Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:16 - ಕನ್ನಡ ಸತ್ಯವೇದವು C.L. Bible (BSI)

16 ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ಅರಮನೆಗೆ ಒಯ್ದು ಅಲ್ಲಿ ಹತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ರಾಜನ ಅರಮನೆಗೆ ಕರೆದೊಯ್ದು ಅಲ್ಲಿ ಹತ್ಯೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಲಿನಿಂದ ಅರಮನೆಗೆ ಒಯ್ದು ಅಲ್ಲಿ ಹತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ಸೈನಿಕರು ಅವಳನ್ನು ಹಿಡಿದುಕೊಂಡು ಹೊರಗೆ ಕರೆದೊಯ್ದರು, ಆಕೆಯು ಕುದುರೆಗಳ ಪ್ರವೇಶದ್ವಾರದ ಮೂಲಕ ಅರಮನೆಗೆ ಹೋದಳು. ಸೈನಿಕರು ಅತಲ್ಯಳನ್ನು ಅಲ್ಲಿ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:16
10 ತಿಳಿವುಗಳ ಹೋಲಿಕೆ  

"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ಅವರು ಆಕೆಯನ್ನು ಹಿಡಿದು ಅರಮನೆಗೆ ಹೋಗುವ ಕುದುರೆಬಾಗಿಲಿನ ತನಕ ಒಯ್ದು, ಅಲ್ಲಿ ಕೊಂದರು.


ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.


ಕೊಲೆ ಮಾಡಿದವನಿಗೆ ಮರಣದಂಡನೆಯಾಗಬೇಕು.


ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ ಶತಾಧಿಪತಿಗಳಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಮಾಡಿ, ಹೊರಗೆ ಕರೆದುಕೊಂಡು ಹೋಗಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.


ಯಾಜಕರು ಕುದುರೆಬಾಗಿಲಿನ ಆಚೆ ದಿಣ್ಣೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಸರಿಮಾಡಿದರು.


ಹೆಣ ಹೂಣುವ, ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲ ಸರ್ವೇಶ್ವರನಿಗೆ ಪರಿಶುದ್ಧ ಸ್ಥಾನವಾಗುವುದು. ಈ ನಗರ ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು