Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:18 - ಕನ್ನಡ ಸತ್ಯವೇದವು C.L. Bible (BSI)

18 ಅಹಜ್ಯನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ಅರಸುಗಳ ಇತಿಹಾಸ ಗ್ರಂಥದಲ್ಲಿ ಲಿಖಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಹಜ್ಯನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಹಜ್ಯನ ಉಳಿದ ಚರಿತ್ರೆಯೂ ಅವನ ಕೃತ್ಯಗಳೂ ಇಸ್ರಾಯೇಲ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಹಜ್ಯನು ಮಾಡಿದ ಇತರ ಕಾರ್ಯಗಳ ಬಗ್ಗೆ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:18
15 ತಿಳಿವುಗಳ ಹೋಲಿಕೆ  

ಅಹಾಬನ ಉಳಿದ ಚರಿತ್ರೆ, ಅವನು ಕಟ್ಟಿಸಿದ ದಂತಮಂದಿರ, ಪಟ್ಟಣಗಳು, ಇವುಗಳ ವಿವರ, ಹಾಗು ಅವನ ಬೇರೆ ಕಾರ್ಯಸಾಧನೆಗಳು ಇಸ್ರಯೇಲರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯಾರೊಬ್ಬಾಮನ ಇತರ ಕಾರ್ಯಕಲಾಪಗಳು, ಅವನ ಯುದ್ಧಗಳು ಹಾಗು ರಾಜ್ಯಭಾರಗಳ ವಿವರವು, ‘ಇಸ್ರಯೇಲ್ ರಾಜರ ಇತಿಹಾಸ’ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಸರ್ವೇಶ್ವರ ಎಲೀಯನ ಮುಖಾಂತರ ಮುಂತಿಳಿಸಿದಂತೆಯೇ ಅರಸನು ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ. ಅವನ ಸ್ಥಾನದಲ್ಲಿ ಅವನ ತಮ್ಮ ಯೋರಾಮನು, ಯೆಹೂದ್ಯರ ಅರಸ ಯೆಹೋಷಾಫಾಟನ ಮಗ ಯೆಹೋರಾಮನ ಅಳ್ವಿಕೆಯ ಎರಡನೆಯ ವರ್ಷದಲ್ಲಿ, ಅರಸನಾದನು.


ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.


ಯೇಹುವಿನ ಉಳಿದ ಚರಿತ್ರೆಯೂ ಅವನ ಶೂರಕೃತ್ಯಗಳ ವಿವರವೂ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯೆಹೋವಾಹಾಜನ ಉಳಿದ ಚರಿತ್ರೆ ಹಾಗು ಅವನ ಶೂರಕೃತ್ಯಗಳ ವಿವರ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಇವನ ಉಳಿದ ಚರಿತ್ರೆ, ಶೂರಕೃತ್ಯಗಳ ಹಾಗು ಇವನು ಯೆಹೂದ್ಯರ ಅರಸನಾದ ಅಮಚ್ಯನು ಎಂಬವನೊಡನೆ ನಡೆಸಿದ ಯುದ್ಧದ ವಿವರವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯೋವಾಷನ ಉಳಿದ ಚರಿತ್ರೆ, ಅವನ ಶೂರಕೃತ್ಯಗಳ ಮತ್ತು ಜುದೇಯದ ರಾಜನಾದ ಅಮಚ್ಯನೊಡನೆ ನಡೆಸಿದ ಯುದ್ಧದ ವಿವರ, ಇವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯಾರೊಬ್ಬಾಮನ ಉಳಿದ ಚರಿತ್ರೆ, ಅವನು ಯುದ್ಧದಲ್ಲಿ ನಡೆಸಿದ ಶೂರಕಾರ್ಯ ಮತ್ತು ಮೊದಲು ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಇವನಿಂದ ಇಸ್ರಯೇಲ್ ರಾಜ್ಯಕ್ಕೆ ವಶವಾದ ವಿವರ, ಇವೆಲ್ಲವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಜೆಕರ್ಯನ ಉಳಿದ ಚರಿತ್ರೆ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.


ಮೆನಹೇಮನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಪೆಕಹ್ಯನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಪೆಕಹನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳನ್ನು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಓದಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು