2 ಅರಸುಗಳು 10:23 - ಕನ್ನಡ ಸತ್ಯವೇದವು C.L. Bible (BSI)23 ಅನಂತರ ಯೇಹುವು ರೇಕಾಬನ ಮಗ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯ ಭಕ್ತರಿಗೆ, “ಸರ್ವೇಶ್ವರನ ಭಕ್ತರು ನಿಮ್ಮ ಮಧ್ಯೆ ಬಂದಿರುತ್ತಾರೋ ವಿಚಾರಿಸಿ ನೋಡಿ; ಬಾಳನ ಭಕ್ತರು ಮಾತ್ರ ಇಲ್ಲಿರಬೇಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅನಂತರ ಯೇಹುವು ರೇಕಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯನ್ನು ಸೇವಿಸುವ ಭಕ್ತರಿಗೆ, “ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ? ವಿಚಾರಿಸಿ ನೋಡಿರಿ. ಬಾಳ್ ದೇವತೆಯ ಭಕ್ತರು ಮಾತ್ರ ಇಲ್ಲಿರಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅನಂತರ ಯೇಹುವು ರೇಕಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳನ ಭಕ್ತರಿಗೆ - ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ ವಿಚಾರಿಸಿ ನೋಡಿರಿ; ಬಾಳನ ಭಕ್ತರು ಮಾತ್ರ ಅಲ್ಲಿರಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆಗ ಯೇಹು ಮತ್ತು ರೇಕಾಬನ ಮಗನಾದ ಯೆಹೋನಾದಾಬನು ಬಾಳನ ಆಲಯದೊಳಕ್ಕೆ ಹೋದರು. ಯೇಹು ಬಾಳನ ಭಕ್ತರಿಗೆ, “ಯೆಹೋವನ ಸೇವಕರು ಯಾರೂ ನಿಮ್ಮೊಡನೆ ಇಲ್ಲವೆಂಬುದನ್ನು ಸುತ್ತಲೂ ನೋಡಿ ಖಚಿತಪಡಿಸಿಕೊಳ್ಳಿ. ಬಾಳನ ಭಕ್ತರಾದ ಜನರು ಮಾತ್ರ ಇಲ್ಲಿದ್ದಾರೆಂಬುದನ್ನು ಖಚಿತಪಡಿಸಿಕೊಳ್ಳಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಯೇಹುವೂ, ರೇಕಾಬನ ಮಗ ಯೆಹೋನಾದಾಬನೂ ಬಾಳನ ದೇವಸ್ಥಾನದಲ್ಲಿ ಪ್ರವೇಶಿಸಿದರು. ಯೇಹುವು, “ಬಾಳನನ್ನು ಸೇವಿಸುವವರ ಹೊರತು ಅವರ ಸಂಗಡ ಯೆಹೋವ ದೇವರ ಸೇವಕರಲ್ಲಿ ಒಬ್ಬನೂ ಇರದ ಹಾಗೆ ಪರಿಶೋಧಿಸಿ ನೋಡಿರಿ,” ಎಂದು ಬಾಳನನ್ನು ಸೇವಿಸುವವರಿಗೆ ಹೇಳಿದನು. ಅಧ್ಯಾಯವನ್ನು ನೋಡಿ |