Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:19 - ಕನ್ನಡ ಸತ್ಯವೇದವು C.L. Bible (BSI)

19 ಬಳಿಕ ಶತಾಧಿಪತಿಗಳು, ‘ಕಾರಿ’ ಎನಿಸಿಕೊಳ್ಳುವ ಸೈನ್ಯ, ಕಾವಲುದಂಡು ಹಾಗು ಜನಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ, ಅರಮನೆಗೆ ಕರೆದುಕೊಂಡು ಹೋಗಿ, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಲ್ಲದೆ ಯೆಹೋಯಾದಾವನು ಶತಾಧಿಪತಿಗಳನ್ನು, ಕಾರಿಯರು ಎನ್ನಿಸಿಕೊಳ್ಳುವ ಸೈನ್ಯಗಳ ಕಾವಲುದಂಡನ್ನು, ಸಾಧಾರಣ ಜನರನ್ನು ಅವರೊಡನೆ ಅರಸನಾದ ಯೆಹೋವಾಷನನ್ನು ಯೆಹೋವನ ಆಲಯದಲ್ಲಿ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋಯಾದಾವನು ದೇವಾಲಯಕ್ಕೆ ಕಾವಲಿಟ್ಟು ಶತಾಧಿಪತಿಗಳು, ಕಾರಿ ಎನಿಸಿಕೊಳ್ಳುವ ಸೈನ್ಯ, ಕಾವಲುದಂಡು, ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಕಾವಲುದಂಡಿನವರ ಬಾಗಲಿನ ಮಾರ್ಗವಾಗಿ ಅರಮನೆಗೆ ಕರಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು. ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯಾಜಕನು ಜನರನ್ನೆಲ್ಲ ಕರೆದುಕೊಂಡು ಹೋದನು. ಅವರು ಸಿಪಾಯಿಗಳ ದ್ವಾರದ ಮೂಲಕ ಅರಮನೆಗೆ ಹೋದರು. ರಾಜನ ವಿಶೇಷ ಅಂಗರಕ್ಷಕರು ಮತ್ತು ಸೇನಾಧಿಪತಿಗಳು ರಾಜನ ಜೊತೆಯಲ್ಲಿ ಹೋದರು. ಅವರನ್ನು ಇತರ ಜನರೆಲ್ಲರೂ ಹಿಂಬಾಲಿಸಿದರು. ಅವರು ರಾಜನ ಅರಮನೆಯ ಬಾಗಿಲಿಗೆ ಹೋದರು. ನಂತರ ರಾಜನಾದ ಯೆಹೋವಾಷನು ಸಿಂಹಾಸನದ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ಶತಾಧಿಪತಿಗಳನ್ನೂ, “ಕಾರಿ” ಎಂಬ ಸಿಪಾಯಿಗಳ ಅಧಿಕಾರಿಗಳನ್ನೂ, ಕಾವಲುಗಾರರನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕಾವಲುಗಾರರ ಬಾಗಿಲ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಬಂದು, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:19
13 ತಿಳಿವುಗಳ ಹೋಲಿಕೆ  

“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಹೀಗಿದೆ ಸರ್ವೇಶ್ವರನ ನುಡಿ: “ಇವನು ಮಕ್ಕಳನ್ನು ಕಳೆದುಕೊಂಡ ವ್ಯಕ್ತಿ ತನ್ನ ಜನ್ಮವನ್ನು ಸಾರ್ಥಕ ಮಾಡಿಕೊಳ್ಳದ ವ್ಯಕ್ತಿ ಇವನ ಸಂತಾನದಲ್ಲಿ ಇನ್ನು ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು, ಜುದೇಯವನ್ನು ಆಳಿ ಬಾಳನು.”


ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡು ನಡೆದಿರಾದರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿ ತಮ್ಮ ಪರಿವಾರದೊಡನೆ ಹಾಗು ಪ್ರಜೆಗಳೊಡನೆ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.


ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ ಹಾಗು ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ನಗರದ ಬಾಗಿಲುಗಳನ್ನು ಪ್ರವೇಶಿಸುವರು. ಇವರು ಮಾತ್ರವಲ್ಲ, ಇವರ ಪ್ರಧಾನರು, ಜುದೇಯದ ಜನರು, ಜೆರುಸಲೇಮಿನ ನಿವಾಸಿಗಳು ಎಲ್ಲರೂ ಇಲ್ಲಿ ಸೇರುವರು. ಈ ನಗರದಲ್ಲಿ ಜನರು ಯಾವಾಗಲು ತುಂಬಿರುವರು.


ಯಾವ ವಿಧದಲ್ಲಾದರೂ ಅಶುದ್ಧನಾದವನು ಸರ್ವೇಶ್ವರನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.


ಇನ್ನೊಂದು ಭಾಗದವರು ಅರಮನೆಯನ್ನೂ ಮತ್ತೊಂದು ಭಾಗದವರು ಯೆಸೋದ್‍ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರು ಸರ್ವೇಶ್ವರನ ಆಲಯದ ಪ್ರಾಕಾರದಲ್ಲೇ ಇರಬೇಕು.


ಅಂದಿನಿಂದ ಸೊಲೊಮೋನನು ತನ್ನ ತಂದೆ ದಾವೀದನ ಸ್ಥಾನದಲ್ಲಿ ಅರಸನಾಗಿ, ಸರ್ವೇಶ್ವರನ ಸಿಂಹಾಸನದಲ್ಲಿ ಕುಳಿತುಕೊಂಡು, ವೃದ್ಧಿಯಾಗುತ್ತಾ ಬಂದನು. ಅರಸ ಸೊಲೊಮೋನನಿಗೆ ಇಸ್ರಯೇಲರೆಲ್ಲರೂ ವಿಧೇಯರಾಗಿ ನಡೆದರು.


ನೀನು ಅರಸ ದಾವೀದನ ಬಳಿಗೆ ಹೋಗಿ, ‘ನನ್ನ ಒಡೆಯರಾದ ಅರಸರು ತಮ್ಮ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು, ಅವನೇ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂದು ತಮ್ಮ ದಾಸಿಯಾದ ನನಗೆ ಪ್ರಮಾಣಮಾಡಿ ಹೇಳಿದಿರಲ್ಲವೇ? ಹೀಗಿದ್ದ ಮೇಲೆ ಅದೋನೀಯನು ಅರಸನಾದುದು ಹೇಗೆ?’ ಎಂದು ಕೇಳು.


ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು.


ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗು ಶ್ರೀಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.


ಅರಸ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು