Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:9 - ಕನ್ನಡ ಸತ್ಯವೇದವು C.L. Bible (BSI)

9 ಮರುದಿನ ಬೆಳಿಗ್ಗೆ ಅವನು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು, “ನೀವು ನಿರಪರಾಧಿಗಳು; ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಕೊಂದವನು; ಆದರೆ ಇವರನ್ನೆಲ್ಲಾ ಹತಿಸಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮರುದಿನ ಬೆಳಿಗ್ಗೆ ಯೇಹುವು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ, “ನೀವು ನಿರಪರಾಧಿಗಳು, ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನನ್ನು ಕೊಂದವನು, ಆದರೆ ಇವರನ್ನೆಲ್ಲಾ ಹತಿಸಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮರುದಿನ ಬೆಳಿಗ್ಗೆ ಅವನು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ - ನೀವು ನಿರಪರಾಧಿಗಳು; ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಕೊಂದವನು; ಆದರೆ ಇವರನ್ನೆಲ್ಲಾ ಹತಿಸಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮುಂಜಾನೆ, ಯೇಹು ಹೊರಗೆ ಬಂದು ಜನರ ಮುಂದೆ ನಿಂತು ಅವರಿಗೆ, “ನೀವು ನಿರಪರಾಧಿಗಳು. ನಾನಾದರೋ ನನ್ನ ಒಡೆಯನ ಮೇಲೆ ಒಳಸಂಚು ಮಾಡಿದವನು. ನಾನು ಅವನನ್ನು ಕೊಂದೆನು. ಆದರೆ ಅಹಾಬನ ಮಕ್ಕಳನ್ನೆಲ್ಲ ಕೊಂದವರು ಯಾರು? ನೀವು ಅವರನ್ನು ಕೊಂದಿದ್ದೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮರುದಿನ ಬೆಳಿಗ್ಗೆ ಯೇಹು ಹೊರಗೆ ಬಂದು, ಸಕಲ ಜನರ ಮುಂದೆ ನಿಂತು, “ನೀವು ನಿರಪರಾಧಿಗಳು. ನಾನು ನನ್ನ ಯಜಮಾನನ ಮೇಲೆ ಒಳಸಂಚುಮಾಡಿ, ಅವನನ್ನು ಕೊಂದುಹಾಕಿದೆನು. ಆದರೆ ಇವರೆಲ್ಲರನ್ನು ಸಂಹರಿಸಿದವರ‍್ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:9
7 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ, ಹೊಶೇಯನಿಗೆ, “ಈ ಮಗುವಿಗೆ ಜೆಸ್ರೀಲ್ ಎಂದು ಹೆಸರಿಡು. ಏಕೆಂದರೆ, ಇಸ್ರಯೇಲ್‍ನಲ್ಲಿ ಹರಿಸಿದ ರಕ್ತಪಾತಕ್ಕೆ ಪ್ರತಿಯಾಗಿ ಸ್ವಲ್ಪಕಾಲದಲ್ಲೆ ಯೇಹುವಿನ ಮನೆತನವನ್ನು ದಂಡಿಸುವೆನು; ಇಸ್ರಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.


ಆದುದರಿಂದ ನನ್ನ ಪ್ರಿಯನು ಹೀಗೆಂದು ಕೇಳುತ್ತಾನೆ : “ಜೆರುಸಲೇಮಿನ ನಿವಾಸಿಗಳೇ, ಜುದೇಯದ ಜನರೇ, ನನಗೂ ನನ್ನ ತೋಟಕ್ಕೂ ಮಧ್ಯೆ ಇರುವ ವ್ಯಾಜ್ಯವನ್ನು ತೀರಿಸಿರಿ.


ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಆಗ ಯೇಹುವು ಇನ್ನೊಂದು ಪತ್ರದ ಮೂಲಕ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರವಾಗಿ ನಡೆದುಕೊಳ್ಳಲು ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ, ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಬನ್ನಿರಿ,” ಎಂದು ಆಜ್ಞಾಪಿಸಿದನು. ಎಪ್ಪತ್ತುಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.


ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ಸಮಾಚಾರ ಯೇಹುವಿಗೆ ಮುಟ್ಟಿದಾಗ ಅವನು; “ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಿಲಿನ ಹತ್ತಿರ ಎರಡು ರಾಶಿಗಳಾಗಿ ಹಾಕಬೇಕು,” ಎಂದು ಆಜ್ಞಾಪಿಸಿದನು.


ಅವರಲ್ಲಿ ಶಿಮೆಯಾತನ ಮಗ ಯೋಜಾಕಾರ್, ಶೋಮೇರನ ಮಗ ಯೆಹೋಜಾಬಾದ್ ಎಂಬವರು ಸಿಲ್ಲಾ ಊರಿಗೆ ಹೋಗುವ ಗುಟ್ಟಾದ ದಾರಿಯಲ್ಲಿರುವ ಮಿಲ್ಲೋಕೋಟೆಯಲ್ಲಿ ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಅಮಚ್ಯನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು