Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:29 - ಕನ್ನಡ ಸತ್ಯವೇದವು C.L. Bible (BSI)

29 ಆದರೂ ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಕೈಬಿಡದೆ, ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಹೋರಿಕರುಗಳನ್ನು ಪೂಜಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದರೂ ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಬಸವಗಳನ್ನು ಪೂಜಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದರೂ ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ, ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಂದ ಯೇಹುವು ಸಂಪೂರ್ಣವಾಗಿ ವಿಮುಖನಾಗಲಿಲ್ಲ. ಬೇತೇಲ್ ಮತ್ತು ದಾನ್‌ಗಳಲ್ಲಿದ್ದ ಬಂಗಾರದ ಕರುಗಳನ್ನು ಯೇಹುವು ನಾಶಗೊಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದರೆ ಬೇತೇಲಿನಲ್ಲಿಯೂ, ದಾನಿನಲ್ಲಿಯೂ ಇರುವ ಬಂಗಾರದ ಕರುಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:29
25 ತಿಳಿವುಗಳ ಹೋಲಿಕೆ  

ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.


ಈಗ ಎಫ್ರಯಿಮರ ಪಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರು ಬೆಳ್ಳಿಬಂಗಾರವನ್ನು ಕರಗಿಸಿ ಇಷ್ಟಬಂದಂತೆ ಬೊಂಬೆಗಳನ್ನು ಮಾಡಿಕೊಂಡಿದ್ದಾರೆ. ಅವೆಲ್ಲವು ಶಿಲ್ಪಿಗಳ ಕೈಕೆಲಸವೇ ಹೊರತು ಮತ್ತೇನು ಅಲ್ಲ. ಇಂಥ ವಿಗ್ರಹಗಳನ್ನು ಪೂಜೆಗಾಗಿ ಪ್ರತಿಷ್ಠಾಪನೆಮಾಡುತ್ತಾರೆ. ಬುದ್ಧಿಜೀವಿಗಳಾದ ಇವರು ಬಸವನಿಗೆ ಮುದ್ದಿಡುತ್ತಾರೆ.


ಬೇತಾವೆನಿನ ಬಸವನಿಗೆ ಸಮಾರ್ಯದ ನಿವಾಸಿಗಳು ದಿಗಿಲುಗೊಳ್ಳುವರು; ಅದನ್ನು ಕಾಣದುದಕ್ಕಾಗಿ ಭಕ್ತಜನರು ಎದೆಬಡಿದುಕೊಳ್ಳುವರು. ಅದರ ಮಹಿಮೆ ನಂದಿಹೋಯಿತು ಎಂದು ಪೂಜಾರಿಗಳು ಗೋಳಾಡುವರು.


ಅವರು ಯಾರೊಬ್ಬಾಮನ ದುರ್ಮಾರ್ಗದಲ್ಲೇ ನಡೆಯುವುದನ್ನು ಬಿಡಲಿಲ್ಲವಾದುದರಿಂದ


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ಜೀವದಿಂದಿರುವವರೆಗೂ ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಕೈಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಮಕ್ಕಳೇ, ಹೀಗೆ ಮಾಡಬಾರದು. ನೀವು ಸರ್ವೇಶ್ವರನ ಜನರನ್ನು ದುರ್ಮಾರ್ಗಕ್ಕೆ ಎಳೆಯುತ್ತಿದ್ದೀರೆಂದು ಕೇಳಿದ್ದೇನೆ. ಇದು ಸರಿಯಲ್ಲ.


ಅಲ್ಲದೆ, ಆರೋನನನ್ನು ಉದ್ದೇಶಿಸಿ, “ನೀನು ಈ ಜನರಿಂದ ಮಹಾಪಾಪವನ್ನು ಮಾಡಿಸಿರುವೆ. ಹೀಗೆ ಮಾಡಿಸಲು ಇವರು ನಿನಗೇನು ಮಾಡಿದರು,” ಎಂದು ವಿಚಾರಿಸಿದನು. ಅದಕ್ಕೆ ಆರೋನನು,


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು, ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಿದನು. ಆಗ ಜನರು, “ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ” ಎಂದು ಹೇಳಿದರು.


ಅನಂತರ ಅವನು ಅಬ್ರಹಾಮನನ್ನು ಕರೆಸಿ, “ನೀನು ನನಗೆ ಮಾಡಿದ್ದೇನು? ಯಾವ ತಪ್ಪಿಗಾಗಿ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಈ ಮಹಾ ಪಾತಕಕ್ಕೆ ಒಳಪಡಿಸಿದೆ? ಮಾಡಬಾರದ ಕಾರ್ಯವನ್ನು ನೀನು ಮಾಡಿದೆ,” ಎಂದು ಹೇಳಿದನು.


ಹೀಗೆ ಯೇಹುವು ಇಸ್ರಯೇಲರಲ್ಲಿ ಬಾಳನ ಪೂಜೆಯನ್ನು ನಿಲ್ಲಿಸಿದನು.


ಆದರೆ ಅವನು ಇಸ್ರಯೇಲ್ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಪ್ರಯತ್ನಿಸಲಿಲ್ಲ; ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲಿಲ್ಲ.


ಅವಳು ಈಜಿಪ್ಟಿನಲ್ಲಿ ಇದ್ದಂದಿನಿಂದಲೂ ತನ್ನ ಸೂಳೆತನವನ್ನು ಬಿಡಲಿಲ್ಲ; ಬಾಲ್ಯದಲ್ಲಿಯೇ ಅಲ್ಲಿಯವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ನಸುಕಿ, ಅವಳ ಸಂಗಡ ಸೂಳೆಗಾರಿಕೆಯನ್ನು ಹೆಚ್ಚೆಚ್ಚಾಗಿ ಮಾಡಿದರು.


ಆದರೂ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು