Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:18 - ಕನ್ನಡ ಸತ್ಯವೇದವು C.L. Bible (BSI)

18 ಯೆಹೂದ್ಯರೆಲ್ಲರೂ ಬಾಳ್ ದೇವತೆಯ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಪೀಠಗಳ ಮುಂದೆಯೇ ಕೊಂದು, ಆ ದೇವಸ್ಥಾನವನ್ನೂ ಅದರಲ್ಲಿದ್ದ ಪೀಠ ಹಾಗು ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ದೇವಾಲಯಕ್ಕೆ ಕಾವಲಿಟ್ಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ವೇದಿಗಳ ಮುಂದೆಯೇ ಕೊಂದು ದೇವಸ್ಥಾನವನ್ನೂ ಅದರಲ್ಲಿದ್ದ ವೇದಿ ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಜನರೆಲ್ಲರೂ ಸುಳ್ಳುದೇವರಾದ ಬಾಳನ ಗುಡಿಗೆ ಹೋಗಿ ಬಾಳನ ವಿಗ್ರಹವನ್ನೂ ಮತ್ತು ಅವನ ಯಜ್ಞವೇದಿಕೆಯನ್ನೂ ಚೂರುಚೂರು ಮಾಡಿದರು. ಬಾಳನ ಯಾಜಕನಾದ ಮತ್ತಾನನನ್ನು ಜನರು ಯಜ್ಞವೇದಿಕೆಯ ಎದುರಿನಲ್ಲಿಯೇ ಕೊಂದುಹಾಕಿದರು. ಯಾಜಕನಾದ ಯೆಹೋಯಾದಾವನು ಯೆಹೋವನ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇಶದ ಜನರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಆಗ ಯಾಜಕನಾದ ಯೆಹೋಯಾದಾವನು ಯೆಹೋವ ದೇವರ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:18
24 ತಿಳಿವುಗಳ ಹೋಲಿಕೆ  

ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಕಲ್ಲುಕಂಬಗಳನ್ನು ಒಡೆಯಬೇಕು; ಅಶೇರ ಎಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾ ಪ್ರತಿಮೆಗಳನ್ನು ಪುಡಿಪುಡಿಮಾಡಿ ಆ ದೇವರುಗಳ ಹೆಸರೇ ಉಳಿಯದಂತೆ ಮಾಡಿಬಿಡಬೇಕು.


ಪೂಜಾಸ್ಥಳಗಳನ್ನು ಹಾಳುಮಾಡಿದನು. ಕಲ್ಲುಗಂಬಗಳನ್ನು ಒಡೆದುಹಾಕಿದನು. ಅಶೇರ ವಿಗ್ರಹಸ್ಥಂಭಗಳನ್ನು ಕೆಡವಿಬಿಟ್ಟನು. ಮೋಶೆ ಮಾಡಿಸಿದ ತಾಮ್ರಸರ್ಪವನ್ನು ಚೂರುಚೂರು ಮಾಡಿದನು. ಇಸ್ರಯೇಲರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ‘ನೆಹುಷ್ಟಾನ್’ ಎಂಬ ಹೆಸರಿತ್ತು.


ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಕೇರಿಯನ್ನು ಪ್ರವೇಶಿಸಿ ಅಲ್ಲಿನ ವಿಗ್ರಹಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಬಿಟ್ಟರು.


ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು,” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಕೊಲ್ಲಿಸಿದನು.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.


ವಿಗ್ರಹಗಳು ಸಂಪೂರ್ಣವಾಗಿ ಮಾಯವಾಗುವುವು.


ಆಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಒಡೆಸಿದನು, ಇಸ್ರಯೇಲ್ ನಾಡಿನಲ್ಲಿದ್ದ ಸೂರ್ಯಸ್ತಂಭಗಳನ್ನು ಪುಡಿಪುಡಿಮಾಡಿಸಿ ಜೆರುಸಲೇಮಿಗೆ ಹಿಂದಿರುಗಿದನು.


ಇದಲ್ಲದೆ, ಅವನು ಬಾಳ್‍ದೇವತೆಗಳ ಬಲಿಪೀಠಗಳನ್ನು ತನ್ನೆದುರಿನಲ್ಲೇ ಹಾಳುಮಾಡಿಸಿ, ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಸಿ, ಅಶೇರಸ್ತಂಭ, ಕೆತ್ತಿದ ಮತ್ತು ಎರಕದ ವಿಗ್ರಹ, ಇವುಗಳನ್ನು ಒಡಿಸಿ, ಪುಡಿಪುಡಿಮಾಡಿಸಿ, ಅವುಗಳಿಗೆ ಬಲಿಯರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.


ಅವರು ಜುದೇಯದ ಮೇಲೆ ಯುದ್ಧಕ್ಕೆ ಬಂದು, ನಾಡಿನೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲ ಸೊತ್ತನ್ನೂ ಅರಸನ ಮಡದಿ ಮಕ್ಕಳನ್ನೂ ಸೆರೆಗೆ ಒಯ್ದರು. ಅವನಿಗೆ ಕಿರಿಯಮಗ ಯೆಹೋವಾಹಾಜನ ಹೊರತು ಮಕ್ಕಳೇ ಉಳಿಯಲಿಲ್ಲ.


ಕಲ್ಲುಗಂಬಗಳನ್ನು ಒಡೆದುಹಾಕಿ, ಅಶೇರ ವಿಗ್ರಹಸ್ತಂಭಗಳನ್ನು ಕಡಿದುಬಿಟ್ಟು, ಅವುಗಳಿದ್ದ ಸ್ಥಳವನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.


ತಮ್ಮ ಗಂಡುಹೆಣ್ಣುಮಕ್ಕಳನ್ನು ಯಾರೂ ಮೋಲೆಕನಿಗಾಗಿ ಬಲಿಯಗ್ನಿಪರೀಕ್ಷೆಗೆ ಈಡುಮಾಡದಂತೆ ಬೆನ್ಹಿನ್ನೋಮ್ ಕಣಿವೆಯಲ್ಲಿದ್ದ ತೋಫೆತ್ ಎಂಬ ಸ್ಥಳವನ್ನು ಹೊಲೆಮಾಡಿದನು.


ಆ ಶಿಕ್ಷೆಯನ್ನು ನಡೆಸುವಾಗ ತಪ್ಪು ಕಂಡವನೇ ಮೊದಲು ಕಲ್ಲೆಸೆಯಬೇಕು; ತರುವಾಯ ಜನರೆಲ್ಲರೂ ಎಸೆಯಲಿ.


ಜನರು ಮಾಡಿಸಿಕೊಂಡಿದ್ದ ಆ ಹೋರಿಕರುವನ್ನು ತೆಗೆದು ಬೆಂಕಿಯಿಂದ ಸುಟ್ಟು, ಅರೆದು, ಪುಡಿಪುಡಿಮಾಡಿ, ನೀರಿನಲ್ಲಿ ಕಲಸಿ, ಇಸ್ರಯೇಲರಿಗೆ ಆ ನೀರನ್ನು ಕುಡಿಸಿದನು.


“ನೀವು ಸ್ವಾಧೀನಮಾಡಿಕೊಳ್ಳುವ ನಾಡಿನ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೂ ದಿಣ್ಣೆಗಳ ಮೇಲೂ ಹರಡಿಕೊಂಡ ಮರಗಳ ಕೆಳಗೂ ತಮ್ಮ ದೇವರುಗಳನ್ನು ಪೂಜಿಸುತ್ತಾರೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.


ಆಗ ಬಾಳ್ ದೇವತೆಯ ಭಕ್ತರಲ್ಲಿ ಒಬ್ಬನೂ ತಪ್ಪದೆ ಎಲ್ಲರೂ ಕೂಡಿಬಂದುದರಿಂದ ಬಾಳನ ದೇವಸ್ಥಾನ ಸಂಪೂರ್ಣವಾಗಿ ತುಂಬಿತು.


ಇದಲ್ಲದೆ ಬಾಳ್ ದೇವತೆಯ ವಿಗ್ರಹಸ್ತಂಭಗಳನ್ನೂ ದೇವಸ್ಥಾನವನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಕ್ಕಾಗಿ ಉಪಯೋಗಿಸುತ್ತಾರೆ.


ಯೋಷೀಯನು ಅವುಗಳನ್ನು ಕೆಡವಿಬಿಟ್ಟು, ಅವುಗಳ ಪೂಜಾರಿಗಳನ್ನು ಬಲಿಪೀಠಗಳ ಮೇಲೆ ವಧಿಸಿ ಮನುಷ್ಯರ ಎಲುಬುಗಳನ್ನು ಅವುಗಳ ಮೇಲೆ ಸುಡಿಸಿ ಜೆರುಸಲೇಮಿಗೆ ಹಿಂದಿರುಗಿ ಹೋದನು.


“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.


ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ ಅಂಥವನನ್ನು ಕಲ್ಲು ಎಸೆದು ಕೊಲ್ಲಬೇಕು.


ದಹನಬಲಿಯನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ ಸೇನಾಪತಿಗಳಿಗೂ, “ಒಳಗೆ ಹೋಗಿ ಅವರನ್ನೆಲ್ಲಾ ಸಂಹರಿಸಿರಿ; ಒಬ್ಬನೂ ತಪ್ಪಿಸಿಕೊಳ್ಳಕೂಡದು,” ಎಂದು ಹೇಳಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು