Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:3 - ಕನ್ನಡ ಸತ್ಯವೇದವು C.L. Bible (BSI)

3 ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದುದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಅವನು ಉನ್ನತ ಪೂಜಾಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಇನ್ನೂ ಆ ಸ್ಥಳಗಳಲ್ಲಿ ಯಜ್ಞಗಳನ್ನು ಅರ್ಪಿಸುತ್ತಾರೆ ಮತ್ತು ಧೂಪಗಳನ್ನು ಸುಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:3
13 ತಿಳಿವುಗಳ ಹೋಲಿಕೆ  

ಇವನ ಕಾಲದಲ್ಲೂ ಪೂಜಾಸ್ಥಳಗಳು ಹಾಗೆಯೇ ಇದ್ದವು. ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.


ಪೂಜಾಸ್ಥಳಗಳನ್ನು ಹಾಳುಮಾಡಿದನು. ಕಲ್ಲುಗಂಬಗಳನ್ನು ಒಡೆದುಹಾಕಿದನು. ಅಶೇರ ವಿಗ್ರಹಸ್ಥಂಭಗಳನ್ನು ಕೆಡವಿಬಿಟ್ಟನು. ಮೋಶೆ ಮಾಡಿಸಿದ ತಾಮ್ರಸರ್ಪವನ್ನು ಚೂರುಚೂರು ಮಾಡಿದನು. ಇಸ್ರಯೇಲರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ‘ನೆಹುಷ್ಟಾನ್’ ಎಂಬ ಹೆಸರಿತ್ತು.


ಆದರೆ ಇವನ ಕಾಲದಲ್ಲೂ ಪೂಜಾಸ್ಥಳಗಳು ಇನ್ನು ಹಾಗೆಯೇ ಇದ್ದವು. ಆದುದರಿಂದ ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಸಮರ್ಪಿಸುತ್ತಿದ್ದರು. ಸರ್ವೇಶ್ವರನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.


ತನ್ನ ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ, ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು. ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಬಲಿಕೊಡುತ್ತಾ, ಧೂಪಾರತಿ ಎತ್ತುತ್ತಾ ಇದ್ದರು.


ಇವನು ನಾಡಿನಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಸರ್ವೇಶ್ವರನಿಗೆ ಪ್ರಾಮಾಣಿಕನಾಗಿ ನಡೆದುಕೊಂಡನು.


“ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ.


ಯಾಜಕರು ಮತ್ತು ಲೇವಿಯರು ಸರ್ವೇಶ್ವರನ ಧರ್ಮದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು, ಜೆರುಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.


ಯಾಜಕನಾದ ಯೆಹೋಯಾದವನು ಅವನಿಗೆ ಬೋಧಕನಾಗಿದ್ದನು. ಆಗ ಅವನು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.


ಆದರೆ ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ಹಾಗೆಯೇ ಉಳಿದಿದ್ದವು. ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.


ಇವನು ತನ್ನ ಪೂರ್ವಜ ದಾವೀದನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.


ಇವನು ತನ್ನ ತಂದೆಯಾದ ಅಮಚ್ಯನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.


ಇವನು ಎಲ್ಲಾ ವಿಷಯಗಳಲ್ಲೂ ತನ್ನ ಪೂರ್ವಜ ದಾವೀದನಂತೆ ಸರ್ವೇಶ್ವರನ ಚಿತ್ತಾನುಸಾರ ನಡೆದನು.


ಅವನು ಎಡಕ್ಕಾಗಲಿ ಬಲಕ್ಕಾಗಲಿ ವಾಲದೆ ತನ್ನ ಪೂರ್ವಜ ದಾವೀದನ ಮಾರ್ಗದಲ್ಲಿ ನೇರವಾಗಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು