Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:10 - ಕನ್ನಡ ಸತ್ಯವೇದವು C.L. Bible (BSI)

10 ಪೆಟ್ಟಿಗೆಯಲ್ಲಿ ತಕ್ಕಷ್ಟು ಹಣಕೂಡಿದೆಯೆಂದು ಕಂಡುಬಂದಾಗೆಲ್ಲಾ, ರಾಜಲೇಖಕನು ಹಾಗು ಮಹಾಯಾಜಕನು ಬಂದು ಅದನ್ನು ಚೀಲಗಳಲ್ಲಿ ಹಾಕಿ, ತೂಕಮಾಡಿ, ಸರ್ವೇಶ್ವರನ ಆಲಯದ ಹಣವು ಇಷ್ಟಿಷ್ಟು ಆಯಿತೆಂದು ಬರೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನ ಆಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗೆಲ್ಲಾ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪೆಟ್ಟಿಗೆಯಲ್ಲಿ ತಕ್ಕಷ್ಟು ಹಣಕೂಡಿದೆಯೆಂದು ಕಂಡು ಬಂದಾಗೆಲ್ಲಾ ರಾಜಲೇಖಕನೂ ಮಹಾಯಾಜಕನೂ ಬಂದು ಅದನ್ನು ಚೀಲಗಳಲ್ಲಿ ಹಾಕಿ ತೂಕಮಾಡಿ ಯೆಹೋವನ ಆಲಯದ ಹಣವು ಇಷ್ಟಿಷ್ಟು ಆಯಿತೆಂದು ಬರೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜನರು ದೇವಾಲಯಕ್ಕೆ ಹೋದಾಗ ಆ ಪೆಟ್ಟಿಗೆಯಲ್ಲಿ ಹಣವನ್ನು ಹಾಕಲಾರಂಭಿಸಿದರು. ರಾಜನ ಕಾರ್ಯದರ್ಶಿಯಾಗಲಿ ಪ್ರಧಾನಯಾಜಕನಾಗಲಿ ನೋಡಿದಾಗ ಸಾಕಷ್ಟು ಹಣವು ತುಂಬಿದ್ದರೆ ಅದನ್ನು ಲೆಕ್ಕಹಾಕಿ ಚೀಲಗಳಲ್ಲಿ ತುಂಬಿಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪೆಟ್ಟಿಗೆಯಲ್ಲಿ ಬಹಳ ಹಣ ಉಂಟೆಂದು ಅವರು ಕಂಡಾಗಲೆಲ್ಲಾ ಅರಸನ ಲೇಖಕನೂ, ಮಹಾಯಾಜಕನೂ ಬಂದು, ಯೆಹೋವ ದೇವರ ಆಲಯದಲ್ಲಿ ತಂದಿದ್ದ ಹಣವನ್ನು ಎಣಿಸಿ, ಚೀಲಗಳಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:10
11 ತಿಳಿವುಗಳ ಹೋಲಿಕೆ  

ಅಹೀಟೂಬನ ಮಗ ಚಾದೋಕನೂ ಹಾಗು ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಸರಾಯನು ಅವನಿಗೆ ಲೇಖಕ ಆಗಿದ್ದನು.


ದುಃಖಾವೇಶದಿಂದ ಬಟ್ಟೆಗಳನ್ನು ಹರಿದುಕೊಂಡು, ಯಾಜಕ ಹಿಲ್ಕೀಯನು ಶಾಫಾನನ ಮಗ ಅಹೀಕಾಮ್, ಮೀಕಾಯನ ಮಗ ಅಕ್ಬೋರ್, ಲೇಖಕ ಶಾಫಾನ್ ಹಾಗು ತನ್ನ ಹಸ್ತಕನಾದ ಅಸಾಯ ಎಂಬುವರಿಗೆ,


ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು, ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ,


ನಾಮಾನನು, “ಆರು ಸಾವಿರ ನಾಣ್ಯವನ್ನಾದರೂ ತೆಗೆದುಕೊಳ್ಳಬಾರದೇ,” ಎಂದು ಅವನನ್ನು ಒತ್ತಾಯಪಡಿಸಿ, ಅದನ್ನು ಎರಡು ಚೀಲಗಳಲ್ಲಿ ಹಾಕಿಸಿ, ಆ ಚೀಲಗಳನ್ನೂ ಎರಡು ದುಸ್ತು ಬಟ್ಟೆಗಳನ್ನೂ ಇಬ್ಬರು ಸೇವಕರ ಮೇಲೆ ಹೊರಿಸಿ, ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಇವನ ಮುಂದೆ ನಡೆದರು.


ಶೆವನು ಕಾರ್ಯದರ್ಶಿ, ಚಾದೋಕ್ ಹಾಗು ಎಬ್ಯಾತಾರರು ಯಾಜಕರು;


ಅದನ್ನು ಆಲಯದ ಕೆಲಸವನ್ನು ನಡಿಸುವ ಮೇಸ್ತ್ರಿಗಳಿಗೆ ಒಪ್ಪಿಸುತ್ತಿದ್ದರು; ಇವರು ಅದನ್ನು ಅಲ್ಲಿ ಕೆಲಸಮಾಡುವ ಬಡಗಿ, ಶಿಲ್ಪಿ, ಉಪ್ಪಾರ, ಕಲ್ಲುಕುಟಿಕ ಅವರ ಸಂಬಳಕ್ಕಾಗಿಯೂ


ಪೆಟ್ಟಿಗೆ ತುಂಬಾ ಹಣವಿರುತ್ತದೆಂದು ಕಂಡುಬಂದಾಗಲೆಲ್ಲಾ ಲೇವಿಯರು ಪೆಟ್ಟಿಗೆಯನ್ನು ಆಸ್ಥಾನದ ಅಧಿಕಾರಿಗಳ ಬಳಿಗೆ ತರುತ್ತಿದ್ದರು. ಆಗ ಅರಸನ ಕಾರ್ಯದರ್ಶಿಯೂ ಮಹಾಯಾಜಕನ ಪ್ರತಿನಿಧಿಯೂ ಬಂದು ಅದನ್ನು ತೆರವು ಮಾಡಿ ಮತ್ತೆ ಅದರ ಸ್ಥಳದಲ್ಲಿಡುತ್ತಿದ್ದರು. ಅವರು ಪ್ರತಿದಿನವೂ ಈ ಪ್ರಕಾರ ಮಾಡುತ್ತಿದ್ದುದರಿಂದ ಬಹಳ ಹಣವನ್ನು ಸಂಗ್ರಹಿಸಲಾಯಿತು.


ತರುವಾಯ ಅವನು ಪ್ರಧಾನ ಯಾಜಕ ಹಿಲ್ಕೀಯನ, ಮುಖ್ಯ ಯಾಜಕರ ಹಾಗು ದ್ವಾರಪಾಲಕರ ಮುಖಾಂತರ ಬಾಳ್, ಅಶೇರ ಎಂಬ ದೇವತೆಗಳಿಗಾಗಿ ಹಾಗು ಆಕಾಶಸೈನ್ಯಗಳಿಗಾಗಿ ಉಪಯೋಗಿಸುತ್ತಿದ್ದ ಎಲ್ಲಾ ವಸ್ತುಗಳನ್ನು ಸರ್ವೇಶ್ವರನ ಆಲಯದಿಂದ ತರಿಸಿ, ಜೆರುಸಲೇಮಿನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ, ಆ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


ಕೋರೇಯನ ಮಗನೂ ಎಬ್ಯಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನು ಹಾಗೂ ಕೋರಹನ ಗೋತ್ರದ ಸದಸ್ಯರು, ದೇವದರ್ಶನದ ಗುಡಾರದ ದ್ವಾರವನ್ನು ಕಾಯುವ ಜವಬ್ದಾರಿ ವಹಿಸಿಕೊಂಡು ಇದ್ದರು.ಅವರ ಪೂರ್ವಜರು ಸಹ ಸರ್ವೇಶ್ವರನ ಗುಡಾರವನ್ನು ಕಾಯುವವರಾಗಿದ್ದರು.


ಆದರೆ ಪರ್ಷಿಯ ರಾಜನಾದ ಸೈರಸನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಜನರು ಕಲ್ಲುಕುಟಿಗನಿಗೆ ಹಾಗು ಬಡಗಿಗೆ ಹಣವನ್ನು ಕೊಟ್ಟಿದ್ದರು. ಅಂತೆಯೇ ಲೆಬನೋನಿನಿಂದ ಸಮುದ್ರ ಮಾರ್ಗವಾಗಿ, ಜೊಪ್ಪಕ್ಕೆ ದೇವದಾರು ಮರಗಳನ್ನು ತರತಕ್ಕ ಸಿದೋನ್ಯರಿಗೆ ಹಾಗು ಟೈರಿನವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು