2 ಅರಸುಗಳು 13:17 - ಕನ್ನಡ ಸತ್ಯವೇದವು C.L. Bible (BSI)17 “ಪೂರ್ವದಿಕ್ಕಿಗಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಅನಂತರ, “ಬಾಣವನ್ನೆಸೆ,” ಎಂದು ಆಜ್ಞಾಪಿಸಿದನು. ಅವನು ಎಸೆಯಲು, “ಇದು ಜಯಪ್ರದವಾದ ಸರ್ವೇಶ್ವರನ ಬಾಣ; ಸಿರಿಯಾದವರನ್ನು ಜಯಿಸುವ ಬಾಣ. ಆ ಸಿರಿಯಾದವರನ್ನು ನೀನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಎಲೀಷನು, “ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ” ಎಂದನು. ಅವನು ತೆರೆದನು. ಅನಂತರ ಎಲೀಷನು, “ಬಾಣವನ್ನು ಎಸೆ” ಎಂದು ಆಜ್ಞಾಪಿಸಿದನು. ಅವನು ಎಸೆಯಲು ಎಲೀಷನು, “ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ಯರನ್ನು ಜಯಿಸುವ ಬಾಣ. ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ ಎಂದನು. ಅವನು ತೆರೆದನು. ಅನಂತರ - ಬಾಣವನ್ನೆಸೆ ಎಂದು ಆಜ್ಞಾಪಿಸಿದನು. ಅವನು ಎಸೆಯಲು - ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ಯರನ್ನು ಜಯಿಸುವ ಬಾಣ. ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಎಲೀಷನು, “ಪೂರ್ವದಿಕ್ಕಿನ ಕಿಟಕಿಯನ್ನು ತೆಗೆ” ಎಂದು ಹೇಳಿದನು. ಯೋವಾಷನು ಕಿಟಕಿಯನ್ನು ತೆರೆದನು. ಆಗ ಎಲೀಷನು, “ಹೊಡಿ” ಎಂದನು. ಯೋವಾಷನು ಹೊಡೆದನು. ಆಗ ಎಲೀಷನು, “ಅದು ಯೆಹೋವನ ವಿಜಯದ ಬಾಣ! ಅರಾಮ್ಯರ ಮೇಲಿನ ವಿಜಯದ ಬಾಣ! ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸುವೆ. ನೀನು ಅವರನ್ನು ನಾಶಗೊಳಿಸುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಪೂರ್ವದಲ್ಲಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಎಲೀಷನು, “ಎಸೆ,” ಅನ್ನಲು, ಅವನು ಎಸೆದನು. “ಯೆಹೋವ ದೇವರ ವಿಜಯದ ಬಾಣವೇ, ಅರಾಮಿನಿಂದ ತಪ್ಪಿಸುವ ವಿಜಯದ ಬಾಣವೇ, ಅಫೇಕಿನಲ್ಲಿ ಅರಾಮ್ಯರನ್ನು ನಾಶಮಾಡುವವರೆಗೂ ನೀನು ಅವರನ್ನು ಹೊಡೆಯುವೆ,” ಎಂದು ಎಲೀಷನು ಹೇಳಿದನು. ಅಧ್ಯಾಯವನ್ನು ನೋಡಿ |