಯ ವರುಷದಲ್ಲಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಎಲೀಯನ ಮೂಲಕ ಯೆಹೋವನು ಹೇಳಿದಂತೆಯೇ ಅಹಜ್ಯನು ಸತ್ತುಹೋದನು. ಅಹಜ್ಯನಿಗೆ ಮಕ್ಕಳಿರಲಿಲ್ಲ. ಆದ್ದರಿಂದ ಅಹಜ್ಯನ ನಂತರ ಯೆಹೋರಾಮನು ಹೊಸ ರಾಜನಾದನು. ಯೆಹೋಷಾಫಾಟನ ಮಗನಾದ ಯೆಹೋರಾಮನು ಯೆಹೂದದ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೊಹೋರಾಮನು ಆಳುವುದಕ್ಕೆ ಆರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹಾಗೆಯೇ ಅವನು ಎಲೀಯನು ಹೇಳಿದ ಯೆಹೋವ ದೇವರ ವಾಕ್ಯದ ಪ್ರಕಾರವೇ ಸತ್ತುಹೋದನು. ಅಹಜ್ಯನಿಗೆ ಮಗನಿಲ್ಲದ್ದರಿಂದ ಯೆಹೂದದ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಎರಡನೆಯ ವರ್ಷದಲ್ಲಿ ಯೋರಾಮನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:17
11 ತಿಳಿವುಗಳ ಹೋಲಿಕೆ  

ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹನ್ನೆರಡು ವರ್ಷ ಆಳಿದನು.


ಯೆಹೂದ್ಯರ ಅರಸ ಯೆಹೋಷಾಫಾಟನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಅಹಾಬನ ಮಗ ಅಹಜ್ಯ ಎಂಬುವನು ಅರಸನಾಗಿ ಸಮಾರಿಯದಲ್ಲಿ ಎರಡು ವರ್ಷ ಆಳಿದನು.


ಅಹಜ್ಯನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ಅರಸುಗಳ ಇತಿಹಾಸ ಗ್ರಂಥದಲ್ಲಿ ಲಿಖಿತವಾಗಿವೆ.


ಸರ್ವೇಶ್ವರನ ಮಾತಿನಂತೆ ಅವರ ದಾಸ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮೃತನಾದನು.


ಸರ್ವೇಶ್ವರ ಎಲೀಯನ ಮುಖಾಂತರ ಹೇಳಿದಂತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಕುಡಿಕೆಯಲ್ಲಿದ್ದ ಎಣ್ಣೆ ಮುಗಿದು ಹೋಗಲಿಲ್ಲ.


ವೇಶ್ಯೆಯರು ಸ್ನಾನಮಾಡುವ ಸಮಾರಿಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ, ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು, ಹೀಗೆ ಸರ್ವೇಶ್ವರ ಹೇಳಿದ ಮಾತು ನೆರವೇರಿತು.


ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿ ಇದ್ದನು. ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬ ಆಕೆ ಇವನ ತಾಯಿ.


ಅವರು ಹಿಂದಿರುಗಿ, ಯೇಹುವಿನ ಹತ್ತಿರ ಬಂದು, ಆ ಸಂಗತಿಯನ್ನು ತಿಳಿಸಿದರು. ಅವನು ಅವರಿಗೆ, “’ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಜೆಸ್ರೀಲಿನ ಹೊಲದಲ್ಲಿ ತಿಂದುಬಿಡುವುವು;


ಸಮಾರಿಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ನೆರವೇರಿತು.


ಆಸನಿಗೆ ಅನಂತರ ಅವನ ಮಗ ಯೇಹೋಷಾಫಾಟನು ಅರಸನಾದನು. ಇಸ್ರಯೇಲರಿಂದ ಅಪಾಯವಾಗದಂತೆ ಇವನು ತನ್ನನ್ನೇ ಭದ್ರಪಡಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು