Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:3 - ಕನ್ನಡ ಸತ್ಯವೇದವು C.L. Bible (BSI)

3 ಆದರೆ ಸರ್ವೇಶ್ವರ ಸ್ವಾಮಿಯ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರಿಯದ ಅರಸನ ಆ ಸೇವಕರನ್ನು ಭೇಟಿಯಾಗು. ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ - ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ - ನೀವು ಎಕ್ರೋನಿನ ದೇವರಾದ ಬಾಳ್ವೆಬೂಬನನ್ನು ವಿಚಾರಿಸುವದಕ್ಕೆ ಹೋಗುವದೇನು? ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಯೆಹೋವನ ದೂತನೊಬ್ಬನು ತಿಷ್ಬೀಯನಾದ ಎಲೀಯನಿಗೆ, “ರಾಜನಾದ ಅಹಜ್ಯನು ಸಮಾರ್ಯದಿಂದ ಕೆಲವು ಸಂದೇಶಕರನ್ನು ಕಳುಹಿಸಿದ್ದಾನೆ. ನೀನು ಹೋಗಿ ಅವರನ್ನು ಭೇಟಿಯಾಗಿ ಅವರಿಗೆ, ‘ಇಸ್ರೇಲಿನಲ್ಲಿಯೂ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ ಪ್ರಶ್ನೆಗಳನ್ನು ಕೇಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಯೆಹೋವ ದೇವರ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ, ‘ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀವು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಹೋಗುತ್ತಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:3
21 ತಿಳಿವುಗಳ ಹೋಲಿಕೆ  

ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ನಿರರ್ಥಕ ವಿಗ್ರಹಗಳನಾರಾಧಿಪ ಜನರು ತೊರೆದಿಹರು ಹಾರ್ದಿಕ ಭಕ್ತಿಯನು


ಸುಪ್ರಸಿದ್ಧನು ದೇವನು ಜುದೇಯನಾಡಿನಲಿ I ಸುಪ್ರಖ್ಯಾತ ಆತನ ನಾಮ ಇಸ್ರಯೇಲಿನಲಿ II


ಅನಂತರ ದೇವದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣಾಭಿಮುಖವಾಗಿ ಹೋಗು. ಅದು ಜೆರುಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದನು.


ಇದಲ್ಲದೆ, ಜೆರುಸಲೇಮಿನಿಂದ ಬಂದಿದ್ದ ಧರ್ಮಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ; ದೆವ್ವಗಳ ಒಡೆಯನ ಶಕ್ತಿಯಿಂದಲೇ ಇವನು ದೆವ್ವಬಿಡಿಸುತ್ತಾನೆ,” ಎನ್ನುತ್ತಿದ್ದರು.


ಅನಂತರ ನಾಮಾನನು ತನ್ನ ಪರಿವಾರದವರೊಡನೆ ಹಿಂದಿರುಗಿ ದೈವಪುರುಷನ ಬಳಿಗೆ ಹೋಗಿ ಅವನ ಮುಂದೆ ನಿಂತನು. “ಇಸ್ರಯೇಲ್ ನಾಡಿನಲ್ಲಿರುವ ದೇವರ ಹೊರತು, ಲೋಕದಲ್ಲಿ ಬೇರೆ ದೇವರು ಇಲ್ಲವೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು; ತಾವು ದಯವಿಟ್ಟು ಈ ಕಾಣಿಕೆಯನ್ನು ಅಂಗೀಕರಿಸಬೇಕು,” ಎಂದು ಹೇಳಿದನು.


ಅವರು, “ಅವನು ಕಂಬಳಿಯನ್ನು ಹೊದ್ದುಕೊಂಡಿದ್ದ; ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು,” ಎಂದರು. ಆಗ ಅರಸನು, “ಆ ವ್ಯಕ್ತಿ ತಿಷ್ಬೀಯನಾದ ಎಲೀಯನೇ ಆಗಿರಬೇಕು,” ಎಂದುಕೊಂಡನು.


ಅದಕ್ಕೆ ಅವರು, “ಒಬ್ಬ ವ್ಯಕ್ತಿ ನಮ್ಮನ್ನು ಎದುರುಗೊಂಡು, “ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿರಿ. ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೀಗೆಂದು ಹೇಳಿರಿ: ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಹೇಳಿರಿ’ ಎಂದು ಆಜ್ಞಾಪಿಸಿದನು,” ಎಂದು ಉತ್ತರಕೊಟ್ಟರು.


ಅಹಜ್ಯನು ಸಮಾರಿಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ನೀವು ಎಕ್ರೋನಿನ ದೇವರಾದ ‘ಬಾಳ್ಜೆಬೂಬ’ನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ, ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು.


ಆಗ ತಿಷ್ಬೀಯನಾದ ಎಲೀಯನಿಗೆ ಸರ್ವೇಶ್ವರನ ವಾಣಿವುಂಟಾಯಿತು.


ಸರ್ವೇಶ್ವರನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ, “ಎದ್ದು ಊಟಮಾಡು; ನೀನು ನಿನ್ನ ಶಕ್ತಿಮೀರುವಷ್ಟು ಪ್ರಯಾಣ ಮಾಡಬೇಕಾಗಿದೆ,” ಎಂದನು.


ಬಳಿಕ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆಮಾಡಿದನು. ಕೂಡಲೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟಮಾಡು,” ಎಂದು ಹೇಳಿದನು.


ಸಂಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, “ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರೇ, ಸರ್ವೇಶ್ವರಾ, ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿನ್ನ ದಾಸನಾಗಿರುತ್ತೇನೆಂಬುದನ್ನು ಹಾಗು ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನು ಈ ದಿನ ತೋರಿಸಿಕೊಡಿ.


ಅನೇಕ ದಿವಸಗಳಾದನಂತರ ಎಲೀಯನಿಗೆ ಸರ್ವೇಶ್ವರನ ವಾಣಿ ಉಂಟಾಯಿತು. ಬರಗಾಲದ ಮೂರನೆಯವರ್ಷದಲ್ಲಿ ಸರ್ವೇಶ್ವರ ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು; ನಾನು ನಾಡಿಗೆ ಮಳೆಕೊಡುತ್ತೇನೆ,” ಎಂದರು.


ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದುಬರುವುದು.


ಇಸ್ರಯೇಲರ ಅರಸನು ಸಿಟ್ಟಿನಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೈವಪುರುಷ ಎಲೀಷನು ಕೇಳಿದನು. ದೂತರ ಮುಖಾಂತರ ಅವನಿಗೆ, “ನೀವು ನಿಮ್ಮ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸಿ; ಇಸ್ರಯಲರಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ಗೊತ್ತಾಗಲಿ,” ಎಂದು ಹೇಳಿ ಕಳುಹಿಸಿದನು.


ಇದಲ್ಲದೆ, ಅವರು ನಿನಗೆ, ‘ಸೊಲೊಮೋನನೂ ಅವನ ಮನೆಯವರೂ ನನ್ನನ್ನು ಬಿಟ್ಟು ಸಿದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ಕೆಮೋಷ್, ಅಮ್ಮೋನಿಯರ ದೇವತೆಯಾದ ಮಿಲ್ಕೋಮ್ ಇವುಗಳನ್ನು ಆರಾಧಿಸುತ್ತಿದ್ದಾರೆ. ಅವರ ತಂದೆ ದಾವೀದನು ನನ್ನ ನಿಯಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆಹೋದದ್ದೂ ಇದಕ್ಕೆ ಕಾರಣ.


‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು