Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:8 - ಕನ್ನಡ ಸತ್ಯವೇದವು C.L. Bible (BSI)

8 ಅವರು, “ಅವನು ಕಂಬಳಿಯನ್ನು ಹೊದ್ದುಕೊಂಡಿದ್ದ; ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು,” ಎಂದರು. ಆಗ ಅರಸನು, “ಆ ವ್ಯಕ್ತಿ ತಿಷ್ಬೀಯನಾದ ಎಲೀಯನೇ ಆಗಿರಬೇಕು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು, “ಅವನು ಕಂಬಳಿ ಹೊದ್ದುಕೊಂಡಿದ್ದನು. ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು” ಎಂದು ಉತ್ತರ ಕೊಟ್ಟರು. ಅದಕ್ಕೆ ಅರಸನು, “ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಕಂಬಳಿಯನ್ನು ಹೊದ್ದುಕೊಂಡಿದ್ದನು; ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು ಎಂದು ಉತ್ತರಕೊಟ್ಟರು. ಅದಕ್ಕೆ ಅರಸನು - ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸಂದೇಶಕರು ಅಹಜ್ಯನಿಗೆ, “ಅವನು ಉಣ್ಣೆಯ ಮೇಲಂಗಿಯನ್ನು ಧರಿಸಿದ್ದನು ಮತ್ತು ಸೊಂಟಕ್ಕೆ ಚರ್ಮದ ಪಟ್ಟಿಯನ್ನು ಕಟ್ಟಿಕೊಂಡಿದ್ದನು” ಎಂದರು. ಆಗ ಅಹಜ್ಯನು, “ಅವನು ತಿಷ್ಬೀಯನಾದ ಎಲೀಯನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದಕ್ಕವರು, “ಅವನು ಕಂಬಳಿಯನ್ನು ಹೊದ್ದುಕೊಂಡಿದ್ದನು; ಅವನ ಸೊಂಟಕ್ಕೆ ಸುತ್ತಲೂ ತೊಗಲಿನ ನಡುಕಟ್ಟು ಇತ್ತು,” ಎಂದರು. ಆಗ ಅರಸನು, “ಅವನು ತಿಷ್ಬೀಯನಾದ ಎಲೀಯನೇ ಆಗಿರಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:8
9 ತಿಳಿವುಗಳ ಹೋಲಿಕೆ  

ಒಂಟೆ ತುಪ್ಪಟದ ಹೊದಿಕೆ, ಸೊಂಟದಲ್ಲಿ ತೊಗಲಿನ ನಡುಕಟ್ಟು - ಇವೇ ಈತನ ಉಡುಗೆ. ಮಿಡತೆ ಮತ್ತು ಕಾಡುಜೇನು ಇವೇ ಈತನ ಆಹಾರ.


ಆ ದಿನದಲ್ಲಿ ಯಾವ ಪ್ರವಾದಿಯೂ ತನಗಾಗಿರಬಹುದಾದ ದರ್ಶನಗಳನ್ನು ಪ್ರಕಟಿಸಲು ಹೆಮ್ಮೆಪಡುವುದಿಲ್ಲ. ಪ್ರವಾದಿಯಂತೆ ನಟಿಸುವುದಿಲ್ಲ. ಪ್ರವಾದಿಯ ವೇಷವನ್ನು ಧರಿಸುವುದಿಲ್ಲ.


ಯೊವಾನ್ನನು ಒಂಟೆಯ ತುಪ್ಪಟದ ಹೊದಿಕೆಯನ್ನು ಹೊದ್ದು, ಸೊಂಟಕ್ಕೆ ತೊಗಲಿನ ನಡುಪಟ್ಟಿಯನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳೂ ಕಾಡುಜೇನೂ ಆತನ ಆಹಾರವಾಗಿತ್ತು.


ನಾನು ನನ್ನ ಇಬ್ಬರು ಸಾಕ್ಷಿಗಳನ್ನು ಕಳುಹಿಸುವೆನು. ಅವರು ಗೋಣಿತಟ್ಟನ್ನು ಉಟ್ಟುಕೊಂಡು ಒಂದು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದಿಸುವರು.”


ಎಲೀಯನಂತೆ ಶಕ್ತಿಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು. ತಂದೆ-ಮಕ್ಕಳನ್ನು ಪುನಃ ಒಂದಾಗಿಸುವನು. ಸತ್ಪುರುಷರ ಸನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು. ಹೀಗಾಗಿ ಪ್ರಭುವಿಗೆ ಯೋಗ್ಯಪ್ರಜೆಯನ್ನು ಸಿದ್ಧಗೊಳಿಸುವನು,” ಎಂದನು.


ಇಲ್ಲವಾದರೆ, ಏಕೆ ಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿದ್ದ ವ್ಯಕ್ತಿಯನ್ನು ನೋಡಲು ಹೋದಿರೇನು? ಅಂತಹ ಉಡುಗೆ ತೊಡುಗೆ ಧರಿಸುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.


ಅದಕ್ಕೆ ಮೂರು ವರ್ಷಗಳಿಗೆ ಮುಂಚೆಯೆ ಆಮೋಚನ ಮಗ ಯೆಶಾಯನಿಗೆ ಸರ್ವೇಶ್ವರ ಮುನ್ಸೂಚನೆಯಾಗಿ ಹೀಗೆಂದು ಹೇಳಿದ್ದರು : “ಎದ್ದೇಳು, ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು, ಕಾಲಿಗೆ ಹಾಕಿರುವ ಕೆರವನ್ನು ಕಳಚು.” ಅಂತೆಯೇ ಯೆಶಾಯನು ದಿಗಂಬರನಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.


ಅದಕ್ಕೆ ಅರಸನು, “ನಿಮ್ಮನ್ನು ಭೇಟಿಯಾಗಿ ಹೀಗೆಂದು ನುಡಿದ ಆ ವ್ಯಕ್ತಿ ಹೇಗಿದ್ದನು?” ಎಂದು ವಿಚಾರಿಸಿದನು.


ಸರ್ವೇಶ್ವರನ ಹಸ್ತ ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಜೆಸ್ರೀಲನ್ನು ಸೇರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು