2 ಅರಸುಗಳು 13:19 - ಕನ್ನಡ ಸತ್ಯವೇದವು C.L. Bible (BSI)19 ಆಗ ದೈವಪುರುಷನು ಅವನ ಮೇಲೆ ಸಿಟ್ಟುಗೊಂಡು, “ನೀನು ಐದಾರು ಸಾರಿ ಬಾಣಬಿಡಬೇಕಾಗಿತ್ತು. ಹಾಗೆ ಮಾಡಿದ್ದರೆ ಸಿರಿಯಾದವರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯ ದೊರಕುತ್ತಿತ್ತು. ನೀನು ಮೂರು ಸಾರಿ ಮಾತ್ರ ಬಾಣಬಿಟ್ಟದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು - ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ದೇವಮನುಷ್ಯನು (ಎಲೀಷನು) ಯೋವಾಷನ ಮೇಲೆ ಕೋಪಗೊಂಡು, “ನೀನು ಐದು ಅಥವಾ ಆರು ಸಲ ಹೊಡೆಯಬೇಕಾಗಿತ್ತು! ಆಗ ನೀನು ಅರಾಮ್ಯರನ್ನು ನಾಶಗೊಳಿಸುವವರೆಗೆ ಸೋಲಿಸಿ ಬಿಡಬಹುದಾಗಿತ್ತು! ಆದರೆ ಈಗ ನೀನು ಅರಾಮ್ಯರನ್ನು ಮೂರು ಸಲ ಮಾತ್ರ ಸೋಲಿಸುವೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೆ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಆಗ ಅರಾಮ್ಯರನ್ನು ನಾಶಮಾಡುವವರೆಗೂ ಹೊಡೆಯುತ್ತಿದ್ದೆ. ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಮಾತ್ರ ಹೊಡೆಯುವೆ,” ಎಂದನು. ಅಧ್ಯಾಯವನ್ನು ನೋಡಿ |