2 ಅರಸುಗಳು 1:4 - ಕನ್ನಡ ಸತ್ಯವೇದವು C.L. Bible (BSI)4 ಈ ಕಾರಣ ಅಹಜ್ಯನು ತಾನು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು,” ಎಂದು ಆಜ್ಞಾಪಿಸಿದರು. ಎಲೀಯನು ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅಹಜ್ಯನು ತಾನು ಹತ್ತಿ ಮಲಗಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅಹಜ್ಯನು ತಾನು ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ರಾಜನಾದ ಅಹಜ್ಯನಿಗೆ ಈ ಸಂಗತಿಗಳನ್ನು ತಿಳಿಸಿ: ಬಾಳ್ಜೆಬೂಬನಿಂದ ಪ್ರಶ್ನೆಗಳನ್ನು ಕೇಳುವುದಕ್ಕೆ ನೀನು ಸಂದೇಶಕರನ್ನು ಕಳುಹಿಸಿದೆ. ನೀನು ಈ ಕಾರ್ಯವನ್ನು ಮಾಡಿದುದರಿಂದ, ಯೆಹೋವನು ಹೀಗೆನ್ನುವನು: ನೀನು ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ’ ಎಂದು ತಿಳಿಸು” ಎಂಬುದಾಗಿ ಹೇಳಿದನು. ಎಲೀಯನು ಅಹಜ್ಯನ ಸೇವಕರಿಗೆ ಈ ಮಾತುಗಳನ್ನು ಹೇಳಿ ಅಲ್ಲಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ, ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ ಎಂದು ಹೇಳು,” ಎಂದರು. ಆಗ ಎಲೀಯನು ಹೊರಟುಹೋಗಿ ಅದರಂತೆ ಹೇಳಿದನು. ಅಧ್ಯಾಯವನ್ನು ನೋಡಿ |
ಅದಕ್ಕೆ ಅವರು, “ಒಬ್ಬ ವ್ಯಕ್ತಿ ನಮ್ಮನ್ನು ಎದುರುಗೊಂಡು, “ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿರಿ. ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೀಗೆಂದು ಹೇಳಿರಿ: ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಹೇಳಿರಿ’ ಎಂದು ಆಜ್ಞಾಪಿಸಿದನು,” ಎಂದು ಉತ್ತರಕೊಟ್ಟರು.