Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:30 - ಕನ್ನಡ ಸತ್ಯವೇದವು C.L. Bible (BSI)

30 ಸರ್ವೇಶ್ವರ ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡೆಸಿ ನನ್ನ ಮೆಚ್ಚಿಕೆಯನ್ನು ಪಡೆದೆ; ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದೆ. ಆದುದರಿಂದ ನಿನ್ನ ಸಂತಾನದವರು ನಾಲ್ಕೆನೆಯ ತಲೆಯವರೆಗೂ ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೆಹೋವನು ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಹಿತಕರವಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿರುವೆ. ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದ್ದೀ. ಆದುದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೆಹೋವನು ಯೇಹುವಿಗೆ - ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿ; ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದಿ; ಆದದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೆಹೋವನು ಯೇಹುವಿಗೆ, “ನೀನು ಒಳ್ಳೆಯದನ್ನು ಮಾಡಿದೆ. ನಾನು ಒಳ್ಳೆಯದೆಂದು ಹೇಳಿದ್ದನ್ನೇ ನೀನು ಮಾಡಿದೆ. ನನ್ನ ಅಪೇಕ್ಷೆಯಂತೆ ನೀನು ಅಹಾಬನ ಕುಟುಂಬವನ್ನು ನಾಶಗೊಳಿಸಿದೆ. ಆದ್ದರಿಂದ ನಿನ್ನ ಸಂತತಿಯವರು ಇಸ್ರೇಲನ್ನು ನಾಲ್ಕು ತಲೆಮಾರುಗಳವರೆಗೆ ಆಳುತ್ತಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೆಹೋವ ದೇವರು ಯೇಹುವಿಗೆ, “ನೀನು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ನಡೆಸಿ ನನ್ನ ಮೆಚ್ಚಿಗೆಯನ್ನು ಪಡೆದೆ; ಅಹಾಬನ ಮನೆಯವರನ್ನು ಕುರಿತು ನನ್ನ ಹೃದಯದಲ್ಲಿದ್ದ ಎಲ್ಲದರ ಪ್ರಕಾರ ಮಾಡಿದ್ದರಿಂದ, ನಿನ್ನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:30
13 ತಿಳಿವುಗಳ ಹೋಲಿಕೆ  

ಅವನು ನಿಧನನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಸಮಾರಿಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೆಹೋವಾಹಾಜನು ಅರಸನಾದನು.


ಜುದೇಯದ ಅರಸನೂ ಅಹಜ್ಯನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದಲ್ಲಿ, ಯೇಹುವಿನ ಮಗ ಯೆಹೋವಾಹಾಜನು, ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹದಿನೇಳು ವರ್ಷ ಆಳಿದನು.


ಜುದೇಯದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ, ಇಸ್ರಯೇಲರ ಅರಸನಾದ ಯೋವಾಷನ ಮಗ ಯಾರೊಬ್ಬಾಮನು, ಅರಸನಾಗಿ ಸಮಾರಿಯದಲ್ಲಿ ನಾಲ್ವತ್ತೊಂದು ವರ್ಷ ಆಳಿದನು.


ಜುದೇಯದ ಅರಸನಾದ ಯೆಹೋವಾಷಾನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗ ಯೋವಾಷನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹದಿನಾರು ವರ್ಷ ಆಳಿದನು.


ಆಗ ಸರ್ವೇಶ್ವರ, ಹೊಶೇಯನಿಗೆ, “ಈ ಮಗುವಿಗೆ ಜೆಸ್ರೀಲ್ ಎಂದು ಹೆಸರಿಡು. ಏಕೆಂದರೆ, ಇಸ್ರಯೇಲ್‍ನಲ್ಲಿ ಹರಿಸಿದ ರಕ್ತಪಾತಕ್ಕೆ ಪ್ರತಿಯಾಗಿ ಸ್ವಲ್ಪಕಾಲದಲ್ಲೆ ಯೇಹುವಿನ ಮನೆತನವನ್ನು ದಂಡಿಸುವೆನು; ಇಸ್ರಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.


“ಅಹಾಬನು ನನ್ನ ಮುಂದೆ ತನ್ನನ್ನೇ ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ಹೀಗೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡಿಸುವುದಿಲ್ಲ. ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು,” ಎಂದು ಹೇಳಿದರು.


ನೀನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿ, ನನಗೆ ಕೋಪವನ್ನೆಬ್ಬಿಸಿದ್ದರಿಂದ ನೆಬಾಟನ ಮಗ ಯಾರೊಬ್ಬಾಮನ ಮನೆಗೂ ಅಹೀಯನ ಮಗ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು,’ ಎನ್ನುತ್ತಾರೆ.


ಆಗ ಆ ಪ್ರವಾದಿ ಅರಸನಿಗೆ, “ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ವ್ಯಕ್ತಿಯನ್ನು ನೀನು ಹೋಗಿಬಿಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.


ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ.


ಅವನು ನಿಧನನಾಗಿ ಇಸ್ರಯೇಲ್ ರಾಜರಾಗಿದ್ದ ತನ್ನ ಪಿತೃಗಳ ಬಳಿ ಸೇರಿದನು. ಅವನ ಸ್ಥಾನದಲ್ಲಿ ಅವನ ಮಗ ಜೆಕರ್ಯನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು