2 ಅರಸುಗಳು 13:21 - ಕನ್ನಡ ಸತ್ಯವೇದವು C.L. Bible (BSI)21 ಒಂದು ದಿನ, ಜನರು ಒಬ್ಬ ಸತ್ತವನನ್ನು ಸಮಾಧಿ ಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು, ಶವವನ್ನು ಎಲೀಷನ ಸಮಾಧಿಯಲ್ಲೆ ಬಿಸಾಡಿ ಓಡಿಹೋದರು. ಸತ್ತ ವ್ಯಕ್ತಿಯ ಶವ ಎಲೀಷನ ಎಲುಬುಗಳಿಗೆ ತಗುಲಿದ ಕೂಡಲೆ, ಆ ವ್ಯಕ್ತಿ ಉಜ್ಜೀವಿಸಿ ಎದ್ದುನಿಂತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಒಂದು ದಿನ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಸತ್ತ ಮನುಷ್ಯನ ದೇಹವು ಎಲೀಷನ ಎಲುಬುಗಳಿಗೆ ತಗಲಿದ ಕೂಡಲೆ ಅವನು ಜೀವ ಬಂದು ಎದ್ದು ನಿಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಒಂದು ದಿವಸ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವದಕ್ಕೆ ಹೋದಾಗ ಮೋವಾಬ್ಯರ ಗುಂಪು ಬರುತ್ತಿರುವದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿ ಹೋದರು. ಸತ್ತ ಮನುಷ್ಯನು ಎಲೀಷನ ಎಲುಬುಗಳಿಗೆ ತಗುಲಿದ ಕೂಡಲೆ ಉಜ್ಜೀವಿಸಿ ಎದ್ದು ನಿಂತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಇಸ್ರೇಲರಲ್ಲಿ ಕೆಲವರು ಸತ್ತವನೊಬ್ಬನನ್ನು ಸಮಾಧಿ ಮಾಡುತ್ತಿರುವಾಗ ಸೈನಿಕರ ಆ ಗುಂಪನ್ನು ನೋಡಿ ಸತ್ತವನನ್ನು ಎಲೀಷನ ಸಮಾಧಿಯಲ್ಲಿ ಎಸೆದು ಓಡಿಹೋದರು. ಎಲೀಷನ ಮೂಳೆಗಳನ್ನು ಸತ್ತವನು ಸ್ಪರ್ಶಿಸಿದ ತಕ್ಷಣ, ಸತ್ತ ಮನುಷ್ಯನಿಗೆ ಜೀವ ಬಂದು, ಅವನು ತನ್ನ ಕಾಲುಗಳ ಮೇಲೆ ನಿಂತುಕೊಂಡನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಒಂದು ದಿನ ಕೆಲವು ಇಸ್ರಾಯೇಲರು ಒಬ್ಬ ಮನುಷ್ಯನನ್ನು ಸಮಾಧಿಮಾಡಲು ಹೋಗುತ್ತಿದ್ದರು. ಆಗ, ಮೋವಾಬ್ಯರ ದಂಡು ಬರುತ್ತಿರುವುದನ್ನು ಕಂಡು, ಆ ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಆ ಶವ ಸಮಾಧಿಯ ಮೇಲೆಬಿದ್ದಾಗ, ಅದು ಎಲೀಷನ ಎಲುಬುಗಳಿಗೆ ತಗಲಿ ಜೀವ ಬಂದು ಎದ್ದು ನಿಂತನು. ಅಧ್ಯಾಯವನ್ನು ನೋಡಿ |