Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:7 - ಕನ್ನಡ ಸತ್ಯವೇದವು C.L. Bible (BSI)

7 ಆದುದರಿಂದ ಅವನು ಯೆಹೋಯಾದಾವ ಮೊದಲಾದ ಯಾಜಕರನ್ನು ಕರೆದು, “ನೀವು ಈವರೆಗೂ ದೇವಾಲಯವನ್ನೇಕೆ ದುರಸ್ತು ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರು ತಂದುಕೊಡುವ ಹಣವನ್ನು ನಿಮ್ಮ ಕೈಯಲ್ಲಿಟ್ಟುಕೊಳ್ಳದೆ. ಕೂಡಲೆ ಅದನ್ನು ದೇವಾಲಯದ ದುರಸ್ತಿಗಾಗಿ ಕೊಡಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದುದರಿಂದ ಅರಸನಾದ ಯೆಹೋವಾಷನು ಯೆಹೋಯಾದಾವ, ಮೊದಲಾದ ಯಾಜಕರನ್ನು ಕರೆದು ಅವರಿಗೆ, “ನೀವು ಈ ವರೆಗೂ ದೇವಾಲಯವನ್ನೇಕೆ ದುರಸ್ತಿ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರಿಂದ ಹಣವನ್ನು ವಸೂಲಿಮಾಡಿಕೊಳ್ಳದೆ ನಿಮ್ಮಲಿರುವ ಹಣದಿಂದ ದೇವಾಲಯದ ದುರಸ್ತಿಗಾಗಿ ಕಾರ್ಯವನ್ನು ಮಾಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದದರಿಂದ ಅವನು ಯೆಹೋಯಾದಾವ ಮೊದಲಾದ ಯಾಜಕರನ್ನು ಕರೆದು ಅವರಿಗೆ - ನೀವು ಈ ವರೆಗೂ ದೇವಾಲಯವನ್ನೇಕೆ ಜೀರ್ಣೋದ್ಧಾರ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರು ತಂದು ಕೊಡುವ ಹಣವನ್ನು ನಿಮ್ಮ ಕೈಯಲ್ಲಿಟ್ಟುಕೊಳ್ಳದೆ ಕೂಡಲೆ ಅದನ್ನು ದೇವಾಲಯದ ಜೀರ್ಣೋದ್ಧಾರಕ್ಕಾಗಿ ಕೊಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ರಾಜನಾದ ಯೆಹೋವಾಷನು ಯಾಜಕನಾದ ಯೆಹೋಯಾದಾವ ಮತ್ತು ಇತರ ಯಾಜಕರನ್ನು ಕರೆಸಿ, “ನೀವು ಆಲಯವನ್ನು ಸರಿಪಡಿಸಲಿಲ್ಲವೇಕೆ? ನಿಮ್ಮಿಂದ ಸೇವೆ ಹೊಂದುವ ಜನರು ಕೊಡುವ ಹಣವನ್ನು ಉಪಯೋಗಿಸಬೇಡಿ. ಆಲಯವನ್ನು ಸರಿಪಡಿಸುವುದಕ್ಕಾಗಿ ಆ ಹಣವನ್ನು ಉಪಯೋಗಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಅರಸನಾದ ಯೋವಾಷನು ಯಾಜಕನಾದ ಯೆಹೋಯಾದಾವನನ್ನು, ಇತರ ಯಾಜಕರನ್ನು ಕರೆದು ಅವರಿಗೆ, “ನೀವು ದೇವಾಲಯದ ಒಡಕುಗಳನ್ನು ಏಕೆ ದುರಸ್ತಿ ಮಾಡಿಸುತ್ತಿಲ್ಲ? ಇನ್ನು ಮೇಲೆ ನೀವು ನಿಮಗೆ ಪರಿಚಯವಿರುವ ಖಜಾಂಚಿಯವರಿಂದ ಹಣವನ್ನು ತೆಗೆದುಕೊಳ್ಳದೆ ದೇವಾಲಯದ ಒಡಕುಗಳನ್ನು ದುರಸ್ತಿ ಮಾಡಿಸಲು ಅದನ್ನು ಒಪ್ಪಿಸಿಕೊಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:7
9 ತಿಳಿವುಗಳ ಹೋಲಿಕೆ  

ಅವನು ಇಸ್ರಯೇಲರ ವಿಷಯದಲ್ಲೂ ದೇವರ ಮತ್ತು ದೇವಾಲಯದ ವಿಷಯದಲ್ಲೂ ಹಲವಾರು ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದ ನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.


ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗ ಅಜರ್ಯ, ಯೆಹೋಹಾನಾನನ ಮಗ ಇಷ್ಮಾಯೇಲ್, ಓಬೇದನ ಮಗ ಅಜರ್ಯ, ಅದಾಯನ ಮಗ ಮಾಸೇಯ, ಜಿಕ್ರಿಯ ಮಗ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಂದು ಒಪ್ಪಂದ ಮಾಡಿಕೊಂಡನು.


ಆಗ ಯೋವಾಬನು, “ನನ್ನ ಒಡೆಯರಾದ ಅರಸರೇ, ಸರ್ವೇಶ್ವರ ತಮ್ಮ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ; ಅವರೆಲ್ಲರೂ ನನ್ನ ಒಡೆಯರ ಸೇವಕರಷ್ಟೇ. ಆದರೆ ಒಡೆಯರು ಇಂಥದನ್ನು ಅಪೇಕ್ಷಿಸಿದ್ದೇಕೆ? ಇಸ್ರಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ?” ಎಂದನು.


ಯಾಜಕನಾದ ಯೆಹೋಯಾದವನು ಅವನಿಗೆ ಬೋಧಕನಾಗಿದ್ದನು. ಆಗ ಅವನು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.


ಏಳನೆಯ ವರ್ಷದಲ್ಲಿ ಯೆಹೋಯಾದಾವನು ‘ಕಾರಿ’ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಸರ್ವೇಶ್ವರನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಪ್ಪಂದವನ್ನು ಮಾಡಿಕೊಂಡನಂತರ ರಾಜಕುಮಾರನನ್ನು ತೋರಿಸಿದನು.


ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದವರೆಗೂ ದೇವಾಲಯದ ದುರಸ್ತುಕಾರ್ಯವನ್ನು ಕೈಗೊಂಡಿರಲಿಲ್ಲ.


ಆಗ ಯಾಜಕರು, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ, ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ,” ಎಂಬುದಾಗಿ ಮಾತುಕೊಟ್ಟರು.


ಸೇನಾಧೀಶ್ವರರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಮಹಾದೇವಾಲಯವನ್ನು ಪುನಃ ಕಟ್ಟುವುದಕ್ಕೆ ಸಮಯ ಇನ್ನೂ ಬಂದಿಲ್ಲ ಎಂದುಕೊಳ್ಳುತ್ತಾರೆ ಈ ಜನರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು