2 ಅರಸುಗಳು 13:20 - ಕನ್ನಡ ಸತ್ಯವೇದವು C.L. Bible (BSI)20 ಎಲೀಷನು ಮೃತನಾದನು. ಅವನ ಶವವನ್ನು ಸಮಾಧಿಮಾಡಿದರು. ಮೋವಾಬ್ಯರು ಪ್ರತಿವರ್ಷದ ಪ್ರಾರಂಭದಲ್ಲಿ ಸುಲಿಗೆಮಾಡುವುದಕ್ಕಾಗಿ ಗುಂಪುಗುಂಪಾಗಿ ಬರುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಎಲೀಷನು ಮರಣ ಹೊಂದಲು, ಅವನ ಶವವನ್ನು ಅವರು ಸಮಾಧಿಮಾಡಿದರು. ಮೋವಾಬ್ಯರು ಪ್ರತಿ ವರ್ಷದ ಪ್ರಾರಂಭದಲ್ಲಿ ಸುಲಿಗೆ ಮಾಡುವುದಕ್ಕೋಸ್ಕರ ಗುಂಪು ಗುಂಪಾಗಿ ಬರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಎಲೀಷನು ಮೃತಿಹೊಂದಲು ಅವನ ಶವವನ್ನು ಸಮಾಧಿಮಾಡಿದರು. ಮೋವಾಬ್ಯರು ಪ್ರತಿವರುಷದ ಪ್ರಾರಂಭದಲ್ಲಿ ಸುಲಿಗೆ ಮಾಡುವದಕ್ಕೋಸ್ಕರ ಗುಂಪು ಗುಂಪಾಗಿ ಬರುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಎಲೀಷನು ತೀರಿಕೊಂಡಾಗ ಜನರು ಅವನನ್ನು ಸಮಾಧಿಮಾಡಿದರು. ವಸಂತಮಾಸದ ಒಂದು ದಿನ, ಮೋವಾಬ್ಯ ಸೈನಿಕರ ಒಂದು ಗುಂಪು ಇಸ್ರೇಲಿಗೆ ಸುಲಿಗೆ ಮಾಡಲು ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅನಂತರ ಎಲೀಷನು ಮೃತನಾದನು. ಅವನ ಶವವನ್ನು ಸಮಾಧಿಮಾಡಿದರು. ವರ್ಷದ ಆರಂಭದಲ್ಲಿ ಮೋವಾಬ್ಯರ ದಂಡುಗಳು ದೇಶದಲ್ಲಿ ಪ್ರವೇಶಿಸಿದವು. ಅಧ್ಯಾಯವನ್ನು ನೋಡಿ |
ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರ, “ಮೋವಾಬ್ಯರ ಅರಸನು ನನಗೆ ವಿರುದ್ಧ ದಂಗೆ ಎದ್ದಿದ್ದಾನೆ; ಮೋವಾಬರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ; ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.